ಮೂಡುಬಿದಿರೆಯ ನಿವಾಸದಲ್ಲಿ ಉಡುಪಿ ತಾಲೂಕು ಕಸಾಪ ಘಟಕದ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಡಾ. ಮೋಹನ್ ಆಳ್ವ ಬಿಡುಗಡೆ ಮಾಡಿದರು. ರವಿರಾಜ್ ಎಚ್.ಪಿ., ಯು.ವಿಶ್ವನಾಥ್ ಶೆಣೈ, ಪ್ರೊ. ಶಂಕರ್, ಜನಾರ್ದನ್ ಕೊಡವೂರು, ರಂಜನಿ ವಸಂತ್, ರಾಜೇಶ್ ಭಟ್ ಪಣಿಯಾಡಿ ಇತರರಿದ್ದರು.
* ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವ ಆಶಯ
* ಉಡುಪಿ ತಾಲೂಕು ಕಸಾಪ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ
ಉಡುಪಿ: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ವತಿಯಿಂದ ಮೇ 3ರಂದು ಡಾ. ಭಾಸ್ಕರಾನಂದ ಕುಮಾರ್ ಸರ್ವಾಧ್ಯಕ್ಷತೆಯಲ್ಲಿ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ಸಂತಸದ ವಿಚಾರ. ನಾವಿಬ್ಬರೂ ಒಟ್ಟಿಗೆ ರಂಗದಲ್ಲಿ ನಟಿಸಿದ್ದು, ಅವರು ಆತ್ಮೀಯರೂ ಹೌದು. ಹೀಗಾಗಿ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ನನಗೆ ಖುಷಿ ಆಗುತ್ತಿದೆ. ಉಡುಪಿಯ ಎಲ್ಲ ಸಾಹಿತ್ಯಾಭಿಮಾನಿಗಳು ಪಾಲ್ಗೊಳ್ಳಬೇಕು. ಕನ್ನಡದ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವ ಆಶಯ ವ್ಯಕ್ತಪಡಿಸಿದರು.
ಮೂಡುಬಿದಿರೆಯ ನಿವಾಸದಲ್ಲಿ ಉಡುಪಿ ತಾಲೂಕು ಕಸಾಪ ಘಟಕದ 16ನೇ ಸಾಹಿತ್ಯ ಸಮ್ಮೇಳನ 'ಭೀಷ್ಮೋತ್ಸವ'ದ ಆಮಂತ್ರಣ ಪತ್ರಿಕೆಯನ್ನು ಶನಿವಾರ (ಏ.18) ಬಿಡುಗಡೆಗೊಳಿಸಿ ಮಾತನಾಡಿದರು.
ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ., ಕಸಾಪ ಗೌರವ ಸಲಹೆಗಾರರಾದ ಯು.ವಿಶ್ವನಾಥ್ ಶೆಣೈ, ಪ್ರೊ. ಶಂಕರ್, ಗೌರವ ಕಾರ್ಯದರ್ಶಿಗಳಾದ ಜನಾರ್ದನ್ ಕೊಡವೂರು, ರಂಜನಿ ವಸಂತ್, ಗೌರವ ಕೋಶಾಧ್ಯಕ್ಷ ರಾಜೇಶ್ ಭಟ್ ಪಣಿಯಾಡಿ, ಮಾಧ್ಯಮ ಪ್ರತಿನಿಧಿ ಆಸ್ಟ್ರೊ ಮೋಹನ್, ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು, ವಸಂತ್, ದೀಪಾ ಕರ್ಕಿ, ಚಂದ್ರಶೇಖರ್, ಸಾಮಾಜಿಕ ಜಾಲತಾಣದ ಸಂಚಾಲಕ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ಇತರರು ಉಪಸ್ಥಿತರಿದ್ದರು.