ಚಾತುರ್ಮಾಸ್ಯ 
ಉಡುಪಿ

ಎಡನೀರು ಶ್ರೀ ಚಾತುರ್ಮಾಸ್ಯ ವ್ರತಾಚರಣೆ

ಕಾಸರಗೋಡು: ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಗಳ 6ನೇ ಚಾತುರ್ಮಾಸ್ಯ ವ್ರತಾಚರಣೆ ಜು.29ರಿಂದ ಸೆ.26ರವರೆಗೆ ಮಠದಲ್ಲಿ ಜರುಗಲಿದೆ. 60 ದಿನಗಳ ಕಾಲ ನಡೆಯಲಿರುವ ಸಾಂಸ್ಕೃತಿಕ ಉತ್ಸವಕ್ಕೆ ಜು.29ರಂದು ಬೆಳಗ್ಗೆ 9 ಗಂಟೆಗೆ ಮಠದಲ್ಲಿ ಚಾಲನೆ ನೀಡಲಾಗುವುದು. ಎಡನೀರು ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಮಂಡಲ ಸಂಯೋಜನೆ ಹಾಗೂ ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸರ್ಕಾರದ ಸಹಕಾರದೊಂದಿಗೆ ಕಾರ್ಯಕ್ರಮ ಜರುಗಲಿದೆ.
ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನಮರದ ಕಾರ್ಯಕ್ರಮ ಉದ್ಘಾಟಿಸುವರು. ಸಂಸದ ರಾಜಮೋಹನ್ ಉಣ್ಣಿತ್ತಾನ್ ಅಧ್ಯಕ್ಷತೆ ವಹಿಸುವರು. ಹುಬ್ಬಳ್ಳಿ ಶಾಸಕ ಅರವಿಂದ ಬೆಲ್ಲದ, ಶಾಸಕ ಕೆ.ನೀಲಕಂಠನ್, ಉದ್ಯಮಿ ಕೃಷ್ಣಮೂರ್ತಿ ಮಂಜ, ಅನಿವಾಸಿ ಉದ್ಯಮಿ ಮಹಾಬಲೇಶ್ವರ ಭಟ್ ಉಪಸ್ಥಿತರಿರುವರು. ಕೇಂದ್ರ ಸಂಗೀತ ನೃತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಆನೂರು ಅನಂತಕೃಷ್ಣ ಶರ್ಮ ಅವರನ್ನು ಸನ್ಮಾನಿಸಲಾಗುವುದು. ಚಾತುರ್ಮಾಸ್ಯ ಸಮಿತಿ ಗೌರವಾಧ್ಯಕ್ಷ ಟಿ.ಶ್ಯಾಮ ಭಟ್ ಹಾಗೂ ಅಧ್ಯಕ್ಷ ಜಿ.ಎಲ್.ಬಲರಾಮ ಆಚಾರ್ಯ ಪಾಲ್ಗೊಳ್ಳುವರು.
ಸಂಜೆ 5 ಗಂಟೆಗೆ ಕರ್ನಾಟಕ ಶಾಸ್ತ್ರೀಯ ಹಾಗೂ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ವಿಶೇಷ ಜುಗಲ್‌ಬಂದಿ ನಡೆಯಲಿದೆ. ನಾಡಜ್ಯೋತಿ ವಿದ್ವಾನ್ ಎಂ.ಕೆ.ಪ್ರಾಣೇಶ್ ಕೊಳಲು, ಪಂಡಿತ್ ಡಾ.ರವೀಂದ್ರ ಕಟೋಟಿ ಸಂವಾದಿನಿ ಹಾರ್ಮೋನಿಯಂ, ವಿದ್ವಾನ್ ಆನೂರು ಅನಂತಕೃಷ್ಣ ಶರ್ಮ ಮೃದಂಗ, ರೂಪೇಶ್ ಕಲ್ಲೂರ್ಕರ್ ತಬಲಾದಲ್ಲಿ ಸಹಕರಿಸುವರು.