ಭಾರತೀಯ ರೆಡ್ಕ್ರಾಸ್ ಕರ್ನಾಟಕ ಘಟಕದ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ ಉದ್ಘಾಟಿಸಿದರು.
ಉಡುಪಿ: ಪ್ರತಿಯೊಬ್ಬ ವ್ಯಕ್ತಿಯಲ್ಲಿ ಸೃಜನಶೀಲತೆ ಅಂತರ್ಗತವಾಗಿರುತ್ತದೆ. ಈ ಶಕ್ತಿ ಬೆಳಕಿಗೆ ಬರಲು ಪರಿಣಾಮಕಾರಿ ತರಬೇತಿ ಅಗತ್ಯವಾಗಿದೆ. ಇದರಿಂದ ಅನುಭವ ಪಕ್ವಗೊಳ್ಳುತ್ತದೆ ಎಂದು ಭಾರತೀಯ ರೆಡ್ಕ್ರಾಸ್ ಕರ್ನಾಟಕ ಘಟಕದ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ ಹೇಳಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಭಾರತೀಯ ರೆಡ್ಕ್ರಾಸ್ ಘಟಕ ಸಂಯುಕ್ತ ಆಶ್ರಯದಲ್ಲಿ ನಡೆದ ವ್ಯಕ್ತಿ ವಿಕಸನ ಕುರಿತ ಜಿಲ್ಲಾ ಮಟ್ಟದ ತರಬೇತಿ ಶಿಬಿರ ಉದ್ಘಾಟಿಸಿ ಮಾತಾನಾಡಿದರು.
ಸಭೆಯ ಅಧ್ಯಕ್ಷತೆಯನ್ನು ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಪ್ರಾಂಶುಪಾಲ ಪ್ರೊ. ನಿತ್ಯಾನಂದ ಗಾಂವ್ಕರ್ ವಹಿಸಿದ್ದರು.
ರೆಡ್ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು ಪ್ರಸ್ತಾವಿಕವಾಗಿ ಮಾತಾನಾಡಿದರು. ಡಾ. ವಿವೇಕಾನಂದ ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ರೆಡ್ಕ್ರಾಸ್ನ ಆಡಳಿತ ಮಂಡಳಿಯ ಸದಸ್ಯ ಟಿ. ಚಂದ್ರಶೇಖರ್ ಅತಿಥಿಗಳಾಗಿದ್ದರು. ಹುಬ್ಬಳ್ಳಿ ಎಸಿಟಿ ಕೇಂದ್ರ ಮುಖ್ಯಸ್ಥ ಯಶವಂತಿ ಉಪಸ್ಥಿತರಿದ್ದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಶೆಟ್ಟಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿಯರಾದ ಪ್ರೇಮಾ ಮತ್ತು ರಾಧಿಕಾ ಪ್ರಾರ್ಥಿಸಿದರು.