ರಂಗಶ್ರೀ ರಂಗಹಬ್ಬ-2026ರ ಮೂರನೇ ದಿನದ ಕಾರ್ಯಕ್ರಮದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಸಿ.ಎನ್.ಬಿಲ್ಲವ ಅವರನ್ನು ಸನ್ಮಾನಿಸಲಾಯಿತು. ಪ್ರಮುಖರಾದ ಶ್ರೀಧರ ಪಿ., ಪೂರ್ಣಿಮಾ ಸುರೇಶ್, ನಾಕಟ್ಟೆ ಜಗನ್ನಾಥ ಶೆಟ್ಟಿ, ಜಯಾನಂದ ಹೋಬಳಿದಾರ್ ಇದ್ದರು. 
ಉಡುಪಿ

ಭಾಷೆ ಅರ್ಥೈಸುವಿಕೆಗೆ ನಾಟಕ ಪ್ರಮುಖ ಮಾಧ್ಯಮ

ಇಂದಿರಾ ಎನ್ ಕೆ
ವಿಜಯವಾಣಿ ಸುದ್ದಿಜಾಲ ಬೈಂದೂರು
ಮನುಷ್ಯ, ಸಮುದಾಯ, ಭಾಷೆ ಮುಂತಾದವುಗಳ ನಡುವಿನ ಅರ್ಥೈಸುವಿಕೆಗೆ ನಾಟಕ ಪ್ರಮುಖ ಮಾಧ್ಯಮವಾಗಿದೆ. ನಾಟಕ ಕೇವಲ ನಟನೆ ಮಾತ್ರ ಆಗಿ ಉಳಿಯದೆ ನಟನೊಬ್ಬ ತನ್ನನ್ನು ತಾನು ಅರಿತುಕೊಳ್ಳುವ, ಸಮಾಜವನ್ನು ಹಾಗೂ ಸುತ್ತಲಿನ ಬೌದ್ಧಿಕ ಸ್ಥಿತಿಯನ್ನು ಅರಿಯುವಲ್ಲಿ ಮುಖ್ಯ ಪಾತ್ರ ವಹಿಸುತ್ತದೆ ಎಂದು ಕುಂದಾಪುರ ಕಲಾಕ್ಷೇತ್ರ ಅಧ್ಯಕ್ಷ ಕಿಶೋರ್ ಕುಮಾರ್ ಹೇಳಿದರು.
ಬೈಂದೂರು ಶಾರದಾ ವೇದಿಕೆಯಲ್ಲಿ ಶುಕ್ರವಾರ ಲಾವಣ್ಯ ಸ್ಥಾಪಕಾಧ್ಯಕ್ಷ ದಿ.ಯು.ಉಪ್ಪುಂದ ಶ್ರೀನಿವಾಸ ಪ್ರಭು ಅವರ ಸ್ಮರಣಾರ್ಥ ಆಯೋಜನೆಯ ರಂಗಶ್ರೀ ರಂಗಹಬ್ಬ-2026ರ ಮೂರನೇ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಉದ್ಯಮಿ ಬಿಜೂರು ರಾಮಕೃಷ್ಣ ಶೇರುಗಾರ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಸಿ.ಎನ್.ಬಿಲ್ಲವ ಅವರನ್ನು ಸನ್ಮಾನಿಸಲಾಯಿತು. ಮಂಗಳೂರು ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ ಪಿ., ಚಲನಚಿತ್ರ ಕಲಾವಿದೆ ಪೂರ್ಣಿಮಾ ಸುರೇಶ್, ಉದ್ಯಮಿ ನಾಕಟ್ಟೆ ಜಗನ್ನಾಥ ಶೆಟ್ಟಿ, ಕೊಲ್ಲೂರು ದೇವಳ ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯ ಜಯಾನಂದ ಹೋಬಳಿದಾರ್, ಸಿಎ ಗಿರೀಶ ಪಡಿಯಾರ್, ಕಸಾಪ ಬೈಂದೂರು ಟಕ ಅಧ್ಯಕ್ಷ ಅರುಣ ಕುಮಾರ್ ಶಿರೂರು ಇದ್ದರು.
ಗಣಪತಿ ಎಸ್. ಸ್ವಾಗತಿಸಿದರು. ರೋಶನ್ ಕುಮಾರ್ ವಂದಿಸಿದರು. ಹರೇಗೋಡು ಉದಯ್ ಆಚಾರ್ಯ ನಿರೂಪಿಸಿದರು. ಮಂಗಳೂರು ಶ್ರೀ ನಂದಿಕೆಶ್ವರ ನಾಟಕ ಸಂದ ಕಲಾವಿದರಿಂದ ಭಂಡ ನನ್ನ ಗಂಡ ನಾಟಕ ಪ್ರದರ್ಶನಗೊಂಡಿತು.

ರಂಗಭೂಮಿ ನಿರಂತರ ಬದಲಾವಣೆಗೆ ಒಳಗಾಗುತ್ತಾ ಬಂದಿದ್ದು, ವಿದ್ಯುನ್ಮಾನ ತಂತ್ರಜ್ಞಾನದಲ್ಲಿ ಆಗುತ್ತಿರುವ ಹೊಸ ಆವಿಷ್ಕಾರಗಳು ಇದರ ಇನ್ನಷ್ಟು ಬದಲಾವಣೆಗೆ ಕಾರಣವಾಗಿವೆ. ಹವ್ಯಾಸಿ ರಂಗಕಲಾ ತಂಡಗಳು ಅವುಗಳೊಂದಿಗೆ ಹೆಜ್ಜೆ ಹಾಕಬೇಕಾದ ಅನಿವಾರ್ಯತೆ ಇದೆ. ಅದು ಯುವಜನರನ್ನು ತನ್ನತ್ತ ಸೆಳೆಯುವ ಕೆಲಸ ಮಾಡುವ ಮೂಲಕ ನಿರಂತರತೆ ಕಾಪಾಡಿಕೊಳ್ಳಬೇಕು.