ಶಾಲಾ ಮಕ್ಕಳಿಗೆ ಶಾಲೆಟ್ ಪಿಂಟೋ ಪುಸ್ತಕ ವಿತರಿಸಿದರು. ರವಿ ನಾಯ್ಕಾಪು, ಪ್ರದೀಪ್‌ಕುಮಾರ್ ಕಲ್ಕೂರ ಮೊದಲಾದವರಿದ್ದರು.
ಕಾಸರಗೋಡು: ಶುದ್ಧ ಹಾಗೂ ಸ್ಪಷ್ಟತೆ ಮೂಲಕ ಗಡಿನಾಡು ಕಾಸರಗೊಡಿನ ಕನ್ನಡ ಭಾಷೆ ಹೆಚ್ಚು ಶ್ರೀಮಂತಿಕೆಯಿಂದ ಕೂಡಿದೆ. ಬಹುಭಾಷಾ ಸಂಗಮ ಭೂಮಿಯಾಗಿರುವ ಕಾಸರಗೊಡಿನ ಸಾಂಸ್ಕೃತಿಕ ಪರಂಪರೆ ನಾಡಿಗೆ ಆದರ್ಶ ಎಂದು ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಶಾಲೆಟ್ ಪಿಂಟೋ ಅಭಿಪ್ರಾಯಪಟ್ಟರು.
ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇವಾಭಿವೃದ್ಧಿ ಸಂ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂ ಕಾಸರಗೋಡು ಜಿಲ್ಲಾ ಸಮಿತಿ ವತಿಯಿಂದ ಕಾಸರಗೋಡಿನಲ್ಲಿ ಆಯೋಜಿಸಿದ್ದ ಕನ್ನಡ ಶಾಲೆಗಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ವಾತನಾಡಿದರು.
ಗಡಿನಾಡ ಚೇತನ ಪ್ರಶಸ್ತಿ ಪುರಸ್ಕೃತ ಎನ್.ಚನಿಯಪ್ಪ ನಾಯ್ಕ ಅವರನ್ನು ಅಭಿನಂದಿಸಲಾಯಿತು. ಹಿರಿಯ ಪತ್ರಕರ್ತ ಪಿ.ಬಿ. ಹರೀಶ್ ರೈ ಅವರಿಗೆ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನಿಸಲಾಯಿತು. ಶಾಸಕ ಎನ್.ಎ. ನೆಲ್ಲಿಕುನ್ನು ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಿದರು.
ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇವಾಭಿವೃದ್ಧಿ ಸಂದ ಅಧ್ಯಕ್ಷ ರವಿ ನಾಯ್ಕಾಪು ಅಧ್ಯಕ್ಷತೆ ವಹಿಸಿದ್ದರು. ಕಾಸರಗೋಡು ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಸಂಸ್ಥಾಪಕ ಎಸ್. ಪ್ರದೀಪ್ ಕುವಾರ್ ಕಲ್ಕೂರ, ಪ್ರಮುಖರಾದ ಡಾ.ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ಸುಕೇಶ್ ಎ., ಅಖಿಲೇಶ್ ನಗುಮುಗಂ, ತೆಕ್ಕೇಕರೆ ಶಂಕರನಾರಾಯಣ ಭಟ್, ಕೆ.ಗಂಗಾಧರ ತೆಕ್ಕೆಮೂಲೆ, ಎ.ಆರ್. ಸುಬ್ಬಯ್ಯಕಟ್ಟೆ ಉಪಸ್ಥಿತರಿದ್ದರು.
ಪತ್ರಕರ್ತ ಪುರುಷೋತ್ತಮ ಪೆರ್ಲ ಸ್ವಾಗತಿಸಿದರು. ವೀಜಿ ಕಾಸರಗೋಡು ಕಾರ್ಯಕ್ರಮ ನಿರೂಪಿಸಿದರು. ರಾಧಾಕಷ್ಣ ಉಳಿಯತ್ತಡ್ಕ ಸಹಕರಿಸಿದರು. ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಕೆ.ಎಸ್. ವಂದಿಸಿದರು.