ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪರ್ಯಾಯ ಶೀರೂರು ಮಠದ ವೇದವರ್ಧನ ಶ್ರೀಪಾದರನ್ನು ಸನ್ಮಾನಿಸಿದರು. ಸ್ವರೂಪಾ ಟಿ.ಕೆ., ಡಾ. ಉದಯಕುಮಾರ್ ಸರಳತ್ತಾಯ, ಅಶೋಕಕುಮಾರ್ ಕೊಡವೂರು, ಮುಖಂಡರಾದ ಪ್ರಸಾದ್ ಕಾಂಚನ್, ರಮೇಶ್ ಕಾಂಚನ್ ಇತರರಿದ್ದರು.
* ಉಡುಪಿ ಪರ್ಯಾಯ ಶೀರೂರು ಶ್ರೀಗಳಿಗೆ ಸನ್ಮಾನ
ಉಡುಪಿ: ಉಡುಪಿಯ ಶ್ರೀಕೃಷ್ಣ ಮಠಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಭಾನುವಾರ (ಜ.25) ಮಧ್ಯಾಹ್ನ ಭೇಟಿ ನೀಡಿದರು. ಕನಕನ ಕಿಂಡಿ ಮೂಲಕ ಹಾಗೂ ದೇವಳದೊಳಗೆ ನವಗ್ರಹ ಕಿಂಡಿ ಮೂಲಕ ಶ್ರೀಕೃಷ್ಣನ ದರ್ಶನ ಪಡೆದರು.
ದೇವರ ದರ್ಶನ ಬಳಿಕ ಪರ್ಯಾಯ ಸರ್ವಜ್ಞ ಪೀಠ ಅಲಂಕರಿಸಿರುವ ಶೀರೂರು ಮಠದ ವೇದವರ್ಧನ ತೀರ್ಥ ಶ್ರೀಪಾದರನ್ನು ಭೇಟಿಯಾದರು. ಪರ್ಯಾಯದ ಹಿನ್ನೆಲೆಯಲ್ಲಿ ಶ್ರೀಪಾದರನ್ನು ಸನ್ಮಾನಿಸಿ ಆಶೀರ್ವಾದ ಮಂತ್ರಾಕ್ಷತೆ ಪಡೆದರು. ಮಠದ ದಿವಾನ ಡಾ. ಉದಯಕುಮಾರ್ ಸರಳತ್ತಾಯ ಇದ್ದರು.
ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ., ಕರಾವಳಿ ಅಭಿವೃದ್ಧಿ ಮಂಡಳಿ ಮಂಗಳೂರು ಅಧ್ಯಕ್ಷ ಎಂ.ಎ. ಗಫೂರ್, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಶೋಕಕುಮಾರ್ ಕೊಡವೂರು, ಮುಖಂಡರಾದ ಪ್ರಸಾದ್ ಕಾಂಚನ್, ರಮೇಶ್ ಕಾಂಚನ್ ಇನ್ನಿತರರು ಉಪಸ್ಥಿತರಿದ್ದರು.