ಸಸಿಹಿತ್ಲು ಧಾರ್ಮಿಕ ಸಭೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಗೌರವಿಸಲಾಯಿತು. ಶ್ರೀ ಕ್ಷೇತ್ರ ಸಸಿಹಿತ್ಲು ದೇವಸ್ಥಾನ ಆಡಳಿತ ಮೊಕ್ತೇಸರ ಚಂದ್ರಶೇಖರ ಬೆಳ್ಚಡ, ಶಾಸಕಿ ಭಾಗೀರಥಿ ಮುರುಳ್ಯ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಐಕಳಬಾವ ದೇವಿಪ್ರಸಾದ್ ಶೆಟ್ಟಿ, ಉದ್ಯಮಿ ಏಕನಾಥ್ ಎಸ್.ಅಮೀನ್ ಇತರರಿದ್ದರು. 
ಉಡುಪಿ

ಧಾರ್ಮಿಕ ಕೇಂದ್ರಗಳಲ್ಲಿ ಧರ್ಮದ ಜಾಗೃತಿ

ಇಂದಿರಾ ಎನ್ ಕೆ
ವಿಜಯವಾಣಿ ಸುದ್ದಿಜಾಲ ಕಿನ್ನಿಗೋಳಿ
ಧಾರ್ಮಿಕ ಕೇಂದ್ರಗಳಲ್ಲಿ ನಡೆಯುವ ಬ್ರಹ್ಮಕಲಶೋತ್ಸವದಂತಹ ಕಾರ್ಯಕ್ರಮಗಳ ಮೂಲಕ ಸಮಾಜವನ್ನು ಒಗ್ಗೂಡಿಸುವ ಕಾರ್ಯವಾಗಬೇಕು. ಧಾರ್ಮಿಕ ಕೇಂದ್ರಗಳಲ್ಲಿ ಧರ್ಮದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವಾಗಬೇಕು ಎಂದು ಶ್ರೀ ಕ್ಷೇತ್ರ ಸಸಿಹಿತ್ಲು ದೇವಸ್ಥಾನ ಆಡಳಿತ ಮೊಕ್ತೇಸರ ಚಂದ್ರಶೇಖರ ಬೆಳ್ಚಡ ಹೇಳಿದರು.
ಸಸಿಹಿತ್ಲು ಶ್ರೀ ಭಗವತಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು
ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರದ ಆನುವಂಶಿಕ ಮೊಕ್ತೇಸರ, ಪ್ರಧಾನ ಆರ್ಚಕ ಶ್ರೀನಿವಾಸ ಯಾನೆ ಅಪ್ಪು ಪೂಜಾರಿ ಆಶೀರ್ವಚನ ನೀಡಿದರು. ಶಾಸಕಿ ಭಾಗೀರಥಿ ಮುರುಳ್ಯ ಶುಭಾಶಂಸನೆಗೈದರು. ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಐಕಳಬಾವ ದೇವಿಪ್ರಸಾದ್ ಶೆಟ್ಟಿ, ಉದ್ಯಮಿ ಏಕನಾಥ್ ಎಸ್.ಅಮೀನ್, ಶ್ರೀ ಭಗವತಿ ದೇವಸ್ಥಾನ ಕಲಿನದ ಆಡಳಿತ ಮೊಕ್ತೇಸರ ಕುಮಾರಸ್ವಾಮಿ, ಉಳ್ಳಾಲ ಚೀರುಂಭ ಶ್ರೀ ಭಗವತಿ ಕ್ಷೇತ್ರ ನಿಕಟ ಪೂರ್ವಾಧ್ಯಕ್ಷ ಚಂದ್ರಹಾಸ್ ಉಳ್ಳಾಲ್, ಜಯಕೃಷ್ಣ, ಮುಂಬೈ ಪರಿಸರ ಪ್ರೇಮಿ ಸಮಿತಿ ಅಧ್ಯಕ್ಷ ಜಯಕೃಷ್ಣ ಶೆಟ್ಟಿ, ಉಪ್ಪಳ ಶ್ರೀ ಭಗವತಿ ದೇವಸ್ಥಾನ ಅಧ್ಯಕ್ಷ ಸುಕುಮಾರ್ ಉಪ್ಪಳ, ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆ ಯೋಜನಾಧಿಕಾರಿ ಗಿರೀಶ್, ಶಾಸಕ ಯಶ್‌ಪಾಲ್ ಸುವರ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಶ್ರೀ ಭಗವತಿ ಕ್ಷೇತ್ರ ಆಡಳಿತ ಮೊಕ್ತೇಸರ ಚಂದ್ರಶೇಖರ ಬೆಳ್ಚಡ, ಬ್ರಹ್ಮಕಲಶೋತ್ಸವ ಮುಂಬ್ಯೆ ಸಮಿತಿ ಅಧ್ಯಕ್ಷ ವೇದಪ್ರಕಾಶ್ ಎಂ.ಶ್ರೀಯಾನ್, ಸಮಿತಿಯ ಮೋಹನ್ ಕೋಟ್ಯಾನ್ ಮುಂಬೈ, ಪದ್ಮನಾಭ ಬಂಗೇರ, ಡಾ.ಸೋಂದಾ ಭಾಸ್ಕರ ಭಟ್, ಅರ್ಚಕರಾದ ಶ್ರೀಪತಿ ಭಟ್ ಹೊಯ್ಗೆ ಗುಡ್ಡೆ, ಮುರಾ ಸದಾಶಿವ ಶೆಟ್ಟಿ ಮತ್ತಿತರರಿದ್ದರು. ಕ್ಷೇತ್ರ ವಿಶ್ವಸ್ತ ಮಂಡಳಿ ಅಧ್ಯಕ್ಷ ವಾಮನ್ ಇಡ್ಯಾ ಸ್ವಾಗತಿಸಿದರು. ರಾಜೇಂದ್ರ ಪ್ರಸಾದ್ ಎಕ್ಕಾರು ನಿರೂಪಿಸಿದರು.

ಸಾಧಕರಿಗೆ ಸನ್ಮಾನ

ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸಿದವರನ್ನು, ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷ ವಾಮನ್ ಇಡ್ಯಾ, ಆಡಳಿತ ಮೊಕ್ತೇಸರ ಚಂದ್ರಶೇಖರ ಬೆಳ್ಚಡ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು, ಆನುವಂಶಿಕ ಮೊಕ್ತೇಸರ ಶ್ರೀನಿವಾಸ್ ಯಾನೆ ಅಪ್ಪು ಪೂಜಾರಿ, ಸಮಿತಿಯ ರಮೇಶ್ ಬಂಗೇರ, ಸುರೇಶ್ ಬಂಗೇರ, ದೇವಳದ ಅರ್ಚಕ ವರ್ಗ, ದಾನಿಗಳು ಗೌರವಿಸಲಾಯಿತು.