ಲಕ್ಷಿ$್ಮ ಹೆಬ್ಬಾಳಕರ್ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು.
ಉಡುಪಿ: ಸೈಂಟ್ ಮೇರಿಸ್ ಸೇರಿದಂತೆ ರಾಜ್ಯದಲ್ಲಿರುವ 116 ಐಲ್ಯಾಂಡ್ಗಳೂ ರ್ನಿಲಕ್ಷ್ಯಕ್ಕೊಳಗಾಗಿದೆ. ಇಂತಹ ಅತ್ಯದ್ಭುತ ಸಂಪನ್ಮೂಲಗಳಿದ್ದರೂ ಪ್ರವಾಸೋದ್ಯಮದ ದೃಷ್ಟಿಯಿಂದ ಬಳಸಿಕೊಳ್ಳಲು ವಿಫಲರಾಗಿದ್ದೇವೆ. ಹೀಗಾಗಿ ಸಂಪೂರ್ಣ ಕರಾವಳಿ ಭಾಗದಲ್ಲಿ ಹೊಸ ದೃಷ್ಟಿಕೋನದಿಂದ ಪ್ರವಾಸೋದ್ಯಮ ಬೆಳೆಸುವುದಕ್ಕೆ ರಾಜ್ಯ ಸರ್ಕಾರ ಉತ್ಸುಕವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷಿ$್ಮ ಹೆಬ್ಬಾಳಕರ್ ಹೇಳಿದ್ದಾರೆ.
ಸೇಂಟ್ ಮೇರೀಸ್ ಐಲ್ಯಾಂಡ್ ನಲ್ಲಿ ಸೋಮವಾರ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಕರ್ನಾಟಕದ ಅತೀ ದೊಡ್ಡ ಐಲ್ಯಾಂಡ್ ಎನ್ನುವ ಹೆಮ್ಮೆಗೆ ಕೂಡ ಪಾತ್ರವಾಗಿರುವ ಸೇಂಟ್ ಮೇರೀಸ್ ಐಲ್ಯಾಂಡ್ನಲ್ಲಿ ಧ್ವಜಾರೋಹಣ ನೆರವೇರಿಸುವ ಸೌಭಾಗ್ಯ ನನಗೆ ಸಿಕ್ಕಿದೆ. ಮೊಟ್ಟ ಮೊದಲ ಬಾರಿಗೆ ಕರಾವಳಿ ಕಾವಲು ಪಡೆಯ 11 ಬೋಟ್ ಗಳನ್ನು ಇನಸ್ಪೆಕ್ಷನ್ ಮಾಡಿದೆ. ಇದು ನನಗೆ ಬಹಳ ರೋಮಾಂಚಕಾರಿ ಅನುಭವವಾಗಿದೆ ಎಂದರು.
ಕರಾವಳಿ ಕಾವಲುಪಡೆಯ ಪೊಲೀಸರು, ಉದ್ಯೋಗದ ಜೊತೆಗೆ ರಾಷ್ಟ್ರ ರಕ್ಷಣೆಯಲ್ಲೂ ಮಾಹಿತಿದಾರರಾಗಿ ಕೆಲಸ ಮಾಡುತ್ತಿರುವ ಮೀನುಗಾರರು, ಬೀಚ್ ಸ್ವಚ್ಛತೆಗೆಂದು ಬಂದಿರುವ ಸ್ವಯಂ ಸೇವಕರು, ಕರಾವಳಿ ನಾವಿಕ ದಳದ ಸಿಬ್ಬಂದಿ, ದೇಶದ ಸುರಕ್ಷತೆಗಾಗಿ ಮತ್ತು ಜನರ ಸುರಕ್ಷತೆಗಾಗಿ ಜೀವವನ್ನೇ ಪಣಕ್ಕಿಟ್ಟು ಹಗಲು -ರಾತ್ರಿ ಕೆಲಸ ಮಾಡುತ್ತಿದ್ದು, ನಿಜವಾದ ದೇಶಭಕ್ತರು, ನಿಜವಾದ ಹೀರೋಗಳಾಗಿದ್ದಾರೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗಫೂರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಧಿಕಾರಿ ಟಿ.ಕೆ.ಸ್ವರೂಪ, ಜಿಲ್ಲಾ ಪಂಚಾಯಿತಿ ಸಿಇಓ ಪ್ರತಿಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಉಪಸ್ಥಿತರಿದ್ದರು.