ಕೆದಂಬಾಡಿ ಗ್ರಾಮದ ಸಾರಪುಣಿಯಲ್ಲಿರುವ ಮೃತ ಫಾತಿಮತ್ ನಿಶಾನ ಅವರ ಮನೆಗೆ ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಭೇಟಿ ನೀಡಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ, ವಕೀಲ ನೂರುದ್ದೀನ್ ಸಾಲ್ಮರ ಮತ್ತಿತರರು ಇದ್ದರು.  
ಉಡುಪಿ

ನಿಶಾನ ಕುಟುಂಬಕ್ಕೆ ನ್ಯಾಯ, ಸೂಕ್ತ ಪರಿಹಾರಕ್ಕೆ ಯತ್ನ

ಪುತ್ತೂರು ಗ್ರಾಮಾಂತರ: ಗಂಡನ ಮನೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಕೆದಂಬಾಡಿ ಗ್ರಾಮದ ಸಾರೆಪುಣಿಯ ಫಾತಿಮತ್ ನಿಶಾನ ಕುಟುಂಬಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಮತ್ತು ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸಿಕೊಡಲು ಎಲ್ಲ ಪ್ರಯತ್ನಮಾಡಲಾಗುವುದು. ಇಡೀ ಕುಟುಂಬದ ಜತೆ ನಾನಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಭರವಸೆ ನೀಡಿದರು.

ಫಾತಿಮತ್ ನಿಶಾನ ಅವರ ಮನೆಗೆ ಬುಧವಾರ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ ಸಚಿವರು, ಮನೆಯವರಿಂದ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಮಗಳನ್ನು ಕೊಲೆ ಮಾಡಿರುವುದು ಸಾಬೀತಾಗಿದ್ದರೂ ಇದುವರೆಗೂ ಫಾರೆನ್ಸಿಕ್ ರಿಪೋರ್ಟ್ ಬಂದಿಲ್ಲ ಎಂದು ಫಾತಿಮತ್ ನಿಶಾನ ಅವರ ತಾಯಿ ಜುಬೈದಾ ಸಚಿವರ ಗಮನಕ್ಕೆ ತಂದರು.

ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ದೇಹದ ಮೇಲಿದ್ದ ಗಾಯಗಳ ಆಧಾರದ ಮೇಲೆ ಈಗಾಗಲೇ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಪೋಸ್ಟ್‌ಮಾರ್ಟಂ ಮುಗಿದಿದ್ದು, ಮುಂದಿನ ಹಂತದ ತನಿಖೆ ನಡೆಯುತ್ತಿದೆ. ಫಾರೆನ್ಸಿಕ್ ರಿಪೋರ್ಟ್‌ಗೆ ಅದರದ್ದೇ ಆದ ಪ್ರಕ್ರಿಯೆಗಳಿದ್ದು ವರದಿ ಬರುವಾಗ ತಡವಾಗುತ್ತದೆ. ಈ ವಿಚಾರದಲ್ಲಿ ಯಾವುದೇ ಗೊಂದಲ ಬೇಡ ಎಂದು ಸಚಿವರು ತಿಳಿಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ, ವಕೀಲ ನೂರುದ್ದೀನ್ ಸಾಲ್ಮರ, ಕೆದಂಬಾಡಿ ವಲಯ ಕಾಂಗ್ರೆಸ್ ಅಧ್ಯಕ್ಷ ಪುರಂಧರ ರೈ ಕೋರಿಕ್ಕಾರ್, ಕಾರ್ಯದರ್ಶಿ ನೌಶಾದ್ ತಿಂಗಳಾಡಿ, ಪ್ರಮುಖರಾದ ಅಶೋಕ್ ಪೂಜಾರಿ ಬೊಳ್ಳಾಡಿ, ಇಕ್ಬಾಲ್ ಹುಸೇನ್ ಕೌಡಿಚ್ಚಾರ್, ಅಶ್ರಫ್ ಉಜಿರೋಡಿ, ಪಿ.ಕೆ.ಮಹಮ್ಮದ್, ಸಿದ್ದೀಕ್ ಸುಲ್ತಾನ್, ಮೆಲ್ವಿನ್ ಮೊಂತೆರೋ, ಹಬೀಬ್ ಕಣ್ಣೂರು, ಶೀನಪ್ಪ ನಾಯ್ಕ, ಬದ್ರುನ್ನೀಸಾ ಪರ್ಪುಂಜ, ಇಕ್ಬಾಲ್ ಬಾಳಿಲ, ಮುಖ್ತಾರ್ ಕುಂಬ್ರ, ತಾಜು ರಫೀಕ್ ರೆಂಜಲಾಡಿ ಮತ್ತಿತರರು ಇದ್ದರು.

ಪ್ರಕರಣದಲ್ಲಿ ಯಾವುದೇ ರೀತಿಯ ಲೋಪದೋಷಗಳು ಉಂಟಾಗದಂತೆ ಹಾಗೂ ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಮಾಡಲು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ವಕೀಲ ನೂರುದ್ದೀನ್ ಸಾಲ್ಮರ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಕಾನೂನು ಘಟಕವು ಸಂತ್ರಸ್ತ ಕುಟುಂಬದ ಪರವಾಗಿ ಕಾನೂನು ಹೋರಾಟ ನಡೆಸಲಿದೆ.

— ಯು.ಟಿ.ಖಾದರ್, ಜಿಲ್ಲಾ ಉಸ್ತುವಾರಿ ಸಚಿವ