ವಿಜಯವಾಣಿ ಸುದ್ದಿಜಾಲ ಪಡುಬಿದ್ರಿ
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಐದನೇ ವರ್ಷದ ಉಡುಪಿ ಉಚ್ಚಿಲ ದಸರಾ-2026ರ ಅಂಗವಾಗಿ ಗುರುವಾರ ನಿತ್ಯ ಚಂಡಿಕಾಯಾಗ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿತು.
ಕ್ಷೇತ್ರದಲ್ಲಿ ಬೆಳಗ್ಗೆ ಉದಯ ಪೂಜೆ, ನವದುರ್ಗೆಯರಿಗೆ ಮಹಾ ಮಂಗಳಾರತಿ, ಮಹಾಪೂಜೆ, ಅನ್ನಸಂತರ್ಪಣೆ, ಪ್ರಸಾದ ವಿತರಣೆ, ನವದುರ್ಗೆಯರಿಗೆ ರಾತ್ರಿ ಮಹಾಪೂಜೆ ಹಾಗೂ ಶ್ರೀ ಅಂಬಿಕಾ ಕಲ್ಪೋಕ್ತ ಪೂಜೆ ನೆರವೇರಿಸಲಾಯಿತು.
ದಸರಾ ಮುಖ್ಯ ವೇದಿಕೆಯಲ್ಲಿ ಭಜನಾ ಸಂಕೀರ್ತನೆ, ಭಕ್ತಿಗಾನ ಸುಧೆ, ಧಾರ್ಮಿಕ ಪ್ರವಚನ, ಸುಮಂಗಲೆಯರಿಂದ ಸಾಮೂಹಿಕ ಕುಂಕುವಾರ್ಚನೆ ನಡೆಯಿತು. ಮೊಗವೀರ ಭವನದಲ್ಲಿ ನಡೆದ ರಂಗೋಲಿ ಸ್ಪರ್ಧೆ ಗಮನ ಸೆಳೆಯಿತು. ಬುಧವಾರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಂಗಳೂರಿನ ಗಾನ ನೃತ್ಯ ಅಕಾಡೆಮಿಯ ದ್ವಿತಿ ಡಿ.ಶೆಟ್ಟಿ ಹಾಗೂ ಶ್ರಾವಣಿ ಭಟ್ ನೃತ್ಯ ಕಾರ್ಯಕ್ರಮ ಮತ್ತು ಪುತ್ತೂರು ಜಗದೀಶ ಆಚಾರ್ಯ ಮತ್ತು ಬಳಗದ ಸಂಗೀತಗಾನ ಸಂಭ್ರಮ ಕಲಾಸಕ್ತರ ಮನಸೊರೆಗೊಂಡಿತು.
ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಗೌರವ ಸಲಹೆಗಾರ ನಾಡೋಜ ಜಿ.ಶಂಕರ್, ಅಧ್ಯಕ್ಷ ಜಯ ಸಿ.ಕೋಟ್ಯಾನ್ ಬೆಳ್ಳಂಪಳ್ಳಿ, ಉಪಾಧ್ಯಕ್ಷ ಮೋಹನ್ ಬೇಂಗ್ರೆ, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಗಿರಿಧರ ಸುವರ್ಣ, ಉಡುಪಿ ಉಚ್ಚಿಲ ದಸರಾ ಸಮಿತಿ ಅಧ್ಯಕ್ಷ ವಿನಯ್ ಕರ್ಕೇರ, ಮಹಿಳಾ ಸಂಚಾಲಕಿ ಸಂಧ್ಯಾದೀಪ ಸುನೀಲ್, ಮಹಿಳಾ ಮಹಾಜನ ಸಂಘ ಅಧ್ಯಕ್ಷೆ ಕವಿತಾ ಶರತ್, ಸಂ ಪ್ರಧಾನ ಕಾರ್ಯದರ್ಶಿ ಶರಣ್ ಕುವಾರ್ ಮಟ್ಟು, ಕೋಶಾಧಿಕಾರಿ ರತ್ನಾಕರ ಸಾಲ್ಯಾನ್, ಜಂಟಿ ಕಾರ್ಯದರ್ಶಿ ಸುಜಿತ್ ಸಾಲ್ಯಾನ್, ದಸರಾ ಸಮಿತಿ ಪ್ರಧಾನ ಕಾರ್ಯದರ್ಶಿ ಸತೀಶ್ ಕುಂದರ್, ನಾಲ್ಕುಪಟ್ನ ಮೊಗವೀರ ಸಂ ಅಧ್ಯಕ್ಷ ಮನೋಜ್ ಕಾಂಚನ್, ಮಹಿಳಾ ಸಂಘ ಅಧ್ಯಕ್ಷೆ ಸುಗುಣಾ ಕರ್ಕೇರ, ವಾಸುದೇವ ಸಾಲ್ಯಾನ್, ಗುಂಡು ಅಮೀನ್, ಸತೀಶ್ ಅಮೀನ್ ಪಡುಕರೆ ಮತ್ತಿತರರು ಉಪಸ್ಥಿತರಿದ್ದರು.
ಶ್ರೀ ಕಾತ್ಯಾಯಿನಿ ದೇವಿ ಆರಾಧನೆ ಬೆಳಗ್ಗೆ ಉದಯ ಪೂಜೆ, 9ಕ್ಕೆ ನಿತ್ಯ ಚಂಡಿಕಾಹೋಮ, ಮಧ್ಯಾಹ್ನ 12ಕ್ಕೆ ನವದುರ್ಗೆಯರಿಗೆ ಮಹಾಮಂಗಳಾರತಿ, 12.30ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ 6.30ರಿಂದ ಪ್ರಸಾದ ವಿತರಣೆ, ರಾತ್ರಿ 7.30ಕ್ಕೆ ನವದುರ್ಗೆಯರಿಗೆ ರಾತ್ರಿ ಮಹಾಪೂಜೆ, 8.30ಕ್ಕೆ ಶ್ರೀ ಮಹಿಷಮರ್ಧಿನಿ ಕಲ್ಪೋಕ್ತಪೂಜೆ ನಡೆಯಲಿದೆ. ಶ್ರೀಮತಿ ಶಾಲಿನಿ ಡಾ.ಜಿ.ಶಂಕರ್ ಸಭಾಂಗಣದಲ್ಲಿ ಬೆಳಗ್ಗೆ 9.30ರಿಂದ 11.30ರವರೆಗೆ ಭಜನಾ ಸಂಕೀರ್ತನೆ, ಮಧ್ಯಾಹ್ನ 12ರಿಂದ 4.45ರವರೆಗೆ ಮುದ್ದು ಮಕ್ಕಳಿಗಾಗಿ ಶ್ರೀ ಶಾರದಾ ವಾತೆ ಛದ್ಮವೇಷ ಸ್ಪರ್ಧೆ, ಸಂಜೆ 5ರಿಂದ 5.45ರವರೆಗೆ ಧಾರ್ಮಿಕ ಪ್ರವಚನ, 5.45ರಿಂದ 6.15ರವರೆಗೆ ಸುಮಂಗಲೆಯರಿಂದ ಸಾಮೂಹಿಕ ಕಂಕುವಾರ್ಚನೆ, 6.30ರಿಂದ ರಾತ್ರಿ 8ರವರೆಗೆ ನೃತ್ಯ ರೂಪಕ, 8ರಿಂದ 8.45ರವರೆಗೆ ನಾಟ್ಯ ವೈಭವ, 8.45ರಿಂದ ‘ಮಹಿಮೆದ ಅಪ್ಪೆ ಭಗವತಿ’ ತುಳು ನಾಟಕ ಪ್ರಸ್ತುತಿಗೊಳ್ಳಲಿದೆ.