ಉಡುಪಿಯ ಅಂಬಾಗಿಲು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾದ ಮೀನು ಲಾರಿ.
* ಉಡುಪಿಯ ಅಂಬಾಗಿಲು ಸಮೀಪ ಅಪಘಾತ
ಉಡುಪಿ: ಮಂಗಳೂರಿನಿಂದ ಗೋವಾದತ್ತ ಮೀನು ಸಾಗಿಸುತ್ತಿದ್ದ ಲಾರಿಯ ಟಯರ್ ಸ್ಫೋಟಗೊಂಡ ಪರಿಣಾಮ ನಿಯಂತ್ರಣ ತಪ್ಪಿ ರಸ್ತೆಯ ಬದಿಗೆ ಪಲ್ಟಿಯಾದ ಘಟನೆ ಉಡುಪಿಯ ಅಂಬಾಗಿಲು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ (ಮೇ 26) ಸಂಭವಿಸಿದೆ.
ಲಾರಿಯ ಹಿಂಬದಿಯ ಟಯರ್ ಸ್ಫೋಟಗೊಂಡಿದ್ದರಿಂದ ಚಾಲಕನಿಗೆ ವಾಹನದ ನಿಯಂತ್ರಣ ಮಾಡಲು ಆಗಲಿಲ್ಲ ಎಂದು ತಿಳಿದುಬಂದಿದೆ.
ಲಾರಿಯಲ್ಲಿ ಚಾಲಕ ಒಬ್ಬನೇ ಇದ್ದು, ಸಣ್ಣಪುಟ್ಟ ಗಾಯದೊಂದಿಗೆ ಜೀವಾಪಾಯದಿಂದ ಪಾರಾಗಿದ್ದಾನೆ. ಲಾರಿ ಸಂಪೂರ್ಣ ಜಖಂ ಆಗಿದೆ. ಅಪಘಾತ ನಡೆದಾಗ ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ವಾಹನ ತೆರವು ಕಾರ್ಯ ಕೈಂಡರು. ಅಪಘಾತದಿಂದಾಗಿ ಕೆಲಕಾಲ ಇನ್ನಿತರ ವಾಹನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು.