ಸಂಘದ 2026-&27ನೇ ಸಾಲಿನ ಸದಸ್ಯತ್ವ ಕಾರ್ಡ್ಗಳನ್ನು ವಿತರಿಸಲಾಯಿತು.
ಉಡುಪಿ: ಒತ್ತಡದ ವೃತ್ತಿ ಬದುಕಿನಲ್ಲಿರುವ ಪತ್ರಕರ್ತರು ದಿನಕ್ಕೆ 45 ನಿಮಿಷ ವ್ಯಾಯಮ, ವಾಕಿಂಗ್ಗೆ ಮೀಸಲಿರಿಸಬೇಕು. ಈ ಮೂಲಕ ಆರೋಗ್ಯವನ್ನು ಕಾಪಾಡಬೇಕು. ಪ್ರತಿ ಆರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ನಡೆಸಬೇಕು ಎಂದು ಜಿಲ್ಲಾ ಸರ್ಜನ್ ಡಾ.ಎಚ್.ಅಶೋಕ್ ಹೇಳಿದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಿಕಾ ಭವನ ಸಮಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ಎನ್.ಸಿ.ಡಿ. ವಿಭಾಗ ಉಡುಪಿ, ಜಿಲ್ಲಾ ಸರ್ವೇಕ್ಷಣ ಘಟಕ, ರಾಷ್ಟ್ರೀಯ ಆರೋಗ್ಯ ಅಭಿಯಾನ ಉಡುಪಿ, ಆದರ್ಶ ಆಸ್ಪತ್ರೆ, ಪ್ರಸಾದ್ ನೇತ್ರಾಲಯ ಸಹಯೋಗದೊಂದಿಗೆ ನಡೆದ ಉಚಿತ ಆರೋಗ್ಯ ಶಿಬಿರದಲ್ಲಿ ಅವರು ಮಾತನಾಡಿದರು.
ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಬಸವರಾಜ ಹುಬ್ಬಳ್ಳಿ ಉದ್ಘಾಟಿಸಿದರು.
ವಾರ್ತಾಧಿಕಾರಿ ಮಂಜುನಾಥ್ ಮಾತನಾಡಿದರು. ಅಧ್ಯಕ್ಷತೆಯನ್ನು ಸಂಘದ ಜಿಲ್ಲಾಧ್ಯಕ್ಷ ಸುಬ್ರಹ್ಮಣ್ಯ ಜಿ.ಕುರ್ಯ ವಹಿಸಿದ್ದರು. ವೇದಿಕೆಯಲ್ಲಿ ರಾಜ್ಯ ಸಮಿತಿ ಸದಸ್ಯ ಅಸ್ಟ್ರೊ ಮೋಹನ್, ಜಿಲ್ಲಾ ಕೋಶಾಧಿಕಾರಿ ಹರೀಶ್ ಕುಂದರ್ ಉಪಸ್ಥಿತರಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿ, ವಂದಿಸಿದರು. ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಕಾರ್ಯಕ್ರಮ ನಿರೂಪಿಸಿದರು.
ಶಿಬಿರದಲ್ಲಿ ಮಧುಮೇಹ, ರಕ್ತದೊತ್ತಡ, ಇಸಿಜಿ, ಹಿಮೋಗ್ಲೋಬಿನ್ ಪರೀಕ್ಷೆ, ಕೊಲೆಸ್ಟ್ರಾಲ್, ಕಣ್ಣಿನ ಪರೀಕ್ಷೆಗಳನ್ನು ನಡೆಸಲಾಯಿತು. 100ಕ್ಕೂ ಅಧಿಕ ಪತ್ರಕರ್ತರು ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದುಕೊಂಡರು. ಇದೇ ಸಂದರ್ಭದಲ್ಲಿ ಸಂಘದ 2026-&27ನೇ ಸಾಲಿನ ಸದಸ್ಯತ್ವ ಕಾರ್ಡ್ಗಳನ್ನು ವಿತರಿಸಲಾಯಿತು.