ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘದ ಸುವರ್ಣ ಮಹೋತ್ಸವ ಆಚರಣೆಯ ಲಾಂಛನವನ್ನು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಎಂ.ಮಹೇಶ ಹೆಗ್ಡೆ ಬಿಡುಗಡೆಗೊಳಿಸಿದರು. ಪ್ರಮುಖರಾದ ಎಸ್.ಜಯರಾಮ ಶೆಟ್ಟಿ, ಬಿ.ಹರೀಶ್ ಕಿಣಿ ಬೆಳ್ವೆ, ದಯಾನಂದ ಆರ್.ಶೆಟ್ಟಿ, ಚಂದ್ರಶೇಖರ ಶೆಟ್ಟಿ ಎಂ., ದಯಾನಂದ ಪೂಜಾರಿ ಕೆ., ಎಚ್.ಕೆ.ಸೀತಾರಾಮ ಶೆಟ್ಟಿ, ಉದಯ ಶೆಟ್ಟಿ ಉಪಸ್ಥಿತರಿದ್ದರು. 
ಉಡುಪಿ

ಗ್ರಾಮೀಣ ಭಾಗದ ಸಹಕಾರಿ ಅತ್ಯುತ್ತಮ ವ್ಯವಹಾರ

ಬೆಳ್ವೆ: ಗ್ರಾಮೀಣ ಭಾಗದ ಸಹಕಾರಿ ಸಂಘ ಅತ್ಯುತ್ತಮವಾಗಿ ವ್ಯವಹಾರ ನಡೆಸಿ, ಲಾಭ ಗಳಿಸಿದೆ. ಸಂಘದ ಸ್ವಂತ ಕಟ್ಟಡದ ನಿಧಿಯಿಂದ ಸುವರ್ಣ ಸೌಧ ನಿರ್ಮಾಣ ಮಾಡುತ್ತಿರುವುದು ಹೆಮ್ಮೆಯ ವಿಚಾರ ಎಂದು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಎಂ.ಮಹೇಶ ಹೆಗ್ಡೆ ಹೇಳಿದರು.
ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘದ ಸುವರ್ಣ ಮಹೋತ್ಸವ ಆಚರಣೆಯ ಲಾಂಛನವನ್ನು ಬೆಳ್ವೆ ಕೇಂದ್ರ ಕಚೇರಿಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿ ಮಾತನಾಡಿದರು.
ಸಂಘದ ಅಧ್ಯಕ್ಷ ಎಸ್.ಜಯರಾಮ ಶೆಟ್ಟಿ ಮಾತನಾಡಿ, ಸಂಘದ ವತಿಯಿಂದ ಸೆ.21ರಂದು ಬೆಳ್ವೆ ತಾರಿಕಟ್ಟೆ ಎಚ್‌ಪಿ ಪೆಟ್ರೋಲ್ ಬಂಕ್‌ನ ಎದುರು ಸ್ವಂತ ಸ್ಥಳದಲ್ಲಿ ಸುವರ್ಣ ಮಹೋತ್ಸವ ಆಚರಣೆ, 50 ವರ್ಷಗಳ ನೆನಪಿಗಾಗಿ ಸುವರ್ಣ ಸೌಧಕ್ಕೆ ಶಿಲಾನ್ಯಾಸ, ಸಂಘದ ವ್ಯಾಪ್ತಿಯ 7 ಗ್ರಾಮಗಳಿಗೆ ಆಂಬುಲೆನ್ಸ್ ಉಚಿತ ಸೇವೆ, ರೈತರಿಗೆ ಪೂರಕ ಯೋಜನೆ ರೂಪಿಸಲಿದ್ದೇವೆ. ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ.
ಮಾಜಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ ಸುವರ್ಣ ಸೌಧ ಕಟ್ಟಡಕ್ಕೆ ಶಿಲಾನ್ಯಾಸ ಮಾಡಲಿದ್ದಾರೆ. ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಮರಣ ಪರಿಹಾರ ನಿಧಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಆಂಬುಲೆನ್ಸ್ ಉಚಿತ ಸೇವೆಗೆ ಚಾಲನೆ ನೀಡಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಸಹಕಾರಿ ಧ್ವಜಾರೋಹಣ ಮಾಡಲಿದ್ದಾರೆ ಎಂದರು.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಎಂ.ಮಹೇಶ್ ಹೆಗ್ಡೆ, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕಿ ಲಾವಣ್ಯ ಕೆ.ಆರ್., ಕುಂದಾಪುರ ಉಪ ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕ ಸುಧೀರ್ ಕುಮಾರ್ ಜಿ., ದ.ಕ. ಸಹಕಾರಿ ಸಕ್ಕರೆ ಕಾರ್ಖಾನೆ ಬ್ರಹ್ಮಾವರ ಅಧ್ಯಕ್ಷ ಬಿ.ಸತೀಶ್ ಕಿಣಿ ಬೆಳ್ವೆ, ಉದ್ಯಮಿ ಎಂ.ದಿನೇಶ್ ಹೆಗ್ಡೆಮೊಳಹಳ್ಳಿ, ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ, ಕುಂದಾಪುರ ಪ್ರಾಥಮಿಕ ಕೃಷಿ ಮತ್ತು ಗ್ರಾ.ಅ.ಬ್ಯಾಂಕ್ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ ಮತ್ತಿತರರು ಭಾಗವಹಿಸಲಿದ್ದಾರೆ ಎಂದರು.

ಸಂಘದ ಉಪಾಧ್ಯಕ್ಷ ಬಿ.ಹರೀಶ್ ಕಿಣಿ ಬೆಳ್ವೆ, ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ, ನಿರ್ದೇಶಕರಾದ ದಯಾನಂದ ಆರ್.ಶೆಟ್ಟಿ, ನಿರ್ದೇಶಕ ಚಂದ್ರಶೇಖರ ಶೆಟ್ಟಿ ಎಂ., ದಯಾನಂದ ಪೂಜಾರಿ ಕೆ., ಎಚ್.ಕೆ.ಸೀತಾರಾಮ ಶೆಟ್ಟಿ, ಉದಯ್ ಶೆಟ್ಟಿ, ಇಚ್ಚಿತಾರ್ಥ ಶೆಟ್ಟಿ, ಜಯದೇವ ಹೆಗ್ಡೆ, ಸವಿತಾ ಶೆಟ್ಟಿ, ಸುಜಾತಾ ಪೂಜಾರಿ, ಕೃಷ್ಣ ನಾಯ್ಕ, ಶಿವರಾಮ್, ಪ್ರದೀಪ್, ವಲಯ ಮೇಲ್ವಿಚಾರಕ ಚಂದ್ರಶೇಖರ ಶೆಟ್ಟಿ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೀರ್ತಿಕುಮಾರ್ ಶೆಟ್ಟಿ ಸ್ವಾಗತಿಸಿದರು. ಸುಬ್ರಹ್ಮಣ್ಯ ಪಡುಕೋಣಿ ಕಾರ್ಯಕ್ರಮ ನಿರೂಪಿಸಿದರು. ಬಿ.ಹರೀಶ್ ಕಿಣಿ ಬೆಳ್ವೆ ವಂದಿಸಿದರು.