ಕೋಟ: ರಾಷ್ಟ್ರೀಯ ಹೆದ್ದಾರಿ 66ರ ಸಾಸ್ತಾನದ ವಾಬುಕಳ ಸರ್ಕಲ್‌ನಲ್ಲಿ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸೈಕಲ್ ಸವಾರ ಮೃತಪಟ್ಟಿದ್ದಾರೆ. ಹಂಗಾರಕಟ್ಟೆ ಅಂಚೆ ಕಚೇರಿಯಲ್ಲಿ ಅರೆಕಾಲಿಕ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದ ಬಾಳ್ಕುದ್ರು ನಿವಾಸಿ ರೊನಾಲ್ಡ್ ಲೂವಿಸ್(62) ಮೃತ ದುರ್ದೈವಿ.
ಉಡುಪಿ ಕಡೆಯಿಂದ ಕುಮಟಾ ಕಡೆಗೆ ಸಂಚರಿಸುತ್ತಿದ್ದ ಲಾರಿ ಸೈಕಲ್‌ಗೆ ಡಿಕ್ಕಿ ಹೊಡೆದಿದ್ದು, ಸೈಕಲ್‌ನಿಂದ ರಸ್ತೆಗೆ ಎಸೆಯಲ್ಪಟ್ಟ ರೊನಾಲ್ಡ್ ತಲೆಗೆ ಗಂಭೀರ ಗಾಯಗಳಾಗಿತ್ತು. ತಕ್ಷಣ ಸ್ಥಳೀಯರು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದರು. ಪರೀಕ್ಷಿಸಿದ ವೈದ್ಯರು ರೊನಾಲ್ಡ್ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.