ಕೇಂದ್ರ ಬಿಜೆಪಿ ಸರ್ಕಾರ ಜಾತಿ ತಾರತಮ್ಯ ನೀತಿ ವಿರೋಧಿಸಿ ಹಾಗೂ ರಾಹುಲ್ ಗಾಂಧಿ ವಿರುದ್ಧದ ಪ್ರಕರಣ ಹಿಂಪಡೆಯುವಂತೆ ಒತ್ತಾಯಿಸಿ ಉಡುಪಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರತಿಭಟಿಸಿತು. ಎಂ.ಎ. ಗಫೂರ್, ವೆರೋನಿಕಾ ಕರ್ನೇಲಿಯೋ, ಗೀತಾ ವಾಗ್ಳೆ, ಜ್ಯೋತಿ ಹೆಬ್ಬಾರ್, ರಮೇಶ್ ಕಾಂಚನ್, ಪ್ರಖ್ಯಾತ್ ಶೆಟ್ಟಿ ಇತರರಿದ್ದರು.
* ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಎಂ.ಎ. ಗಫೂರ್ ಆಕ್ರೋಶ
* ಉಡುಪಿಯ ಬ್ರಹ್ಮಗಿರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರತಿಭಟನೆ
ಉಡುಪಿ: ದೇಶದಲ್ಲಿ ಯಾರು ನ್ಯಾಯದ ಪರವಾಗಿ, ಅಗತ್ಯವಿರುವ ಬೇಡಿಕೆ ಈಡೇರಿಸುವಂತೆ ಪ್ರತಿಭಟಿಸುತ್ತಾರೋ ಅವರ ವಿರುದ್ಧವೇ ಕೇಸ್ ದಾಖಲಿಸುವ ಕೆಟ್ಟ ಸಂಸ್ಕೃತಿಯನ್ನು ಕೇಂದ್ರ ಬಿಜೆಪಿ ಸರ್ಕಾರ ಅನುಸರಿಸುತ್ತಿದೆ. ಉತ್ತರಾಖಂಡ್ನಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ್ದ ಜಾಗವನ್ನು ಗಂಗಾಜಲದಿಂದ ಶುದ್ಧೀಕರಣ ಮಾಡಿರುವುದು ಅಸಹನೀಯ. ದೇಶದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ ಆಗುತ್ತಲಿದೆ ಎಂದು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರದ ಜಾತಿ ತಾರತಮ್ಯದ ವಿರುದ್ಧ ಹಾಗೂ ರಾಹುಲ್ ಗಾಂಧಿ ಮೇಲೆ ಹಾಕಿರುವ ಕೇಸ್ ಹಿಂಪಡೆಯುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬ್ರಹ್ಮಗಿರಿ ಸರ್ಕಲ್ನಲ್ಲಿ ಮಂಗಳವಾರ (ಸೆ.1) ಸಂಜೆ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು.
ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ
ಯಾರು ಸ್ಥಳ ಶುಧ್ಧೀಕರಣ ಮಾಡಿದ್ದಾರೋ ಅವರ ವಿರುದ್ಧ ಎಸ್ಸಿ, ಎಸ್ಟಿ ದೌರ್ಜನ್ಯ ನಿಯಂತ್ರಣ ಕಾಯ್ದೆಯಡಿ ಕ್ರಮ ಕೈಗೊಳ್ಳಲೇಬೇಕು. ರಾಹುಲ್ ಗಾಂಧಿ ಅವರನ್ನು ದಮನಿಸಲು ಬಿಜೆಪಿ ನಾಯಕರು ಎಲ್ಲ ರೀತಿಯ ಕಾರ್ಯ ಮಾಡುತ್ತಿದ್ದಾರೆ. ರಾಜಕೀಯವಾಗಿ ಬೆಳೆಯುತ್ತಿರುವ ಅವರನ್ನು ಅವಮಾನಿಸುತ್ತಲೇ ಇದ್ದಾರೆ. ಇದೀಗ ಅವರ ವಿರುದ್ಧವೇ ದಲಿತರ ವಿರುದ್ಧ ಮಾತನಾಡಿದ್ದಾರೆಂದು ಎಫ್ಐಆರ್ ದಾಖಲಿಸಿರುವುದು ಖಂಡನೀಯ. ಸಂವಿಧಾನ ಉಳಿಸಿ, ಸಾಮಾಜಿಕ ನ್ಯಾಯ ರಕ್ಷಿಸಬೇಕಿದೆ ಎಂದರು.
ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೇಲಿಯೋ, ಕೆಪಿಸಿಸಿ ಸದಸ್ಯೆ ಗೀತಾ ವಾಗ್ಳೆ, ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಗಣನಾಥ್ ಶೆಟ್ಟಿ ಎಕ್ಕಾರು, ಬಿ.ನರಸಿಂಹಮೂರ್ತಿ, ಜಿಲ್ಲಾ ವಕ್ತಾರ ಭಾಸ್ಕರ್ ರಾವ್ ಕಿದಿಯೂರು, ಮಹಾಬಲ ಕುಂದರ್, ಪ್ರಖ್ಯಾತ್ ಶೆಟ್ಟಿ, ಗೋಫಿನಾಥ್ ಭಟ್, ಸುರೇಶ್ ಶೆಟ್ಟಿ ಬನ್ನಂಜೆ, ಮೀನಾಕ್ಷಿ ಮಾಧವ ಬನ್ನಂಜೆ, ರೋಶನಿ ಒಲಿವೆರಾ, ಡಾ. ಸುನೀತಾ ಶೆಟ್ಟಿ, ಶಶಿಧರ್ ಶೆಟ್ಟಿ ಎಲ್ಲೂರು, ಜಯಕುಮಾರ್, ಕಿಶೋರ್ ಎಮಾರ್ಳ್, ಕಿರಣ್ ಹೆಗಡೆ, ಉದ್ಯಾವರ ನಾಗೇಶಕುಮಾರ್, ಸದಾನಂದ್ ಕಾಂಚನ್, ಗಣೇಶ್ ನೆರ್ಗಿ, ಗಣೇಶ್ ಸರಳಬೆಟ್ಟು, ಸತೀಶ್ ಮಂಚಿ ಇನ್ನಿತರರು ಉಪಸ್ಥಿತರಿದ್ದರು.