ACCIDENT 
ಉಡುಪಿ

ಕಾರು ಡಿಕ್ಕಿಯಾಗಿ ಬಾಲಕಿ ಸಾವು

ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ಮುಳೂರಿನಲ್ಲಿ ಭಾನುವಾರ ಕಾರು ಡಿಕ್ಕಿಯಾಗಿ ಬಾಗಲಕೋಟೆಯ ಬಾದಾಮಿ ಮೂಲದ ಬಾಲಕಿ ತನುಶ್ರೀ(13) ಎಂಬುವರು ಮೃತಪಟ್ಟಿದ್ದಾರೆ.

ಪ್ರಸ್ತುತ ಮೂಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿರುವ ಮಳಿಯಪ್ಪ ಅವರ ಪುತ್ರಿ ತನುಶ್ರೀ ಟ್ಯೂಷನ್ ಮುಗಿಸಿ ಮನೆಗೆ ತೆರಳಲು ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿದೆ.

ಘಟನೆಯಿಂದ ಗಂಭೀರ ಗಾಯಗೊಂಡಿದ್ದ ಬಾಲಕಿಯನ್ನು ಸ್ಥಳೀಯರು ಉಡುಪಿ ಆಸ್ಪತ್ರೆಗೆ ಸಾಗಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.