ಎಸ್‌ಐಆರ್ ಮಾಹಿತಿ ಕಾರ್ಯಾಗಾರದಲ್ಲಿ ಉಪ ತಹಸೀಲ್ದಾರ್ ನವೀನ್ ಕುಮಾರ್ ಬೆಂಜನಪದವು ಮಾತನಾಡಿದರು. ಜಾಗೃತ ಕರ್ನಾಟಕ ಬೆಂಗಳೂರು ತಂಡದ ಸದಸ್ಯ ನಿಸಾರ್ ಅಹ್ಮದ್, ಜಮೀಯ್ಯತುಲ್ ಫಲಾಹ್ ಅಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ ಮೊದಲಾದವರಿದ್ದರು. 
ಉಡುಪಿ

ಎಸ್‌ಐಆರ್ ಬಗ್ಗೆ ಭಯ, ಗೊಂದಲ ಬೇಡ

ಬಂಟ್ವಾಳ: ಎಸ್‌ಐಆರ್ ಬಗ್ಗೆ ಭಯ, ಗೊಂದಲ ಬೇಡ. ಎ.ಐಆರ್ ಪ್ರಕ್ರಿಯೆಗೆ ಒಂದು ತಿಂಗಳ ಕಾಲಾವಕಾಶವಿದ್ದು, ಆಯಾಯ ಬೂತ್‌ಮಟ್ಟದ ಅಧಿಕಾರಿ(ಬಿ.ಎಲ್.ಒ) ಗಳಿಗೆ ಈಗಾಗಲೇ ತರಬೇತಿ ನೀಡಲಾಗಿದ್ದು, ಅವರು ಸಂಪೂರ್ಣವಾಗಿ ಸಹಕಾರ ನೀಡಲಿದ್ದಾರೆ ಎಂದು ಬಂಟ್ವಾಳ ಉಪ ತಹಸೀಲ್ದಾರ್ ನವೀನ್ ಕುಮಾರ್ ಬೆಂಜನಪದವು ಹೇಳಿದರು.
ಜಮೀಯ್ಯತುಲ್ ಫಲಾಹ್ ಬಂಟ್ವಾಳ ತಾಲೂಕು ಘಟಕ ಹಾಗೂ ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಜಂಟಿ ಆಶ್ರಯದಲ್ಲಿ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಬುಧವಾರ ಎಸ್‌ಐಆರ್ ಮಾಹಿತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.
ಸಂಪನ್ಮೂಲವ್ಯಕ್ತಿ ಜಾಗೃತ ಕರ್ನಾಟಕ ಬೆಂಗಳೂರು ತಂಡದ ಸದಸ್ಯ ನಿಸಾರ್ ಅಹ್ಮದ್ ಎಸ್‌ಐಆರ್ ಪ್ರಕ್ರಿಯೆ ಬಗ್ಗೆ ಮಾಹಿತಿ ನೀಡಿದರು. ಜಮೀಯ್ಯತುಲ್ ಫಲಾಹ್ ಅಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ ಉದ್ಘಾಟಿಸಿದರು. ಸಂಯುಕ್ತ ಜಮಾಅತ್ ಅಧ್ಯಕ್ಷ ಹಾಜಿ ಮಹಮ್ಮದ್ ಹನೀಫ್ ಗೋಳ್ತಮಜಲು ಅಧ್ಯಕ್ಷತೆ ವಹಿಸಿದ್ದರು.
ಸಂಯುಕ್ತ ಜಮಾಅತ್ ಕೋಶಾಧಿಕಾರಿ ಹಾಜಿ ಪಿ.ಎಸ್.ಅಬ್ದುಲ್ ಹಮೀದ್ ನೆಹರು ನಗರ, ಜಮೀಯ್ಯತುಲ್ ಫಲಾಹ್ ಕೋಶಾಧಿಕಾರಿ ಲತೀಫ್ ನೇರಳಕಟ್ಟೆ, ಜಮೀಯ್ಯತುಲ್ ಫಲಾಹ್ ಮಾಜಿ ಜಿಲ್ಲಾಧ್ಯಕ್ಷ ಕೆ.ಕೆ.ಸಾಹುಲ್ ಹಮೀದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮಂಗಳವಾರ ನಿಧನರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನಕ್ಕೆ ಸಂತಾಪ ಸೂಚಿಸಿ ಪ್ರಾರ್ಥಿಸಲಾಯಿತು. ಸಂಯುಕ್ತ ಜಮಾಅತ್ ಪ್ರಧಾನ ಕಾರ್ಯದರ್ಶಿ ನೋಟರಿ ಅಬೂಬಕ್ಕರ್ ವಿಟ್ಲ ಸ್ವಾಗತಿಸಿದರು. ಹಾಜಿ ಬಿ.ಎ.ಮಹಮ್ಮದ್ ಬಂಟ್ವಾಳ ವಂದಿಸಿದರು. ಜಮೀಯ್ಯತುಲ್ ಫಲಾಹ್ ಪ್ರಧಾನ ಕಾರ್ಯದರ್ಶಿ ಹಕೀಂ ಕಲಾಯಿ ಕಾರ್ಯಕ್ರಮ ನಿರೂಪಿಸಿದರು.
*ಬಿಟಿಡಬ್ಲ್ಯು_ಜೂ25_ 6
ಎಸ್‌ಐಆರ್ ಮಾಹಿತಿ ಕಾರ್ಯಾಗಾರದಲ್ಲಿ ಉಪ ತಹಸೀಲ್ದಾರ್ ನವೀನ್ ಕುಮಾರ್ ಬೆಂಜನಪದವು ಮಾತನಾಡಿದರು. ಜಾಗೃತ ಕರ್ನಾಟಕ ಬೆಂಗಳೂರು ತಂಡದ ಸದಸ್ಯ ನಿಸಾರ್ ಅಹ್ಮದ್, ಜಮೀಯ್ಯತುಲ್ ಫಲಾಹ್ ಅಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ ಮೊದಲಾದವರಿದ್ದರು.