ಗ್ಯಾಸ್ ಸಿಲಿಂಡರ್ ಸೋರಿಕೆ ಘಟನಾ ಸ್ಥಳ.  
ಉಡುಪಿ

ಮಿಜಾರಿನಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆ

ಮೂಡುಬಿದಿರೆ: ಮಿಜಾರ್ ಬಳಿ ಬಾಡಿಗೆ ಮನೆಯಲ್ಲಿ ಮಂಗಳವಾರ ಬೆಳಗ್ಗೆ ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡು ಮೂವರಿಗೆ ಸುಟ್ಟ ಗಾಯಗಳಾಗಿದ್ದು, ಓರ್ವನಿಗೆ ಗಂಭೀರ ಗಾಯವಾಗಿದೆ.

ಆ.11ರಂದು ಬೆಳಗ್ಗೆ 6.30ರ ಸುಮಾರಿಗೆ ಆಳ್ವಾಸ್ ಕಾಲೇಜಿನಲ್ಲಿ ವಾಚ್‌ಮನ್ ಆಗಿ ಕೆಲಸ ಮಾಡುತ್ತಿರುವ ಶಿವರಾಮ(31), ಅವರ ಪತ್ನಿ ಗಂಗಾ(25), ಪುತ್ರ ಆದರ್ಶ್(6) ಇದ್ದ ಬಾಡಿಗೆ ಮನೆಯಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ ಶಿವರಾಮ ಅವರಿಗೆ ತೀವ್ರ ಸ್ವರೂಪದ ಸುಟ್ಟ ಗಾಯಗಳಾಗಿದ್ದು, ಗಂಗಾ ಹಾಗೂ ಆದರ್ಶ್ ಅವರಿಗೂ ಗಾಯಗವಾಗಿದೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಡುಬಿದಿರೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.