ಮರವಂತೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಟ್ರೋಫಿ ಜಿಲ್ಲಾಮಟ್ಟದ ಹಗ್ಗಜಗ್ಗಾಟ ಸ್ಪರ್ಧೆ ನಡೆಯಿತು. ಅಶೋಕ್ ಪೂಜಾರಿ, ಕೆ.ಗೋಪಾಲ ಪೂಜಾರಿ ಇತರರು ಇದ್ದರು. 
ಉಡುಪಿ

ಜಿಲ್ಲಾಮಟ್ಟದ ಹೊನಲು ಬೆಳಕಿನ ಹಗ್ಗ ಜಗ್ಗಾಟ ಸ್ಪರ್ಧೆ

ಕುಂದಾಪುರ: ಮರವಂತೆ ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಮಾಜ ಸೇವಾ ಸಂಘದ ನೂತನ ಕಟ್ಟಡ ನಿರ್ಮಾಣದ ಅಂಗವಾಗಿ ಉಡುಪಿ ಜಿಲ್ಲಾಮಟ್ಟದ ಹೊನಲು ಬೆಳಕಿನ ಹಗ್ಗ ಜಗ್ಗಾಟ ಸ್ಪರ್ಧೆ ಬ್ರಹ್ಮಶ್ರೀ ನಾರಾಯಣಗುರು ಟ್ರೋಫಿ-2026 ಮರವಂತೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಡೆಯಿತು.
ಕುಂದಾಪುರ ಬಿಲ್ಲವ ಸಂಘದ ಅಧ್ಯಕ್ಷ ಅಶೋಕ್ ಪೂಜಾರಿ ಪಂದ್ಯಾಟಕ್ಕೆ ಚಾಲನೆ ನೀಡಿದರು. ಡಾ.ಗೋವಿಂದ ಬಾಬು ಪೂಜಾರಿ ಬಿಲ್ಲವ ಸಂಘದ ನೂತನ ಕಟ್ಟಡ ನಿರ್ಮಾಣದ ನೀಲಿನಕಾಶೆಯನ್ನು ಬಿಡುಗಡೆಗೊಳಿಸಿದರು.
ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಮಾತನಾಡಿದರು. ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ನಿವೃತ್ತ ಉದ್ಯೋಗಿ ಸೋಮಯ್ಯ ಬಿಲ್ಲವ ಅವರನ್ನು ಗೌರವಿಸಲಾಯಿತು.
ಗೋವಾ ಉದ್ಯಮಿ ಸತೀಶ ಪೂಜಾರಿ, ಶಂಕರ ಬಿಲ್ಲವ, ಸಂಜು ಪೂಜಾರಿ, ಪುಟ್ಟಯ್ಯ ಬಿಲ್ಲವ, ಜಿಪಂ ಮಾಜಿ ಅಧ್ಯಕ್ಷ ರಾಜು ಪೂಜಾರಿ, ಅನಿತಾ ಆರ್.ಕೆ., ಪಾರ್ವತಿ ಪೂಜಾರಿ, ಗಂಗೊಳ್ಳಿ ಠಾಣೆ ಪಿಎಸ್‌ಐ ಪವನ್ ನಾಯಕ್ ಉಪಸ್ಥಿತರಿದ್ದರು.
ಬಿಲ್ಲವ ಸಂಘ ಮರವಂತೆ ಅಧ್ಯಕ್ಷ ಗಣೇಶ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪುರುಷರು ಮತ್ತು ಮಹಿಳಾ ವಿಭಾಗದ ಹಗ್ಗಜಗ್ಗಾಟ ಪಂದ್ಯಾಟ ಜರುಗಿತು.