ಗುರುಪುರ ಶ್ರೀ ಜಂಗಮ ಸಂಸ್ಥಾನ ಮಠಕ್ಕೆ ಶನಿವಾರ ಕೇಂದ್ರ ಜಲಶಕ್ತಿ ಮತ್ತು ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು. ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕ ಡಾ.ಭರತ್ ಶೆಟ್ಟಿ, ಜಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಜಂಗಮ ಮಠದ ಶ್ರೀ ರುದ್ರಮುನಿ ಸ್ವಾಮೀಜಿ ಮೊದಲಾದವರಿದ್ದರು.
ಗುರುಪುರ: ಅಂದಾಜು 5 ಕೋಟಿ ರೂ. ವೆಚ್ಚದಲ್ಲಿ ಜೀರ್ಣೋದ್ಧಾರ ಕಾಮಗಾರಿ ನಡೆಯುತ್ತಿರುವ ಗುರುಪುರ ಶ್ರೀ ಜಂಗಮ ಸಂಸ್ಥಾನ ಮಠಕ್ಕೆ ಶನಿವಾರ ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು.
ಗುರುಪುರ ಜಂಗಮ ಸಂಸ್ಥಾನ ಮಠದ ಶ್ರೀ ರುದ್ರಮುನಿ ಸ್ವಾಮೀಜಿ, ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು ಸಚಿವ ಸೋಮಣ್ಣ ಅವರನ್ನು ಸನ್ಮಾನಿಸಿ, ಮನವಿ ನೀಡಿದರು. ಸಾವಿರಕ್ಕೂ ಹೆಚ್ಚು ವರ್ಷಗಳ ಇತಿಹಾಸವುಳ್ಳ ಗುರುಪುರ ಜಂಗಮ ಮಠದ ಅಭಿವೃದ್ಧಿ(ಜೀರ್ಣೋದ್ಧಾರ) ಕಾರ್ಯದಲ್ಲಿ ಊರವರು ಕೈಜೋಡಿಸಿದ್ದು, ದೊಡ್ಡಮಟ್ಟದ ಆರ್ಥಿಕ ನೆರವಿನ ಅಗತ್ಯವಿದೆ ಎಂದು ಮನವಿಯಲ್ಲಿ ಸಚಿವರಿಗೆ ಮನವರಿಕೆ ಮಾಡಲಾಯಿತು. ಇದೇ ವೇಳೆ ಸಚಿವರು ಶ್ರೀ ರುದ್ರಮುನಿ ಸ್ವಾಮೀಜಿ ಹಾಗೂ ಶ್ರೀ ರಾಜಶೇಖರಾನಂದ ಸ್ವಾಮೀಜಿ ಅವರನ್ನು ಸನ್ಮಾನಿಸಿದರು.
ಸನ್ಮಾನ ಹಾಗೂ ಮನವಿ ಸ್ವೀಕರಿಸಿದ ಸಚಿವ ಸೋಮಣ್ಣ ಮಾತನಾಡಿ, ವೀರಶೈವ ಮಠದ ಅಭಿವೃದ್ಧಿಯಲ್ಲಿ ಊರವರು ಕೈಜೋಡಿಸಿರುವುದು ಸಂತೋಷದ ಸಂಗತಿ. ಈ ಮಠಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಮಠದ ಸ್ವಾಮೀಜಿ ಹಾಗೂ ಜೀರ್ಣೋದ್ಧಾರ ಸಮಿತಿ ಕೈಗೊಂಡಿರುವ ಈ ಕಾರ್ಯಕ್ಕೆ ಅಗತ್ಯ ಸಹಕಾರ ನೀಡುವೆ. ಅತಿ ಶೀಘ್ರದಲ್ಲಿ ಜೀರ್ಣೋದ್ಧಾರ ಕೆಲಸ ಪೂರ್ಣಗೊಳ್ಳಲಿದೆ ಎಂದರು.
ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕ ಡಾ.ಭರತ್ ಶೆಟ್ಟಿ, ಜಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಜಂಗಮ ಮಠದ ಶ್ರೀ ರುದ್ರಮುನಿ ಸ್ವಾಮೀಜಿ, ಶ್ರೀ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಶ್ರೀಪಾದರು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸಚಿನ್ ಅಡಪ, ಸಚಿನ್ ಶೆಟ್ಟಿ ಗುರುಪುರ, ಲಕ್ಷ್ಮಣ್ ಶೆಟ್ಟಿಗಾರ ಗುರುಪುರ, ಗೋಕುಲ್ ಪ್ರಭು, ಪ್ರಮುಖರಾದ ಜಗದೀಶ ಅತಿಕಾರಿ, ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಸ್ಥಾಪಕಾಧ್ಯಕ್ಷ ತೋನ್ಸೆ ಜಯಕೃಷ್ಣ ಎ.ಶೆಟ್ಟಿ, ಡಾ.ರವಿರಾಜ ಶೆಟ್ಟಿ ಕಾರಮೊಗರುಗುತ್ತು, ಚಂದ್ರಹಾಸ ಪೂಜಾರಿ ಕೌಡೂರು ಭಂಡಾರಮನೆ, ಮಾಜಿ ಮೇಯರ್ ಕವಿತಾ ಸನಿಲ್, ಉಪ-ಮೇಯರ್ ಸುಮಂಗಲಾ ರಾವ್, ಬಿಜೆಪಿ ಪ್ರಮುಖರಾದ ಪೂಜಾ ಪೈ, ಅಮೃತಲಾಲ್ ಡಿ’ಸೋಜ, ಸುಧೀರ್ ಕಾಮತ್ ಗುರುಪುರ, ಶ್ರೀಕರ ವಿ.ಶೆಟ್ಟಿ ಗುರುಪುರ, ಸತೀಶ್ ಪೂಜಾರಿ ಬಳ್ಳಾಜೆ, ಸತೀಶ್ ಕುಲಾಲ್, ಹರೀಶ್ ಚಾಮಣಿ, ಮಾಜಿ ಕಾರ್ಪೊರೇಟರ್‌ಗಳಾದ ನಯನಾ ಕೋಟ್ಯಾನ್, ಬಬಿತಾ ಆರ್., ಗುರುಪುರ ಗ್ರಾಪಂ ಮಾಜಿ ಸದಸ್ಯರಾದ ಜಿ.ಎಂ. ಉದಯ ಭಟ್, ರಾಜೇಶ್ ಸುವರ್ಣ, ಸುನೀಲ್ ಪೂಜಾರಿ ಜಲ್ಲಿಗುಡ್ಡೆ ಹಾಗೂ ಮಠದ ಭಕ್ತರು ಇದ್ದರು.