ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ್ ಸಾಲ್ಯಾನ್ ಮದ್ಯವರ್ಜನ ಶಿಬಿರ ಉದ್ಘಾಟಿಸಿದರು. ಅಂಥೋನಿ ಫರ್ನಾಂಡಿಸ್, ಪ್ರಶಾಂತ್ ಸುವರ್ಣ ಮೊದಲಾದವರಿದ್ದರು.
ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳವು ಕೇವಲ ಧಾರ್ಮಿಕ ಕ್ಷೇತ್ರವಷ್ಟೇ ಅಲ್ಲ, ಸಮಾಜ ಸೇವೆಯ ಮಹಾನ್ ಕೇಂದ್ರವೂ ಹೌದು. ಶಿಕ್ಷಣ, ಆರೋಗ್ಯ, ಗ್ರಾಮಾಭಿವೃದ್ಧಿ, ಮಹಿಳಾ ಸಬಲೀಕರಣ, ಪರಿಸರ ಸಂರಕ್ಷಣೆ, ಸ್ವ-ಉದ್ಯೋಗ, ಯುವಜನರ ಅಭಿವೃದ್ಧಿ ಹಾಗೂ ಮದ್ಯವರ್ಜನೆಯಂತಹ ಅನೇಕ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಲಕ್ಷಾಂತರ ಜನರ ಬದುಕಿನಲ್ಲಿ ಆಶಾಕಿರಣ ಮೂಡಿಸಿದೆ ಎಂದು ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ್ ಸಾಲ್ಯಾನ್ ಹೇಳಿದರು.
ಪಡಂಗಡಿ ಸಹಕಾರಿ ಸಂಘದ ಸಭಾಭವನದಲ್ಲಿ ಮಂಗಳವಾರ ಆರಂಭಗೊಂಡ ಮದ್ಯವರ್ಜನ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಅಂಥೋನಿ ಫರ್ನಾಂಡಿಸ್ ಅಧ್ಯಕ್ಷತೆ ವಹಿಸಿದ್ದರು. ಪಡಂಗಡಿ ಗ್ರಾಪಂ ನಿಕಟಪೂರ್ವ ಅಧ್ಯಕ್ಷ ಪ್ರಶಾಂತ್ ಸುವರ್ಣ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಅಧ್ಯಕ್ಷ ಕೆ.ಎಸ್.ಗಿರೀಶ್, ಪ್ರಮುಖರಾದ ದಿನೇಶ್, ಸುಕೇಶಿನಿ, ಪಿ.ಕೆ.ರಾಜು ಪೂಜಾರಿ, ಶಾರದಾ ಆರ್.ರೈ, ಕಿಶೋರ್ ಹೆಗ್ಡೆ, ಕಾಸಿಂ ಮಲ್ಲಿಗೆಮನೆ, ಸುರೇಶ್ ಪೂಜಾರಿ, ವರದರಾಜ, ಹರೀಶ್ ಕೋಟ್ಯಾನ್, ವ್ಯವಸ್ಥಾಪನಾ ಸಮಿತಿ ಉಪಾಧ್ಯಕ್ಷರು, ಗೌರವ ಸಲಹೆಗಾರರು, ಕೋಶಾಧಿಕಾರಿ, ಪದಾಧಿಕಾರಿಗಳು, ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು, ತಾಲೂಕಿನ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು, ನವಜೀವನ ಸಮಿತಿ ಸದಸ್ಯರು, ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ಸದಸ್ಯರು, ಶಿಬಿರಾರ್ಥಿಗಳು ಉಪಸ್ಥಿತರಿದ್ದರು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪ್ರಾದೇಶಿಕ ವಿಭಾಗ ಉಡುಪಿ ಯೋಜನಾಧಿಕಾರಿ ಗಣೇಶ್ ಆಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಯೋಜನಾಧಿಕಾರಿ ಹರೀಶ್ ಆರ್.ಎಸ್. ಸ್ವಾಗತಿಸಿದರು. ಮೇಲ್ವಿಚಾರಕಿ ಯಶೋದಾ ವಂದಿಸಿದರು. ಶಿಬಿರಾಧಿಕಾರಿ ದೇವಿಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.