ಎಕ್ಸೆಲ್ ಸಂಸ್ಥೆಯ ವಿದ್ಯಾಸಾಗರ ಕ್ಯಾಂಪಸ್‌ನಲ್ಲಿ ಸರಸ್ವತಿ ಗೋ ಮಂದಿರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಸುಮಂತ್‌ಕುಮಾರ್ ಜೈನ್ ಮಾತನಾಡಿದರು. ಅಕ್ಷಯ ಆಳ್ವ, ಡಾ.ಆನಂದ ಶೆಟ್ಟಿ, ಕೆ.ಪ್ರಸನ್ನ ಭಟ್, ಸಹನಾ ಜೈನ್ ಇತರರಿದ್ದರು.
ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ
ಎಕ್ಸೆಲ್ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷ ಸುಮಂತ್‌ಕುಮಾರ್ ಜೈನ್ ಅವರ ಜನ್ಮದಿನ ಪ್ರಯುಕ್ತ ಎಕ್ಸೆಲ್ ಕಾಲೇಜಿನ ವಿದ್ಯಾಸಾಗರ ಕ್ಯಾಂಪಸ್‌ನಲ್ಲಿ ಸರಸ್ವತಿ ಗೋ ಮಂದಿರವನ್ನು ಮಲೆನಾಡು ಗಿಡ್ಡ ತಳಿಗಳ ಸಂರಕ್ಷಣೆ ಹಾಗೂ ಸಂವರ್ಧನಾ ಅಭಿಯಾನದ ಸಂಟಕ ಅಕ್ಷಯ ಆಳ್ವ ಲೋಕಾರ್ಪಣೆಗೊಳಿಸಿದರು.
ಬಳಿಕ ಮಾತನಾಡಿದ ಅಕ್ಷಯ ಆಳ್ವ, ದೇಸಿ ತಳಿ ಗೋವುಗಳ ಸಂರಕ್ಷಣೆ ಭಾರತೀಯರಾದ ನಮ್ಮ ಆದ್ಯ ಕರ್ತವ್ಯ ಎಂದರು. ವಿಶ್ರಾಂತ ಪಶು ವೈದ್ಯಾಧಿಕಾರಿ ಡಾ.ಆನಂದ ಶೆಟ್ಟಿ, ಮಂಗಳೂರು ಜನತಾ ಬಜಾರ್ ಅಧ್ಯಕ್ಷ ಕೆ.ಪ್ರಸನ್ನ ಭಟ್ ಮುಖ್ಯ ಅತಿಥಿಗಳಾಗಿದ್ದರು. ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುವಾರ್ ಜೈನ್ ಅಧ್ಯಕ್ಷತೆ ವಹಿಸಿದ್ದರು. ಆನಂದ ಶೆಟ್ಟಿ ವಾತ್ಸಲ್ಯ, ಸುನೀಶ್ ಕುವಾರ್ ಕಡಂಬು, ಎಕ್ಸೆಲ್ ಸಂಸ್ಥೆಯ ಸಹನಾ ಜೈನ್, ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪ್ರಾಂಶುಪಾಲ ಡಾ.ನವೀನ್ ಕುವಾರ್ ಮರಿಕೆ ಸ್ವಾಗತಿಸಿದರು. ಅರಮಲೆಬೆಟ್ಟ ಕ್ಯಾಂಪಸ್ ಪ್ರಾಂಶುಪಾಲ ಡಾ.ಪ್ರಜ್ವಲ್ ಕಜೆ ವಂದಿಸಿದರು. ಉಪನ್ಯಾಸಕಿ ಅನನ್ಯಾ ಜೈನ್ ನಿರೂಪಿಸಿದರು. ದೇಸಿ ಮಲೆನಾಡು ಗಿಡ್ಡ ತಳಿಯ ಹಸು ಕರುಗಳಿಗೆ ಗೋಪೂಜೆ ನೇರವೇರಿಸಿ, ಗೋಶಾಲೆಗೆ ಚಾಲನೆ ನೀಡಲಾಯಿತು. ಸಾರ್ವಜನಿಕರು ಸಂಸ್ಥೆಯ ಕಾರ್ಯವನ್ನು ಶ್ಲಾಸಿದ್ದಾರೆ.
ಕೃಷಿ ಕುಟುಂಬದಿಂದ ಬಂದ ನಾನು ಹೈನುಗಾರಿಕೆ ಬಹಳ ಇಷ್ಟಪಟ್ಟವನು. ಇದೀಗ ಮಲೆನಾಡು ಗಿಡ್ಡ ಹಸುಗಳನ್ನೇ ನಮ್ಮ ಕ್ಯಾಂಪಸ್‌ನಲ್ಲಿ ಸಾಕಿ ಬೆಳೆಸುತ್ತೇವೆ.