ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ನಲ್ಲಿ ಧರ್ಮಪ್ರಾಂತ್ಯದ ಧಮಾರ್ಧ್ಯಕ್ಷ ಡಾ.ಜೆರಾಲ್ಡ್ ಐಸಾಕ್ ಲೋಬೊ ಬಲಿಪೂಜೆ ಅರ್ಪಿಸಿ, ಹಬ್ಬದ ಸಂದೇಶ ನೀಡಿದರು.
ಉಡುಪಿ: ವಿಶ್ವಕ್ಕೆ ಶಾಂತಿ ಸಂದೇಶ ಸಾರಿದ ಏಸುವಿನ ಜನ್ಮದಿನ ಕ್ರಿಸ್ಮಸ್ ಈವ್ ಹಬ್ಬವನ್ನು ಬುಧವಾರ ರಾತ್ರಿ ಕೆಸ್ತರು ಜಿಲ್ಲೆಯಾದ್ಯಂತ ಸಡಗರ, ಸಂಭ್ರಮದಿಂದ ಆಚರಿಸಿದರು.
ಹಬ್ಬದ ಅಂಗವಾಗಿ ಕೆಸ್ತರು ಸಮೀಪದ ಚರ್ಚ್ಗಳಿಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಚರ್ಚ್ಗಳು ವಿದ್ಯುತ್ ದೀಪಾಲಂಕಾರ, ನಕ್ಷತ್ರಗಳಿಂದ ಕಂಗೊಳಿಸುತ್ತಿದ್ದವು. ಯೇಸುವಿನ ಜನ್ಮದಿನದ ಪ್ರಯುಕ್ತ ಮಾಡಿದ್ದ ಗೋದಲಿ ಹಾಗೂ ಪುಟ್ಟ ಗೊಂಬೆಗಳ ಪ್ರದರ್ಶನ ಆಕರ್ಷಣೆಯ ಕೇಂದ್ರ ಬಿಂದು ಗಳಾಗಿದ್ದವು. ಏಸು ಕ್ರಿಸ್ತನ ಜನ್ಮ ವೃತ್ತಾಂತವನ್ನು ಗೋದಲಿಯಲ್ಲಿ ಪುಟ್ಟ ಗೊಂಬೆಗಳ ಮೂಲಕ ಪ್ರದರ್ಶಿಸಲಾಯಿತು. ಹಬ್ಬದ ಅಂಗವಾಗಿ ಚರ್ಚುಗಳಲ್ಲಿ ಯುವ ಸಂಘಟನೆಯ ಸದಸ್ಯರಿಂದ ವಿಶೇಷ ಸಾಂಸತಿಕ ಕಾರ್ಯಕ್ರಮ ನಡೆಯಿತು.
ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ನಲ್ಲಿ ಧರ್ಮಪ್ರಾಂತ್ಯದ ಧಮಾರ್ಧ್ಯಕ್ಷ ಡಾ.ಜೆರಾಲ್ಡ್ ಐಸಾಕ್ ಲೋಬೊ ಬಲಿಪೂಜೆ ಅರ್ಪಿಸಿ, ಹಬ್ಬದ ಸಂದೇಶ ನೀಡಿದರು.
ಧರ್ಮಪ್ರಾಂತ್ಯದ ಶ್ರೇಷ್ಠಗುರು ಹಾಗೂ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ಪ್ರಧಾನ ಧರ್ಮಗುರು ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್, ಸಹಾಯಕ ಧರ್ಮಗುರು ಪ್ರದಿಪ್ ಕಾಡೋರ್ಜಾ, ಕಥೊಲಿಕ್ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ವಿನ್ಸೆಂಟ್ ಕ್ರಾಸ್ತಾ, ಪಿಲಾರ್ ಸಭೆಯ ಪರೇಲ್ ಫೆರ್ನಾಂಡಿಸ್ ಉಪಸ್ಥಿತರಿದ್ದರು.
ಕ್ರಿಸ್ತ ಜಯಂತಿ ಶಾಂತಿ ಮತ್ತು ಭರವಸೆಯ ಸಮಯವಾಗಿದ್ದು ಬೆತ್ಲೆಹೇಮಿನ ದನದ ಕೊಟ್ಟಿಗೆಯಲ್ಲಿ ದೀನನಾಗಿ ಜನಿಸಿದ ಪ್ರಭು ಯೇಸುವಿನ ಜನನ, ದೇವರು ನಮ್ಮ ಮೇಲಿರಿಸಿದ ಪ್ರೀತಿ ಸ್ಮರಣೆಯಾಗಿದೆ. ದ್ವೇಷ, ಕಲಹ ವಿಭಜನೆ ಹಾಗೂ ಪ್ರಾಕೃತಿಕ ವಿಕೋಪಗಳಿಂದ ನಲುಗಿದ ಜಗತ್ತಿಗೆ ಕ್ರಿಸ್ತಜಯಂತಿಯ ಸಂದೇಶವು ದೇವರ ಅಪರಿಮಿತಿ ಪ್ರೀತಿ ಮತ್ತು ನಿರಂತರ ಪ್ರಸನ್ನತೆಯ ಪ್ರತಿಕವಾಗಿದೆ. ನಮ್ಮ ಮನೆ ಮನಗಳನ್ನು ಶಾಂತಿಯಿಂದ ನಮ್ಮ ಸಮುದಾಯಗಳನ್ನು ಸಾಮರಸ್ಯದಿಂದ ತುಂಬಲಿ.