ತಿರುವನಂತಪುರದ ಶಿವಗಿರಿ ಮಠದ ಶ್ರೀ ಜ್ಞಾನತೀರ್ಥ ಸ್ವಾಮೀಜಿ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಉಳ್ಳಾಲ ಶ್ರೀ ಚೀರುಂಭಾ ಭಗವತಿ ಕ್ಷೇತ್ರದ ಆಡಳಿತ ಮೊಕ್ತೇಸರ ಸುರೇಶ್ ಭಟ್ನಗರ, ಅಧ್ಯಕ್ಷ ಚಿದಾನಂದ ಗುರಿಕಾರ ನಂದ್ಯ, ತೀಯಾ ಸೇವಾ ಸಹಕಾರ ಸಂಘದ ಅಧ್ಯಕ್ಷ ಎಂ.ದಿನೇಶ್ ಕುಂಪಲ ಇನ್ನಿತರರು ಉಪಸ್ಥಿತರಿದ್ದರು.
ವಿಜಯವಾಣಿ ಸುದ್ದಿಜಾಲ ಉಳ್ಳಾಲ
ರಾಜ್ಯ ಸರ್ಕಾರ ಬಂಟ್ವಾಳದಲ್ಲಿ ನೀಡಿರುವ ಏಳು ಎಕರೆ ಜಮೀನಿನಲ್ಲಿ ಕರ್ನಾಟಕದ ಶಿವಗಿರಿ ಮಠ ನಿರ್ಮಾಣವಾಗಲಿದ್ದು, 2028ರಲ್ಲಿ ಶ್ರೀ ನಾರಾಯಣಗುರುಗಳ ಮಹಾಸಮಾಧಿ ಶತಾಬ್ಧಿಯಂದೇ ಉದ್ಘಾಟನೆಯಾಗಲಿದೆ. ಮಹಿಳೆಯರು ಗುರುಗಳ ಭಕ್ತರಾಗಬೇಕೆನ್ನುವ ನೆಲೆಯಲ್ಲಿ ಮಹಿಳೆಯರಿಗಾಗಿ ನಿರ್ಮಿಸುವ ಮಠವಾಗಿದ್ದು, ಮುಂದಿನ ಮೂರು ತಿಂಗಳೊಳಗೆ ಮಹಾಸಮ್ಮೇಳನ ನಡೆಸಿ ರಾಹುಲ್ ಗಾಂಧಿ ಶಿಲಾನ್ಯಾಸ ನಡೆಸಲಿದ್ದಾರೆಂದು ತಿರುವನಂತಪುರದ ಶಿವಗಿರಿ ಮಠದ ಶ್ರೀ ಜ್ಞಾನತೀರ್ಥ ಸ್ವಾಮೀಜಿ ಹೇಳಿದರು.
ತೀಯಾ ಸೇವಾ ಸಹಕಾರ ಸಂಘದಿಂದ ಜೆಪ್ಪು ಮಹಾಕಾಳಿಪಡ್ಪು ಖಾಸಗಿ ಸಭಾಂಗಣದಲ್ಲಿ ಭಾನುವಾರ ದಶಮಾನೋತ್ಸವ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.
ಸಚಿವ ಯು.ಟಿ.ಖಾದರ್ ದಶಮಾನೋತ್ಸವ ಉದ್ಘಾಟಿಸಿದರು. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಉಳ್ಳಾಲ ಶ್ರೀ ಚೀರುಂಭಾ ಭಗವತಿ ಕ್ಷೇತ್ರದ ಆಡಳಿತ ಮೊಕ್ತೇಸರ ಸುರೇಶ್ ಭಟ್ನಗರ, ಅಧ್ಯಕ್ಷ ಚಿದಾನಂದ ಗುರಿಕಾರ ನಂದ್ಯ, ವಿದಾನಪರಿಷತ್ ಸದಸ್ಯ ಐವನ್ ಡಿಸೋಜ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ, ಕೆಪಿಸಿಸಿ ಕಾರ್ಯದರ್ಶಿ ಪದ್ಮರಾಜ್ ಪೂಜಾರಿ, ಉದ್ಯಮಿ ಉಮೇಶ್ ಬೆಂಜನಪದವು, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಉಪಾಧ್ಯಕ್ಷೆ ಸುರೇಖಾ ಚಂದ್ರಹಾಸ, ಸೋಮೇಶ್ವರ ಪುರಸಭಾ ಉಪಾಧ್ಯಕ್ಷ ರವಿಶಂಕರ್, ಅಂಚೆ ಇಲಾಖೆಯ ಶೈಲೇಶ್ ಕುಮಾರ್, ರಾಜ್‌ಗೋಪಾಲ್, ರಾಜ್ಯ ಆಹಾರ ಅಯೋಗ ಸದಸ್ಯ ನಿರ್ದೇಶಕ ಸುಮಂತ್, ಎಂಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಫ್ರಾನ್ಸಿಸ್ ಕುಟಿನ್ಹಾ ಮೊದಲಾದವರು ಉಪಸ್ಥಿತರಿದ್ದರು. ತೀಯಾ ಸೇವಾ ಸಹಕಾರ ಸಂಘದ ಅಧ್ಯಕ್ಷ ಎಂ.ದಿನೇಶ್ ಕುಂಪಲ ಸ್ವಾಗತಿಸಿದರು. ಪತ್ರಕರ್ತ ಸತೀಶ್ ಕುಮಾರ್ ಪುಂಡಿಕೈ ಕಾರ್ಯಕ್ರಮ ನಿರೂಪಿಸಿದರು.