ಉಡುಪಿ ಶಾಸಕ ಯಶ್ಪಾಲ್ ಸುವರ್ಣ.
* ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮಾಹಿತಿ
* ಸಹಕಾರಿ ಮೀನು ಮಾರಾಟ ಫೆಡರೇಷನ್ನಿಂದ ಆಯೋಜನೆ
ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ವತಿಯಿಂದ ಉಡುಪಿ ಜಿಲ್ಲೆಯ 1,455 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ಸಮಾರಂಭ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮಲ್ಪೆಯ ಏಳೂರು ಮೊಗವೀರ ಭವನದಲ್ಲಿ ಜ.31ರಂದು ಮಧ್ಯಾಹ್ನ 3 ಗಂಟೆಗೆ ಆಯೋಜಿಸಲಾಗಿದೆ ಎಂದು ಫೆಡರೇಷನ್ನ ಅಧ್ಯಕ್ಷ ಹಾಗೂ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.
ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್. ಉದ್ಘಾಟಿಸಲಿದ್ದು, ಉಡುಪಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲ ಡಾ. ಅಶೋಕ್ ಕಾಮತ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಸಾಧಕರಿಗೆ ಸನ್ಮಾನ
2025ನೇ ಸಾಲಿನ ಸಹಕಾರ ರತ್ನ ಪ್ರಶಸ್ತಿ ಪುರಸತರಾದ ಮಲ್ಪೆ ಯಾಂತ್ರಿಕ (ಟ್ರಾಲ್) ದೋಣಿ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ರಾಮಚಂದ್ರ ಕುಂದರ್, ಮಲ್ಪೆ ಪರ್ಸೀನ್ ಮೀನುಗಾರರ ಸಂಘದ ಅಧ್ಯಕ್ಷ ನಾಗರಾಜ ಸುವರ್ಣ ಹಾಗೂ ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಚೆಸ್ ಪಂದ್ಯಾಟದಲ್ಲಿ ಕಂಚಿನ ಪದಕ ಗೆದ್ದ ಕ್ರೀಡಾ ಸಾಧಕಿ, ಇಂದ್ರಾಳಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ರಿಮಾ ರಾವ್ ಯು.ಬಿ. ಅವರನ್ನು ಸನ್ಮಾನಿಸಿ, ಗೌರವಿಸಲಾಗುವುದು.
ಮುಖ್ಯ ಅತಿಥಿಯಾಗಿ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ನಾರಾಯಣ ಕರ್ಕೇರ, ಮಲ್ಪೆ ಏಳೂರು ಮೊಗವೀರ ಮಹಾಜನ ಸಂಘದ ಅಧ್ಯಕ್ಷ ರತ್ನಾಕರ ಸಾಲ್ಯಾನ್, ಮಲ್ಪೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಗೋಪಾಲ ಸಿ. ಬಂಗೇರ, ಮತ್ಸ್ಯೋದ್ಯಮಿಗಳಾದ ಆನಂದ ಪಿ. ಸುವರ್ಣ, ಸಾಧು ಸಾಲ್ಯಾನ್, ಆಳ ಸಮುದ್ರ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸುಭಾಷ್ ಮೆಂಡನ್, ಮಲ್ಪೆ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಕುಂದರ್, ಕೋಟ ಪರ್ಸೀನ್ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ರಾಜೇಂದ್ರ ಸುವರ್ಣ, ಉಡುಪಿ ತಾಲೂಕು ಮಹಿಳಾ ಹಸಿ ಮೀನು ಮಾರಾಟಗಾರರ ಸಂಘದ ಅಧ್ಯಕ್ಷೆ ಬೇಬಿ ಎಚ್. ಸಾಲ್ಯಾನ್, ಮಲ್ಪೆ ಮಹಿಳಾ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷೆ ಗೀತಾ ಕರ್ಕೇರ, ನಗರಸಭೆಯ ಮಾಜಿ ಸದಸ್ಯರಾದ ಸುಂದರ ಕಲ್ಮಾಡಿ, ವಿಜಯ ಕೊಡವೂರು, ಯೋಗೀಶ್ ಸಾಲ್ಯಾನ್, ಲಕ್ಷ್ಮೀ ಮಂಜುನಾಥ್, ಎಡ್ಲಿನ್ ಕರ್ಕಡ ಪಾಲ್ಗೊಳ್ಳಲಿದ್ದಾರೆ ಎಂದು ಯಶ್ಪಾಲ್ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.