ಕಿಲ್ಪಾಡಿ ಶ್ರೀ ಕೋರ್ದಬ್ಬು ದೈವಸ್ಥಾನದಲ್ಲಿ ಲಕ್ಷಾಂತರ ರೂ. ಮೌಲ್ಯದ ಸೊತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂಲ್ಕಿ ಪೊಲೀಸರು ನಾಲ್ವರನ್ನು ಬಂಧಿಸಿದ್ದು ಉಳಿದ ಇಬ್ಬರು ಆರೋಪಿಗಳಿಗೆ ಬಲೆ ಬೀಸಿದ್ದಾರೆ.
ಮೂಲ್ಕಿ: ಕಿಲ್ಪಾಡಿ ಶ್ರೀ ಕೋರ್ದಬ್ಬು ದೈವಸ್ಥಾನದಲ್ಲಿ ಲಕ್ಷಾಂತರ ರೂ. ಮೌಲ್ಯದ ಸೊತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂಲ್ಕಿ ಪೊಲೀಸರು ನಾಲ್ವರನ್ನು ಬಂಧಿಸಿದ್ದು ಉಳಿದ ಇಬ್ಬರು ಆರೋಪಿಗಳಿಗೆ ಬಲೆ ಬೀಸಿದ್ದಾರೆ.
ಬಂಧಿತ ಆರೋಪಿಗಳನ್ನು ಪಡುಬಿದ್ರಿ ಕಂಚಿನಡ್ಕ ನಿವಾಸಿ ಜಾಹಿದ್ ಸಿನಾನ್(26), ಕಾರ್ನಾಡು ನಿವಾಸಿ ಯಾಸಿನ್(36), ದಾವಣಗೆರೆ ನಿವಾಸಿಗಳಾದ ಅಬ್ದುಲ್ ಜುಮಾಲ್(24), ಮಹಮ್ಮದ್ ಆಫ್ರಿದ್(24) ಎಂದು ಗುರುತಿಸಲಾಗಿದೆ.
ಕಳ್ಳತನದಲ್ಲಿ ಭಾಗಿಯಾಗಿದ್ದ ಇನ್ನಿಬ್ಬರ ಶೋಧ ಕಾರ್ಯ ಮುಂದುವರಿದಿದೆ. ಆರೋಪಿಗಳು ಕಳ್ಳತನ ನಡೆಸಿದ 36 ಲಕ್ಷ ರೂ. ಮೌಲ್ಯದ ಬೆಳ್ಳಿ, ಬಂಗಾರದ ಸೊತ್ತುಗಳ ಬಗ್ಗೆ ಸ್ಪಷ್ಟವಾಗಿ ಮಾಹಿತಿ ಲಭ್ಯವಾಗಿಲ್ಲ.