ಉಡುಪಿಯಲ್ಲಿ ನಡೆದ ಸಭೆಯಲ್ಲಿ ವಿನಯಕುಮಾರ್ ಸೊರಕೆ ಮಾತನಾಡಿದರು. ಅಶೋಕಕುಮಾರ್ ಕೊಡವೂರು, ಪ್ರಸಾದರಾಜ್ ಕಾಂಚನ್ ಮಾತನಾಡಿದರು. ಕಿಶನ್ ಹೆಗಡೆ ಕೊಳ್ಕೆಬೈಲ್, ಮಲ್ಯಾಡಿ ಶಿವರಾಂ ಶೆಟ್ಟಿ, ಜ್ಯೋತಿ ಹೆಬ್ಬಾರ್, ಪ್ರಖ್ಯಾತ್ ಶೆಟ್ಟಿ ಇದ್ದರು.
* ಮಾಜಿ ಸಚಿವ ವಿನಯಕುಮಾರ್ ಸೊರಕೆ ಅನಿಸಿಕೆ
* ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ
ಉಡುಪಿ: ಜಿಪಂ ಹಾಗೂ ತಾಪಂ ಚುನಾವಣೆ ಶೀಘ್ರದಲ್ಲೇ ನಡೆಯಲಿದ್ದು, ಕೇಂದ್ರ ಸರ್ಕಾರ ಜಾರಿಗೆ ತಂದ ಎಸ್ಐಆರ್ ಕಾಯಿದೆಯ ಜಾಗೃತಿ ಅತ್ಯಗತ್ಯವಾಗಿದೆ. ಪಕ್ಷದಿಂದ ನೋಂದಾಯಿತ ಬಿಎಲ್ಎ-2ಗಳು ಈ ಕಾಯಿದೆ ಕುರಿತು ತಿಳಿದುಕೊಂಡು ಮತದಾರರಿಗೆ ಮಾಹಿತಿ ನೀಡಬೇಕು. ಪ್ರಜಾಪ್ರಭುತ್ವ ಉಳಿಯಬೇಕಾದರೆ ಪ್ರತಿ ನಾಗರಿಕನೂ ತನ್ನ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯೇ ಎಂದು ಪರಿಶೀಲಿಸಿಕೊಳ್ಳುವ ಕಾಲ ಬಂದಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯಕುಮಾರ್ ಸೊರಕೆ ಅನಿಸಿಕೆ ವ್ಯಕ್ತಪಡಿಸಿದರು.
ಉಡುಪಿಯ ಬ್ರಹ್ಮಗಿರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದರು.
ಪಕ್ಷದಿಂದ ಕಾರ್ಯಾಗಾರ
ಜಿಲ್ಲಾಧ್ಯಕ್ಷ ಅಶೋಕಕುಮಾರ್ ಕೊಡವೂರು ಮಾತನಾಡಿ, ಬಿಎಲ್ಎ-2ಗಳಿಗೆ ಎಸ್ಐಆರ್ ಕುರಿತು ತಿಳಿವಳಿಕೆ ಮೂಡಿಸಲು ಕಾರ್ಯಾಗಾರ ಹಮ್ಮಿಕೊಳ್ಳಲಾಗುವುದು. ಸಂಪೂರ್ಣವಾಗಿ ಕಾಯಿದೆ ಅರಿತುಕೊಂಡು ಮತದಾರರ ಹಕ್ಕು ಉಳಿಸಬೇಕು ಎಂದರು.
ಮುಖಂಡ ಪ್ರಸಾದರಾಜ್ ಕಾಂಚನ್ ಮಾತನಾಡಿದರು.
ಸಭೆಯಲ್ಲಿ ಜಿಲ್ಲಾ ಕಾರ್ಯಾಧ್ಯಕ್ಷ ಕಿಶನ್ ಹೆಗಡೆ ಕೊಳ್ಕೆಬೈಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು, ಮುಖಂಡರಾದ ಮಲ್ಯಾಡಿ ಶಿವರಾಂ ಶೆಟ್ಟಿ, ರಾಜ ಪೂಜಾರಿ, ದಿನೇಶ್ ಪುತ್ರನ್, ಬಿ. ನರಸಿಂಹ ಮೂರ್ತಿ, ನೀರೆ ಕೃಷ್ಣ ಶೆಟ್ಟಿ, ಹಿರಿಯಣ್ಣ, ನವೀನ್ಚಂದ್ರ ಶೆಟ್ಟಿ, ಹರೀಶ್ ಕಿಣಿ, ದೇವಕಿ ಸಣ್ಣಯ್ಯ, ಭುಜಂಗ ಶೆಟ್ಟಿ, ಗೋಪಿನಾಥ್ ಭಟ್, ಹರಿಪ್ರಸಾದ್ ಶೆಟ್ಟಿ, ಅರವಿಂದ್ ಪೂಜಾರಿ, ವೈ.ಸುಕುಮಾರ್, ಹರಿಪ್ರಸಾದ್ ರೈ, ಮಹಾಬಲ ಕುಂದರ್, ಶಬೀರ್ ಅಹ್ಮದ್, ಹರೀಶ್ ಶೆಟ್ಟಿ ಪಾಂಗಳ, ಜಯರಾಮ್ ನಾಯ್ಕ, ಕೀರ್ತಿ ಶೆಟ್ಟಿ ಅಂಬಲಪಾಡಿ, ಯತೀಶ್ ಕರ್ಕೇರ, ಡಾ. ಸುನೀತಾ ಶೆಟ್ಟಿ, ಮೀನಾಕ್ಷಿ ಮಾಧವ ಬನ್ನಂಜೆ, ರೋಶನಿ ಒಲಿವರಾ, ರೇವತಿ ಶೆಟ್ಟಿ, ಸಂಧ್ಯಾ ತಿಲಕ್, ಕಿರಣೆ ಹೆಗ್ಡೆ, ಉದ್ಯಾವರ ನಾಗೇಶಕುಮಾರ್, ರೋಶನ್ ಶೆಟ್ಟಿ, ಸುರೇಶ್ ಶೆಟ್ಟಿ ಬನ್ನಂಜೆ, ಶೇಖ್ ವಹೀದ್, ಜಯಕುಮಾರ್, ಕಿಶೋರಕುಮಾರ್ ಎಮಾರ್ಳ್, ಲಕ್ಷ್ಮೀಶ್ ಶೆಟ್ಟಿ, ಶಶಿಧರ್ ಶೆಟ್ಟಿ, ಎಲ್ಲೂರು ಸತೀಶ್ ಕೊಡವೂರು, ಸಂಜಯ್ ಆಚಾರ್ಯ, ಕೇಶವ್ ಕೋಟ್ಯಾನ್, ಲೂಯಿಸ್ ಲೊಬೋ, ವಿಜಯ್ ನಾಯರಿ ಇತರರು ಉಪಸ್ಥಿತರಿದ್ದರು.
ಇತ್ತೀಚೆಗೆ ನಿಧನರಾದ ಪಕ್ಷದ ಮುಖಂಡರಿಗೆ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ನ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್ ನುಡಿನಮನ ಸಲ್ಲಿಸಿದರು. ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ ಸ್ವಾಗತಿಸಿದರು. ಸಹಕಾರಿ ಕಾಂಗ್ರೆಸ್ ಅಧ್ಯಕ್ಷ ಅಣ್ಣಯ್ಯ ಸೇರಿಗಾರ್ ಕಾರ್ಯಕ್ರಮ ನಿರ್ವಹಿಸಿದರು. ಜಿಲ್ಲಾ ವಕ್ತಾರ ಭಾಸ್ಕರ್ ರಾವ್ ಕಿದಿಯೂರು ವಂದಿಸಿದರು.
ದಾಖಲೆ ಪರಿಶೀಲನೆ ನೆಪದಲ್ಲಿ ಮತದಾರರ ಪಟ್ಟಿಯಿಂದ ಜನರ ಹೆಸರು ಅಳಿಸುವ ಕೆಲಸ ನಡೆಯುತ್ತಿದೆ. ಸರ್ಕಾರದ ಅನುದಾನದಿಂದ ನಡೆಯುವ ಯೋಜನೆಗಳನ್ನು ಬಿಜೆಪಿಯವರು ತಮ್ಮದೇ ನೇತೃತ್ವದಲ್ಲಿ ನಡೆಯುವ ಕಾರ್ಯಕ್ರಮ ಎಂದು ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ.