ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಿಸಲಾಯಿತು. ಮೀನುಗಾರಿಕಾ ಇಲಾಖೆಯ ಉಪ ನಿರ್ದೇಶಕಿ ರೇವತಿ, ಹರೇಕಳ ಶ್ರೀ ರಾಮಕೃಷ್ಣ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ತ್ಯಾಗಂ ಹರೇಕಳ, ಸಂಘದ ಅಧ್ಯಕ್ಷ ಜೆ.ಮುಹಮ್ಮದ್ ಇಸಾಕ್, ಉಪಾಧ್ಯಕ್ಷ ಅಹ್ಮದ್ ಬಾವ ಬಜಾಲ್ ಇನ್ನಿತರರು ಉಪಸ್ಥಿತರಿದ್ದರು. 
ಉಡುಪಿ

ಶಿಕ್ಷಣವೇ ಅತ್ಯುತ್ತಮ ಉಡುಗೊರೆ

ಇಂದಿರಾ ಎನ್ ಕೆ
ವಿಜಯವಾಣಿ ಸುದ್ದಿಜಾಲ ಉಳ್ಳಾಲ
ಪಾಲಕರು ಮಕ್ಕಳಿಗೆ ನೀಡಬಹುದಾದ ಉತ್ತಮ ಉಡುಗೊರೆ ಎಂದರೆ ಶಿಕ್ಷಣ ಮಾತ್ರ. ಎಷ್ಟೇ ಕಷ್ಟ ಇದ್ದರೂ ಮಕ್ಕಳಿಗೆ ಶಿಕ್ಷಣದಿಂದ ವಂಚಿತರನ್ನಾಗಿ ಮಾಡಬಾರದು ಎಂದು ಮೀನುಗಾರಿಕಾ ಇಲಾಖೆಯ ಉಪನಿರ್ದೇಶಕಿ ರೇವತಿ ಹೇಳಿದರು.
ಮಂಗಳೂರು ಬಂದರು ದಕ್ಷಿಣ ದಕ್ಕೆ ಕರಾವಳಿ ಅಲ್ಪಸಂಖ್ಯಾತ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದಿಂದ ಶನಿವಾರ ’ಬಹರ್-ಎ-ನೂರ್’ ಕಟ್ಟದಲ್ಲಿ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಸಾವಿರ ಮಕ್ಕಳಿಗೆ ಶಾಲಾ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಂಗಳೂರು ಕರಾವಳಿ ಅಲ್ಪಸಂಖ್ಯಾತ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷ ಜೆ.ಮುಹಮ್ಮದ್ ಇಸಾಕ್ ಅಧ್ಯಕ್ಷತೆ ವಹಿಸಿದ್ದರು. ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ತ್ಯಾಗಂ ಹರೇಕಳ, ಸಂಘದ ಉಪಾಧ್ಯಕ್ಷ ಅಹ್ಮದ್ ಬಾವ ಬಜಾಲ್, ಮಂಗಳೂರು ಕರಾವಳಿ ಅಲ್ಪಸಂಖ್ಯಾತ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷ ಜೆ.ಮುಹಮ್ಮದ್ ಇಸಾಕ್ ಅಧ್ಯಕ್ಷತೆ ವಹಿಸಿದ್ದರು.
ಸಂಘದ ಉಪಾಧ್ಯಕ್ಷ ಅಹ್ಮದ್ ಬಾವ ಬಜಾಲ್, ನಿರ್ದೇಶಕರಾದ ಬಿ.ಇಬ್ರಾಹಿಂ ಖಲೀಲ್, ಎಸ್.ಎಂ.ಇಬ್ರಾಹಿಂ, ಮುಹಮ್ಮದ್ ಅಶ್ರಫ್, ಎಂ.ಎ.ಗಫೂರ್, ಬಿ.ಮಹಮ್ಮದ್ ಶಾಲಿ, ಎಸ್.ಕೆ.ಇಸ್ಮಾಯಿಲ್, ಅನ್ವರ್ ಎ.ಎನ್.ಆರ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಿ.ಅಬ್ದುಲ್ ಲತೀಫ್ ಮೊದಲಾದವರು ಉಪಸ್ಥಿತರಿದ್ದರು. ಹರೇಕಳ ತ್ವೈಬಾ ಮದ್ರಸಾ ವಿದ್ಯಾರ್ಥಿ ಅನ್ಸಾರ್ ಕಿರಾಅತ್ ಪಡಿಸಿದರು. ಸಂಘದ ಸಲಹೆಗಾರ ಮಹಮ್ಮದ್ ಮುಸ್ತಫಾ ಮಲಾರ್ ಹರೇಕಳ ಕಾರ್ಯಕ್ರಮ ನಿರೂಪಿಸಿದರು.

ಯಾವುದೇ ಸಂಸ್ಥೆ ಗಳಿಸಿದ್ದರಲ್ಲಿ ಸಮಾಜಕ್ಕೂ ವಿನಿಯೋಗಿಸುವುದು ನೈಜ ಧರ್ಮ, ಇಂತಹ ಕಾರ್ಯಗಳಿಂದ ಅದೆಷ್ಟೋ ಮಂದಿಗೆ ಸಹಕಾರಿಯಾಗುತ್ತದೆ. ಅಲ್ಪಸಂಖ್ಯಾತ ಹೆಸರಲ್ಲಿರುವ ಮೀನುಗಾರರ ಸಂಘ ಜಾತಿ, ಧರ್ಮ ನೋಡದೆ ಬಡ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಿ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ ಸಮಾಜದಲ್ಲಿ ಸತ್ಪ್ರಜೆಗಳನ್ನಾಗಿ ರೂಪಿಸುತ್ತಿದೆ.