ಕುಂದಾಪುರದಲ್ಲಿ ದಿ.ಡಿ.ದೇವರಾಜ ಅರಸು 111ನೇ ಜನ್ಮ ದಿನಾಚರಿಸಲಾಯಿತು. ಪ್ರಮುಖರಾದ ರಶ್ಮಿ ಎಸ್.ಆರ್., ಪ್ರದೀಪ್ ಕುರುಡೇಕರ್ ಎಸ್., ಎಚ್.ಹರಿಪ್ರಸಾದ ಶೆಟ್ಟಿ ಕಾನ್ಮಕ್ಕಿ ಮೊದಲಾದವರಿದ್ದರು. 
ಉಡುಪಿ

ದೇವರಾಜ ಅರಸು ಸಾಮಾಜಿಕ ಕ್ರಾಂತಿಯ ಹರಿಕಾರ

ಕುಂದಾಪುರ: ರಾಜ್ಯದ ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ ಅರಸು ಸಾವಾಜಿಕ ಕ್ರಾಂತಿಯ ಹರಿಕಾರ. ಭೂಸುಧಾರಣೆ ಕಾಯ್ದೆ ಜಾರಿಗೊಳಿಸಿ ಶೋಷಿತರಿಗೆ ಮತ್ತು ಹಿಂದುಳಿದ ವರ್ಗಗಳಿಗೆ ನ್ಯಾಯ ಒದಗಿಸಿದ ಮಹಾನ್ ನಾಯಕ ಎಂದು ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್. ಹೇಳಿದರು.

ಕುಂದಾಪುರ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪುರಸಭೆ ಹಾಗೂ ಕುಂದಾಪುರ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಕುಂದಾಪುರದಲ್ಲಿ ಗುರುವಾರ ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ ಅರಸು 111ನೇ ಜನ್ಮದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ತಹಸೀಲ್ದಾರ್ ಪ್ರದೀಪ್ ಕುರುಡೇಕರ್ ಎಸ್. ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಹರಿಪ್ರಸಾದ ಶೆಟ್ಟಿ ಕಾನ್ಮಕ್ಕಿ, ಪುರಸಭೆ ಮುಖ್ಯಾಧಿಕಾರಿ ಆನಂದ ಜೆ., ಪಂಚಾಯತ್ ರಾಜ್ ಇಲಾಖೆ ಸಹಾಯಕ ನಿರ್ದೇಶಕ ಸುಧಾಕರ ಶೆಟ್ಟಿ, ಕುಂದಾಪುರ ಎಎಸೈ ಧರ್ಮೇಂದ್ರ, ಪುರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಪ್ರಭಾಕರ ವಿ., ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಮೇಶ ಕುಲಾಲ್, ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ, ಕುಂದಾಪುರ ತಾ.ಪಂ.ನ ಗುರುಮೂರ್ತಿ ಮೊದಲಾದವರಿದ್ದರು.
ಬಿದ್ಕಲ್‌ಕಟ್ಟೆ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ರಾವೇಂದ್ರ ಕಿಣಿ ಉಪನ್ಯಾಸ ನೀಡಿದರು. ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಆಶಾದೇವಿ ನಾಯಕ್ ಸ್ವಾಗತಿಸಿದರು. ಬೈಂದೂರು ವಿದ್ಯಾರ್ಥಿನಿಲಯದ ಮೇಲ್ವಿಚಾರಕ ಶಂಕರ ಗೌಡ ನಿರೂಪಿಸಿದರು.