death 
ಉಡುಪಿ

ಉಸಿರಾಟದ ಸಮಸ್ಯೆಯಿಂದ ಸಾವು

ಕುಂದಾಪುರ: ರಕ್ತ ಕಡಿಮೆಯಾಗಿ ಉಸಿರಾಟದ ಸಮಸ್ಯೆ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದ ಕೊರ್ಗಿ ಗ್ರಾಮದ ದೊಡ್ಡರೆಕಲ್ಲು ನಿವಾಸಿ ಮಂಜುನಾಥ ಭೋವಿ(55) ಎಂಬುವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಒಂದು ತಿಂಗಳಿನಿಂದ ರಕ್ತ ಕಡಿಮೆಯಾಗಿ ಕೋಟೇಶ್ವರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದ ಮಂಜುನಾಥ ಅವರನ್ನು ಉಸಿರಾಟದ ಸಮಸ್ಯೆಯಿಂದ ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ರಾತ್ರಿ ಮೂತ್ರ ವಿಸರ್ಜನೆಗೆ ಹೋಗಿದ್ದ ವೇಳೆ ಕುಸಿದು ಬಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕುಂದಾಪುರ ಗ್ರಾವಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.