ಹೆಬ್ರಿ ತಾಲೂಕು ಆಡಳಿತ ವತಿಯಿಂದ ಆಯೋಜಿಸಲಾಗಿದ್ದ ಸ್ವಾತಂತ್ರೊೃೀತ್ಸವ ಕಾರ್ಯಕ್ರಮದಲ್ಲಿ ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಪ್ರಮುಖರಾದ ರಾಕೇಶ್ ಫ್ರಾನ್ಸಿಸ್ ಬ್ರೀಟ್ಟೋ, ಶಂಕರ್ ಶೇರಿಗಾರ್, ಮುದ್ರಾಡಿ ಮಂಜುನಾಥ ಪೂಜಾರಿ ಮತ್ತಿತರರಿದ್ದರು.
ಹೆಬ್ರಿ: ಮಹಾನಾಯಕರು ಮತ್ತು ಲಕ್ಷಾಂತರ ಮಂದಿಯ ತ್ಯಾಗ ಬಲಿದಾನದಿಂದ ನಮಗೆ ಸ್ವಾತಂತ್ರ್ಯ ದೊರಕಿದೆ. ಪ್ರತಿಯೊಬ್ಬ ಭಾರತೀಯರ ಪಾಲಿಗೂ ಇಂದು ಪವಿತ್ರ ದಿನವಾಗಿದ್ದು, ನಾವೆಲ್ಲರೂ ಮಹಾನ್ ನಾಯಕರನ್ನು ಸ್ಮರಿಸಬೇಕಾಗಿದೆ ಎಂದು ಹೆಬ್ರಿ ತಹಸೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರೀಟ್ಟೋ ಹೇಳಿದರು.
ಹೆಬ್ರಿ ತಾಲೂಕು ಆಡಳಿತ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಹೆಬ್ರಿ ಪೊಲೀಸರ ನೇತೃತ್ವದಲ್ಲಿ ಪಥಸಂಚಲನ ನಡೆಯಿತು. ಬಳಿಕ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಹೆಬ್ರಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಂಕರ್ ಶೇರಿಗಾರ್ ಉದ್ಘಾಟಿಸಿದರು. ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ನಾರಾಯಣ ಗುರು ಅಭಿವೃದ್ಧಿ ನಿಗಮ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ, ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘ ಅಧ್ಯಕ್ಷ ನವೀನ್ ಕೆ.ಅಡ್ಯಂತಾಯ, ಉಪ ತಹಸೀಲ್ದಾರ್ ರಾವೇಂದ್ರ ನಾಯಕ್, ಲಾಯೆನ್ಸ್ ಸುಜ್ಯೋತಿ, ಕಂದಾಯ ನಿರೀಕ್ಷಕ ಸುಧೀರ್, ಪ್ರಮುಖರಾದ ಡಾ.ವಿದ್ಯಾಧರ ಹೆಗ್ಡೆ, ವಿಜಯ ಕುವಾರ್, ದಿವಾಕರ ಮರಕಾಲ, ವಿಜೇಂದ್ರ ಶೆಟ್ಟಿ, ದಿನೇಶ ಡಿಇ, ಶಶಿಕಲಾ ಡಿ.ಪೂಜಾರಿ, ಹರ್ಷ ಶೆಟ್ಟಿ, ಪ್ರವೀಣ್ ಕುವಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.