ನಾಡ್ಪಾಲು ಗ್ರಾಮದ ಸೋಮೇಶ್ವರ ಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕಾಯಂ ಶಿಕ್ಷಕರನ್ನು ನೇಮಿಸುವಂತೆ ಆಗ್ರಹಿಸಿ ಗುರುವಾರ ವಿದ್ಯಾರ್ಥಿಗಳ ಪಾಲಕರು, ಗ್ರಾಮಸ್ಥರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಗುರುವಾರ ಶಾಲೆಯಲ್ಲಿ ಪ್ರತಿಭಟನೆ ನಡೆಸಿದರು. 
ಉಡುಪಿ

ಕಾಯಂ ಶಿಕ್ಷಕರ ನೇಮಕಕ್ಕೆ ಆಗ್ರಹ

ಹೆಬ್ರಿ: ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಸೋಮೇಶ್ವರ ಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕಾಯಂ ಶಿಕ್ಷಕರನ್ನು ನೇಮಿಸುವಂತೆ ಆಗ್ರಹಿಸಿ ಗುರುವಾರ ವಿದ್ಯಾರ್ಥಿಗಳ ಪಾಲಕರು, ಗ್ರಾಮಸ್ಥರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಗುರುವಾರ ಶಾಲೆಯಲ್ಲಿ ಪ್ರತಿಭಟನೆ ನಡೆಸಿದರು.
ಅತಿಥಿ ಶಿಕ್ಷಕರಿಂದ ಶಾಲೆ ನಡೆಯುವುದಿಲ್ಲ. ಸರ್ಕಾರಿ ಕಾಯಂ ಶಿಕ್ಷಕರನ್ನು ನೇಮಿಸುವಂತೆ ಗ್ರಾಮಸ್ಥರು ಒತ್ತಾಯಿಸಿದರು. ಕಾಯಂ ಶಿಕ್ಷಕರಿಲ್ಲದೆ ವಿದ್ಯಾರ್ಥಿಗಳ ಕಲಿಕೆಯ ತೊಂದರೆಯಾಗುತ್ತದೆ. ಮಕ್ಕಳ ಭವಿಷ್ಯದ ಬಗ್ಗೆ ನಮಗೆ ಆತಂಕವಿದೆ ಎಂದು ನಾಡ್ಪಾಲು ಗ್ರಾಮದ ಪ್ರಮುಖರು ಹಾಗೂ ಶಾಲಾಭಿವೃದ್ಧಿ ಸಮಿತಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಪಾಲಕರ ಮನವೊಲಿಸಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದರು. ಶಿಕ್ಷಣ ಇಲಾಖೆ ಅಧಿಕಾರಿಗಳು, ನಾಡ್ಪಾಲು ಗ್ರಾಪಂ ಅಧಿಕಾರಿಗಳು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹಾಗೂ ಸದಸ್ಯರು, ಹಳೇ ವಿದ್ಯಾರ್ಥಿಗಳು, ಸ್ಥಳೀಯರು, ಪ್ರಮುಖರಾದ ದಿನೇಶ ಹೆಗ್ಡೆ, ಜಗದೀಶ ಹೇರಳೆ, ವೆಂಕಟೇಶ ಶೆಟ್ಟಿ, ರಂಗನಾಥ ಪೂಜಾರಿ ಸೇರಿದಂತೆ ಮೊದಲಾದವರಿದ್ದರು.

ಕಾಯಂ ಶಿಕ್ಷಕರ ಕೊರತೆಯಿಂದ ಮಕ್ಕಳ ಕಲಿಕೆ ಮೇಲೆ ಪರಿಣಾಮ ಬೀರುತ್ತದೆ. ಮಕ್ಕಳ ಹಿತದೃಷ್ಟಿಯಿಂದ ಸೋಮೇಶ್ವರ ಪೇಟೆ ಶಾಲೆಗೆ ಕಾಯಂ ಶಿಕ್ಷಕರ ನಿಯೋಜನೆಯನ್ನು ಶ್ರೀದಲ್ಲಿ ವಾಡಬೇಕು.

— ದಿನೇಶ ಹೆಗ್ಡೆ, ನಾಡ್ಪಾಲು ಗ್ರಾಪಂ ಮಾಜಿ ಅಧ್ಯಕ್ಷ

ಸೋಮೇಶ್ವರ ಶಾಲೆ ಪಾಲಕರನ್ನು ಮನವೊಲಿಸಿದ್ದೇವೆ. ನಾಳೆಯಿಂದ ಮಕ್ಕಳನ್ನು ಶಾಲೆಗೆ ಕಳುಹಿಸುತ್ತಾರೆ. ಮೇಲಧಿಕಾರಿಗಳ ಅನುಮತಿ ಪಡೆದು ವಾರಕ್ಕೆ 3 ದಿನ ಸರ್ಕಾರಿ ಶಿಕ್ಷಕರ ನಿಯೋಜನೆ ವಾಡಲಾಗುವುದು. ಗ್ರಾಮಸ್ಥರು ಸಹಕಾರ ನೀಡಬೇಕು. ಮೂವರು ಆತಿಥಿ ಶಿಕ್ಷಕರು ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಾರೆ.

— ಗಿರಿಜಮ್ಮಾ, ಬಿ.ಇ.ಒ, ಕಾರ್ಕಳ