ಯುವವಾಹಿನಿ ಬಂಟ್ವಾಳ ಘಟಕದ ನೂತನ ಕಾರ್ಯಕಾರಿ ಸಮಿತಿ ಪದಗ್ರಹಣ ಸಮಾರಂಭದಲ್ಲಿ ನೂತನ ಪದಾಧಿಕಾರಿಗಳು ಪದಗ್ರಹಣ ಸ್ವೀಕರಿಸಿದರು. ಭುವನೇಶ್ ಪಚ್ಚಿನಡ್ಕ, ಡಾ.ಉಜ್ವಲ್ ಯು., ವಿಶ್ವನಾಥ ಬಿ., ನಾಗೇಶ್ ಪೂಜಾರಿ ಉಪಸ್ಥಿತರಿದ್ದರು. 
ಉಡುಪಿ

ಅನುಕರಣೀಯ ಸಮಾಜಮುಖಿ ಕಾರ್ಯ

ಇಂದಿರಾ ಎನ್ ಕೆ
ಬಂಟ್ವಾಳ: ಯುವವಾಹಿನಿ ಸಂಸ್ಥೆಯ ಶಿಸ್ತು, ಸಂಘಟನಾ ಸಾಮರ್ಥ್ಯ ಹಾಗೂ ಸಮಾಜಮುಖಿ ಕಾರ್ಯಚಟುವಟಿಕೆ ಅನುಕರಣೀಯವಾಗಿವೆ ಎಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಹೇಳಿದರು.
ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಯುವವಾಹಿನಿ ಬಂಟ್ವಾಳ ಘಟಕ ಅಧ್ಯಕ್ಷ ನಾಗೇಶ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ನೂತನ ಕಾರ್ಯಕಾರಿ ಸಮಿತಿ ಪದಾಧಿಕಾರಿಗಳಿಗೆ ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಎನ್.ಅಶೋಕ್ ಕುಮಾರ್ ಪ್ರತಿಜ್ಞಾವಿಧಿ ಬೋಧಿಸಿದರು. ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕ ರಾಜೇಶ್ ನಾಕ್ ಶುಭ ಹಾರೈಸಿದರು.
ಯುವವಾಹಿನಿ ಬಂಟ್ವಾಳ ಘಟಕ ನಿಕಟಪೂರ್ವ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ, ಫಾದರ್ ಮುಲ್ಲರ್ ಆಸ್ಪತ್ರೆ ಸಹಾಯಕ ಪ್ರಾಧ್ಯಾಪಕ ಡಾ.ಉಜ್ವಲ್ ಯು.ಸುವರ್ಣ, ಬಿ.ಸಿ.ರೋಡು ಶ್ರೀ ರಕ್ತೇಶ್ವರಿ ದೇವಸ್ಥಾನದ ಮಾಜಿ ಅಧ್ಯಕ್ಷ ವಿಶ್ವನಾಥ ಬಿ., ಯುವವಾಹಿನಿ ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ನಾಗೇಶ್ ಪೂಜಾರಿ ಉಪಸ್ಥಿತರಿದ್ದರು.
11 ವರ್ಷಗಳಿಂದ ಯುವವಾಹಿನಿ ಬಂಟ್ವಾಳ ಘಟಕದ ಕಚೇರಿಗೆ ಸ್ಥಳಾವಕಾಶ ಒದಗಿಸಿ ಸಹಕರಿಸಿದ ಯುವವಾಹಿನಿ ಕೇಂದ್ರ ಸಮಿತಿ ಮಾಜಿ ಅಧ್ಯಕ್ಷ ರಾಜೇಶ್ ಬಿ., ನಿರ್ಗಮನ ಘಟಕ ಅಧ್ಯಕ್ಷ ನಾಗೇಶ್ ಪೂಜಾರಿ, ಕಾರ್ಯದರ್ಶಿ ಮಧುಸೂದನ್ ಮದ್ವ ಹಾಗೂ ಕೋಶಾಧಿಕಾರಿ ನವೀನ್ ಪೂಜಾರಿ ಅವರನ್ನು ಗೌರವಿಸಲಾಯಿತು.
ಕಾರ್ಯದರ್ಶಿ ಮಧುಸೂದನ್ ಮದ್ವ ವಾರ್ಷಿಕ ವರದಿ ಮಂಡಿಸಿದರು. ನಾಗೇಶ್ ಪೂಜಾರಿ ಸ್ವಾಗತಿಸಿದರು. ನೂತನ ಕಾರ್ಯದರ್ಶಿ ಗೀತಾ ಜಗದೀಶ್ ವಂದಿಸಿದರು. ಮಲ್ಲಿಕಾ ಜ್ಯೋತಿಗುಡ್ಡೆ ನಿರೂಪಿಸಿದರು.