ಸಿದ್ದಾಪುರ ಏತ ನೀರಾವರಿ ಯೋಜನೆ ಸಮಸ್ಯೆ ಕುರಿತಂತೆ ವಾಜಿ ಶಾಸಕ ಕೆ.ಗೋಪಾಲ ಪೂಜಾರಿ ಅವರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುವಾರ್ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು.  
ಉಡುಪಿ

ಏತ ನೀರಾವರಿ ಸಮಸ್ಯೆ ಬಗ್ಗೆ ಸಿಎಂ, ಡಿಸಿಎಂ ಜತೆ ಚರ್ಚೆ

ಕುಂದಾಪುರ: ಸಿದ್ದಾಪುರ ಏತ ನೀರಾವರಿ ಯೋಜನೆಯ ಪ್ರಸ್ತುತ ಗೊಂದಲ ಬಗೆಹರಿಸಲು ಒತ್ತಾಯಿಸಿ ಬೈಂದೂರು ವಾಜಿ ಶಾಸಕ ಕೆ.ಗೋಪಾಲ ಪೂಜಾರಿ ಅವರು ಮಂಗಳವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುವಾರ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿ, ಮನವಿ ಸಲ್ಲಿಸಿದರು.
ಪ್ರಸ್ತಾವಿತ ಸ್ಥಳದಲ್ಲಿ ಕಾಮಗಾರಿ ಮುಂದುವರಿಸುವುದರಿಂದ ಭವಿಷ್ಯದಲ್ಲಿ ಉಂಟಾಗುವ ಸಮಸ್ಯೆಗಳ ಕುರಿತು ಮನವರಿಕೆ ಮಾಡಿದ ಗೋಪಾಲ ಪೂಜಾರಿ, ತಾಂತ್ರಿಕ ತಜ್ಞರ ಅಭಿಪ್ರಾಯ ಪಡೆದುಕೊಂಡು ಈಗಾಗಲೇ ಸೂಚಿತವಾಗಿರುವ ಪ್ರದೇಶಗಳಿಗೆ ನೀರುಣಿಸಲು, ಆದ್ಯತೆಯ ನೆಲೆಯಲ್ಲಿ ಏತ ನೀರಾವರಿ ಯೋಜನೆ ಪರಿಗಣಿಸುವಂತೆ ಮನವಿ ಮಾಡಿದರು.
ಸಿಎಂ ಹಾಗೂ ಡಿಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಶ್ರೀದಲ್ಲೇ ವಾರಾಹಿ ನೀರಾವರಿ ಯೋಜನಾ ಪ್ರದೇಶಕ್ಕೆ ಭೇಟಿ ನೀಡುವುದಾಗಿ ಜಲಸಂಪನ್ಮೂಲ ಸಚಿವರಾಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ.
ಕರ್ನಾಟಕ ನೀರಾವರಿ ನಿಗಮದ ಆಡಳಿತ ನಿರ್ದೇಶಕ ರಾಜೇಶ್ ಅಮ್ಮಿನಭಾವಿ, ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಿತಿ ಅಧ್ಯಕ್ಷ ಹರೀಶ್ ತೋಳಾರ್ ಹಾಗೂ ಇತರ ಅಧಿಕಾರಿಗಳು ಇದ್ದರು.