ಮೂಲ್ಕಿ: ಕಿಲ್ಪಾಡಿ ಗ್ರಾಮದ ಕೆಂಚನಕೆರೆಯ ಕೆರೆ ಬಳಿ ಮಾದಕವಸ್ತು ಸೇವನೆ ಮಾಡುತ್ತಿದ್ದ ನಿಯಾಜ್ ಎಂಬಾತನನ್ನು ಮೂಲ್ಕಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಆತ ಕೆಂಚನಕೆರೆಯ ಕೆರೆ ಬಳಿ ಸಿಗರೇಟ್ ಸೇದುತ್ತಾ ನಿಂತಿದ್ದು, ವಿಚಾರಿಸಿದಾಗ ಗಾಂಜಾ ಸೇರಿಸಿದ್ದ ಸಿಗರೇಟನ್ನು ಸೇದುತ್ತಿರುವುದಾಗಿ ತಿಳಿಸಿದ್ದಾನೆ. ಆತನನ್ನು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆ ನಡೆಸಿದಾಗ ಮಾದಕವಸ್ತು ಸೇವನೆ ಮಾಡಿರುವುದು ದೃಢಪಟ್ಟಿದೆ.