ಉಡುಪಿ ಶಾಸಕ ಯಶ್ಪಾಲ್ ಸುವರ್ಣ.
* ಶಾಸಕ ಯಶ್ಪಾಲ್ ಸುವರ್ಣ ಮಾಹಿತಿ
ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ (ನಿ.) ಮುಳಿಹಿತ್ಲು ಮಂಗಳೂರು ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಫೆಡರೇಷನ್ನ ಅಧ್ಯಕ್ಷ ಹಾಗೂ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.
ಫೆಡರೇಷನ್ನ ಸದಸ್ಯರ ಮಕ್ಕಳು 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.85, ದ್ವಿತೀಯ ಪಿಯುಸಿ/ತತ್ಸಮಾನ ತಾಂತ್ರಿಕ ಪರೀಕ್ಷೆಯಲ್ಲಿ ಶೇ.80, 2024-25ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ 70, ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇ.60 ಅಂಕ ಗಳಿಸಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.
ಇತರ ವಿದ್ಯಾರ್ಥಿಗಳು 2025-26ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.95, ದ್ವಿತೀಯ ಪಿಯುಸಿ/ತತ್ಸಮಾನ ತಾಂತ್ರಿಕ ಪರೀಕ್ಷೆಯಲ್ಲಿ ಶೇ.85, 2024-25ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ 75, ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇ.70 ಅಂಕ ಗಳಿಸಿರಬೇಕು.
ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನವಾಗಿದ್ದು, ಮೀನುಗಾರಿಕಾ ಪ್ರಾಥಮಿಕ ಸಹಕಾರಿ ಸಂಘಗಳು ಮತ್ತು ಫೆಡರೇಷನ್ನ ಶಾಖಾ ಕಚೇರಿಗಳಲ್ಲಿ ಅರ್ಜಿ ಲಭ್ಯವಿದೆ. ಮಾಹಿತಿಗಾಗಿ ಮೊ.ಸಂ. 6364931790 ಸಂಪರ್ಕಿಸಬಹುದು. ಪ್ರತಿಭಾವಂತ ವಿದ್ಯಾರ್ಥಿಗಳು ಸದುಪಯೋಗ ಮಾಡಿಕೊಳ್ಳಬೇಕು ಎಂದು ಯಶ್ಪಾಲ್ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.