ಉಡುಪಿಯ ಡಿಸಿ ಕಚೇರಿ ಬಳಿ ಇರುವ ಡಾ. ವಿ.ಎಸ್. ಆಚಾರ್ಯ ಅವರ ಪುತ್ಥಳಿಗೆ ಯಶ್ಪಾಲ್ ಸುವರ್ಣ ಪುಷ್ಪನಮನ ಸಲ್ಲಿಸಿದರು. ಕುತ್ಯಾರು ನವೀನ್ ಶೆಟ್ಟಿ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ದಿನೇಶ್ ಅಮೀನ್, ಪ್ರಭಾಕರ್ ಪೂಜಾರಿ, ಕಿರಣಕುಮಾರ್ ಬೈಲೂರು, ರಷ್ಮಿತಾ ಶೆಟ್ಟಿ, ನಳಿನಿ ಪ್ರದೀಪ್ ರಾವ್ ಇತರರಿದ್ದರು.
* ಶಾಸಕ ಯಶ್ಪಾಲ್ ಸುವರ್ಣ ಶ್ಲಾಘನೆ
* ಡಾ. ವಿ. ಎಸ್. ಆಚಾರ್ಯ ಪುಣ್ಯಸ್ಮರಣೆ
ಉಡುಪಿ: ಧಾರ್ಮಿಕ ಕ್ಷೇತ್ರ, ಆರೋಗ್ಯ, ಶಿಕ್ಷಣ, ಪ್ರವಾಸೋದ್ಯಮ, ಕಲೆ ಹಾಗೂ ಸಾಂಸತಿಕ ಕ್ಷೇತ್ರಗಳ ಸಾಧನೆ ಮೂಲಕ ಉಡುಪಿ ಜಿಲ್ಲೆ ವಿಶ್ವದ ಗಮನ ಸೆಳೆಯುತ್ತಿದೆ. ಇವೆಲ್ಲದರ ನಡುವೆಯೇ ನವ ಉಡುಪಿ ನಿರ್ಮಾಣದಲ್ಲಿ ರಾಷ್ಟ್ರಕಂಡ ಶ್ರೇಷ್ಠ ರಾಜಕೀಯ ಮುತ್ಸದ್ದಿ, ಕೀರ್ತಿಶೇಷ ಡಾ. ವಿ.ಎಸ್. ಆಚಾರ್ಯ ಅವರ ಕೊಡುಗೆ ಅಪಾರ ಎಂದು ಶಾಸಕ ಯಶ್ಪಾಲ್ ಸುವರ್ಣ ಶ್ಲಾಘಿಸಿದರು.
ಉಡುಪಿ ನಗರ ಬಿಜೆಪಿ ವತಿಯಿಂದ ಶನಿವಾರ (ಫೆ.14) ಆಯೋಜಿಸಿದ್ದ ಡಾ. ವಿ.ಎಸ್. ಆಚಾರ್ಯ ಪುಣ್ಯಸ್ಮರಣೆ ಕಾರ್ಯಕ್ರಮದ ನಿಮಿತ್ತ ಜಿಲ್ಲಾಧಿಕಾರಿ ಕಚೇರಿ ಸಮೀಪದಲ್ಲಿರುವ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ನಮನ ಸಲ್ಲಿಸಿ, ಮಾತನಾಡಿದರು.
ರಾಜಕಾರಣಿಗಳಿಗೆ ಮಾದರಿ
ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಮಾತನಾಡಿ, ರಾಜಕೀಯ ಕ್ಷೇತ್ರದಲ್ಲಿ ಡಾ. ಆಚಾರ್ಯರು ಅಚ್ಚಳಿಯದೇ ಇರುವ ನೆನಪಾಗಿದ್ದಾರೆ. ಯುವ ರಾಜಕಾರಣಿಗಳಿಗೆ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಅವರು ಮಾದರಿಯಾಗಿದ್ದಾರೆ ಎಂದರು.
ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಉಡುಪಿ ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್, ಉಡುಪಿ ನಗರಸಭಾ ನಿಕಟಪೂರ್ವ ಅಧ್ಯಕ್ಷ ಪ್ರಭಾಕರ್ ಪೂಜಾರಿ, ಮಾಜಿ ಅಧ್ಯಕ್ಷ ಕಿರಣಕುಮಾರ್ ಬೈಲೂರು, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಷ್ಮಿತಾ ಶೆಟ್ಟಿ, ನಗರಸಭಾ ಸದಸ್ಯರಾದ ಗಿರೀಶ್ ಅಂಚನ್, ಬಾಲಕೃಷ್ಣ ಶೆಟ್ಟಿ, ಜಿಲ್ಲಾ ಪದಾಧಿಕಾರಿಗಳಾದ ನಳಿನಿ ಪ್ರದಿಪ್ ರಾವ್ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.
ನವ ಉಡುಪಿ ನಿಮಾರ್ಣದ ಹರಿಕಾರ, ಮಾಜಿ ಸಚಿವ ಡಾ. ವಿ.ಎಸ್. ಆಚಾರ್ಯ ಪುಣ್ಯಸ್ಮರಣೆ ನಿಮಿತ್ತ ಉಡುಪಿ ನಗರಸಭಾ ಕಚೇರಿಯಲ್ಲಿರುವ ಪುತ್ಥಳಿಗೆ ಶಾಸಕ ಯಶ್ಪಾಲ್ ಸುವರ್ಣ ಮಾಲಾರ್ಪಣೆ ಮಾಡಿದರು. ನಿಕಟಪೂರ್ವ ಅಧ್ಯಕ್ಷ ಪ್ರಭಾಕರ್ ಪೂಜಾರಿ, ಡಾ. ವಿ.ಎಸ್. ಆಚಾರ್ಯ ಅವರ ಪುತ್ರ ಡಾ. ರವಿರಾಜ್ ಆಚಾರ್ಯ, ನಗರಸಭಾ ಮಾಜಿ ಅಧ್ಯಕ್ಷ ಕಿರಣಕುಮಾರ್ ಬೈಲೂರು, ಮಾಜಿ ಸದಸ್ಯರಾದ ಬಾಲಕೃಷ್ಣ ಶೆಟ್ಟಿ, ಗಿರೀಶ್ ಅಂಚನ್, ರಾಜು, ರಶ್ಮಿ ಸಿ. ಭಟ್, ಹರೀಶ್ ಶೆಟ್ಟಿ ಇತರರಿದ್ದರು.