ಮೂಲ್ಕಿ ಸುಂದರರಾಮ್ ಶೆಟ್ಟಿ ಕಾಲೇಜಿನಲ್ಲಿ ಮಾದಕ ವ್ಯಸನ ವಿರೋಧಿ ಜಾಗೃತಿ ಕಾರ್ಯಕ್ರಮ ನಡೆಯಿತು. ಪ್ರಮುಖರಾದ ಶ್ರೀಧರ್ ಕೆ.ಜೆ., ಮಂಜುನಾಥ್ ಅಡಿಗ, ಡಾ.ಮಿಥುನ್ ಚಕ್ರವರ್ತಿ ಮತ್ತಿತರರು ಉಪಸ್ಥಿತರಿದ್ದರು.  
ಉಡುಪಿ

ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಹಕಾರ

ಶಿರ್ವ: ಮಾದಕ ದ್ರವ್ಯ ವ್ಯಸನಮುಕ್ತ ಸಮಾಜದ ನಿರ್ಮಾಣಕ್ಕೆ ಪ್ರತಿಯೊಬ್ಬರು ಕೈ ಜೋಡಿಸಬೇಕು ಎಂದು ಅಸಿಸ್ಟೆಂಟ್ ಸಬ್ ಇನ್‌ಸ್ಪೆಕ್ಟರ್ ಶ್ರೀಧರ್ ಕೆ.ಜೆ. ಹೇಳಿದರು.

ಮೂಲ್ಕಿ ಸುಂದರ ರಾಮ್ ಶೆಟ್ಟಿ ಕಾಲೇಜಿನಲ್ಲಿ ಮಾದಕ ವ್ಯಸನ ವಿರೋಧಿ ಜಾಗೃತಿ ವೇದಿಕೆ ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶ ಆಶ್ರಯದಲ್ಲಿ ಹಮ್ಮಿಕೊಂಡ ಮಾದಕ-ಬಾಧಕ ಎಂಬ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಶುಕ್ರವಾರ ಮಾತನಾಡಿದರು.
ಹೆಡ್‌ಕಾನ್‌ಸ್ಟೆಬಲ್ ಮಂಜುನಾಥ್ ಅಡಿಗ, ಮಾದಕ ವಸ್ತು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ಪ್ರಾಂಶುಪಾಲ ಡಾ.ಮಿಥುನ್ ಚಕ್ರವರ್ತಿ ಅಧ್ಯಕ್ಷತೆ ವಹಿಸಿದ್ದರು. ಅಂತಿಮ ಬಿಕಾಂ ವಿದ್ಯಾರ್ಥಿನಿ ಕೀರ್ತನಾ ನಿರೂಪಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕ ಸುಹಾಸ್ ಜಟ್ಟಿಮನೆ ಸ್ವಾಗತಿಸಿದರು. ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಯೋಜಕಿ ಡಾ.ಸೋನಾ ಎಚ್.ಸಿ. ವಂದಿಸಿದರು.