ಸೈಕಲ್ ಹಸ್ತಾಂತರ ಕಾರ್ಯಕ್ರಮ ನಡೆಯಿತು. ಪ್ರಮುಖರಾದ ಡಾ.ಅಶೋಕ್ ಕಾಮತ್, ಬಾಬಣ್ಣ ನಾಯ್ಕ, ಉಮಾ ಪಿ., ನಿತ್ಯಾನಂದ ಶೆಟ್ಟಿ, ಪ್ರತಿಭಾ, ಪ್ರಸಾದ್ ಹೆಗ್ಡೆ ಮಾರಾಳಿ, ಶೋಭಾ ಕೆ.ಪೂಜಾರಿ, ಕಮಲಾ, ಅವಿನಾಶ್ ರಾವ್ ಇದ್ದರು.  
ಉಡುಪಿ

ಸೈಕಲ್ ಸವಾರಿಯಿಂದ ಆತ್ಮವಿಶ್ವಾಸ ವೃದ್ಧಿ

ಇಂದಿರಾ ಎನ್ ಕೆ
ಕೊಕ್ಕರ್ಣೆ: ಈ ಯೋಜನೆ ಉಡುಪಿ ಜಿಲ್ಲೆಯಲ್ಲಿಯೇ ಪ್ರಥಮವಾಗಿದ್ದು ಮಾದರಿಯಾಗಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸೈಕಲ್ ಏರಿದರೆ ಅವರಲ್ಲಿ ಆತ್ಮವಿಶ್ವಾಸ ವೃದ್ಧಿಸುತ್ತದೆ. ದೊಡ್ಡ ವ್ಯಕ್ತಿಯಾಗಿ ಸಮಾಜದಲ್ಲಿ ಬದುಕುವ ಅವಕಾಶವನ್ನು ಕಾಣುತ್ತೇವೆ. ರಸ್ತೆಯಲ್ಲಿ ಸೈಕಲ್ ಓಡಿಸುವಾಗ ಏಕಾಗ್ರತೆ ಮತ್ತು ಜಾಗೃತೆ ಮುಖ್ಯ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಉಪನಿರ್ದೇಶಕ ಡಾ.ಅಶೋಕ್ ಕಾಮತ್ ಹೇಳಿದರು.
ನಾಲ್ಕೂರು ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ದಾನಿಗಳಿಂದ ನೀಡಲ್ಪಟ್ಟ ಸೈಕಲ್ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾತನಾಡಿದರು.
ಎಸ್.ಡಿ.ಎಂ.ಸಿ. ಉಪಾಧ್ಯಕ್ಷ ಬಾಬಣ್ಣ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾ ಪಿ., ಬ್ರಹ್ಮಾವರ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ನಿತ್ಯಾನಂದ ಶೆಟ್ಟಿ, ಕೊಕ್ಕರ್ಣೆ ಕ್ಲಸ್ಟರ್ ಸಿಆರ್‌ಪಿ ಪ್ರತಿಭಾ, ಜನಜಾಗೃತಿ ವೇದಿಕೆ ಬ್ರಹ್ಮಾವರ ತಾಲೂಕು ಅಧ್ಯಕ್ಷ ಪ್ರಸಾದ್ ಹೆಗ್ಡೆ ಮಾರಾಳಿ, ಗ್ರಾಪಂ ನಿಕಟಪೂರ್ವ ಅಧ್ಯಕ್ಷೆ ಶೋಭಾ ಕೆ.ಪೂಜಾರಿ, ಮಾಜಿ ಅಧ್ಯಕ್ಷೆ ಕಮಲಾ, ಸಿಎ ಅವಿನಾಶ್ ರಾವ್, ನ್ಯೂ ಕರ್ನಾಟಕ ಬಿಲ್ಡರ್ಸ್‌ ಬ್ರಹ್ಮಾವರ ಮಾಲೀಕ ಚೇತನ್ ಕುಮಾರ್ ಶೆಟ್ಟಿ, ಹಳೇ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಮಂಜುನಾಥ್ ಶೆಟ್ಟಿ ಹರಿಮಕ್ಕಿ, ಅಧ್ಯಕ್ಷ ರಾಘವೇಂದ್ರ ಕುಲಾಲ್, ಹಿರಿಯರಾದ ಕೋಟಿ ಕುಲಾಲ್, ಕೊಪ್ಪ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಕೃಷ್ಣ ನಾಯ್ಕ, ಶಿಕ್ಷಕ ವೃಂದ, ಎಸ್.ಡಿ.ಎಂ.ಸಿ., ಹಳೇ ವಿದ್ಯಾರ್ಥಿಗಳು, ಪಾಲಕರು, ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು. ಶಾಲಾ ಮುಖ್ಯಶಿಕ್ಷಕ ಕೃಷ್ಣ ನಾಯ್ಕ ಕೆ. ಸ್ವಾಗತಿಸಿ, ಪ್ರಸ್ತಾವನೆಗೈದರು. ಶಿಕ್ಷಕಿ ಜಯ ನಿರೂಪಿಸಿದರು. ಶಿಕ್ಷಕ ಲಕ್ಷ್ಮಣ ನಾಯ್ಕ ವಂದಿಸಿದರು.

ಸೈಕಲ್ ಓಡಿಸುವುದರಿಂದ ದೈಹಿಕ ಮತ್ತು ಮಾನಸಿಕ ಬಲ ಹೆಚ್ಚುತ್ತದೆ. ಗ್ರಾಮೀಣ ಭಾಗದ ಹೆಣ್ಣು ಮಕ್ಕಳು ದೂರದಿಂದ ಶಾಲೆಗೆ ಬರುವವರಿಗೆ ಸೈಕಲ್ ನೀಡಿರುವುದು ಸ್ವಾಗತಾರ್ಹ. ಸತತ ಎರಡು ವರ್ಷಗಳಿಂದ ಪ್ರತಿಶತ ನೂರು ಫಲಿತಾಂಶ ದಾಖಲಿಸಿರುವುದು ಶ್ಲಾಘನೀಯ. ಉಡುಪಿ ಜಿಲ್ಲೆಯಲ್ಲಿಯೇ ಈ ಬಾರಿ ಸೈಕಲ್ ವಿದ್ಯಾರ್ಥಿಗಳಿಗೆ ನೀಡಿರುವುದು ಮಾದರಿ.

— ಉಮಾ ಪಿ. ಕ್ಷೇತ್ರ ಶಿಕ್ಷಣಾಧಿಕಾರಿ ಬ್ರಹ್ಮಾವರ ತಾಲೂಕು