ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಮೇಲ್ಛಾವಣಿ ನಿರ್ಮಾಣಕ್ಕೆ ಧಾರ್ಮಿಕ ವಿಧಿ ನೆರವೇರಿತು. ಪ್ರಧಾನ ಅರ್ಚಕ ಶಂಕರನಾರಾಯಣ ಹೊಳ್ಳ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಜಗನ್ನಾಥ ಚೌಟ ಬದಿಗುಡ್ಡೆ ಮೊದಲಾದವರಿದ್ದರು.  
ಉಡುಪಿ

ಸರಪಾಡಿ ದೇವಳ ಮೇಲ್ಛಾವಣಿಗೆ ಶಿಲಾನ್ಯಾಸ

ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಹೊರಾಂಗಣದ ಮುಂಭಾಗ ಮೇಲ್ಛಾವಣಿ ನಿರ್ಮಾಣಕ್ಕೆ ಶಿಲಾನ್ಯಾಸ ಸಮಾರಂಭ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನೆರವೇರಿತು.
ದೇವಸ್ಥಾನದ ಪ್ರಧಾನ ಅರ್ಚಕ ಶಂಕರನಾರಾಯಣ ಹೊಳ್ಳ ಪೂಜಾ ವಿಧಿ ನೆರವೇರಿಸಿದರು. ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಜಗನ್ನಾಥ ಚೌಟ ಬದಿಗುಡ್ಡೆ, ಮಣಿನಾಲ್ಕೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ರಾಧಾಕೃಷ್ಣ ಮಯ್ಯ ಕೈಯೊಟ್ಟು, ಪ್ರಗತಿಪರ ಕೃಷಿಕರಾದ ಸುರೇಶ್ ಶೆಟ್ಟಿ ನಡುಮೊಗರು, ನಾಣ್ಯಪ್ಪ ಪೂಜಾರಿ ಪಡ್ಡಾಯೂರು, ಶಂಭೂರು ಎಎಂಆರ್ ಪವರ್ ಪ್ರಾಜೆಕ್ಟ್‌ನ ಎಚ್‌ಆರ್ ಮ್ಯಾನೇಜರ್ ಸುನೀಲ್ ಶೆಟ್ಟಿ, ಪ್ಲಾೃಂಟ್ ಮ್ಯಾನೇಜರ್ ಭಾಗ್ಯರಾಜ್ ಮೊದಲಾದವರಿದ್ದರು.
ನಿರ್ಮಾಣ ಸಂಸ್ಥೆಯ ಪರವಾಗಿ ಕೆ.ಟಿ.ಪೂಜಾರಿ ಹಾಗೂ ಸಿವಿಲ್ ಇಂಜಿನಿಯರ್ ಶರತ್ ಅವರಿಗೆ ನಿರ್ಮಾಣ ಕಾರ್ಯಕ್ಕೆ ವೀಳ್ಯ ನೀಡಲಾಯಿತು. ದೇವಸ್ಥಾನದ ಆಡಳಿತ ಸಮಿತಿ, ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ರಾಧಾಕೃಷ್ಣ ರೈ ಕೊಟ್ಟುಂಜ ಸ್ವಾಗತಿಸಿ, ವಂದಿಸಿದರು.