ಶಾಲಾ ಬಸ್ ಮೇಲೆ ಬಿದ್ದಿರುವ ಬೃಹತ್ ಮರ.  
ಉಡುಪಿ

ಶಾಲಾ ಬಸ್ ಮೇಲೆ ಮರ ಬಿದ್ದು ಬಾಲಕಿ ಸಾವು

ಬಂಟ್ವಾಳ(ದ.ಕ.): ಶಾಲೆಯಿಂದ ವಿದ್ಯಾರ್ಥಿಗಳನ್ನು ಮನೆಗಳಿಗೆ ಕರೆದೊಯ್ಯುತ್ತಿದ್ದ ಕಲ್ಲಡ್ಕದ ಖಾಸಗಿ ಶಾಲಾ ಬಸ್ ಮೇಲೆ ಬುಧವಾರ ಸಂಜೆ ಬರಿಮಾರು ಸಮೀಪದ ಕಲ್ಲೆಟ್ಟಿ ದೈವಸ್ಥಾನದ ಬಳಿ ಬೃಹತ್ ಗಾತ್ರದ ಮರ ಉರುಳಿ ಬಿದ್ದು ಓರ್ವ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ನಾಲ್ವರು ಗಾಯಗೊಂಡಿದ್ದಾರೆ.
ಚಿರಣ್ವಿ(6) ಮೃತ ಬಾಲಕಿ. ಗಾಯಾಳುಗಳನ್ನು ಸ್ಥಳೀಯರ ನೆರವಿನಿಂದ ತಕ್ಷಣ ಪುತ್ತೂರು ಹಾಗೂ ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೀ ಕಾನಲ್ತಾಯ ದೈವಸ್ಥಾನದ ಪಕ್ಕದಲ್ಲಿ ಚಲಿಸುತ್ತಿದ್ದ ಶಾಲಾ ವಾಹನದ ಮೇಲೆ ಮರ ಬಿದ್ದಿದೆ.
ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿ ಬಸ್‌ನೊಳಗಿದ್ದ ಮಕ್ಕಳನ್ನು ಸುರಕ್ಷಿತವಾಗಿ ಹೊರಗೆ ತೆಗೆದಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಭಾರಿ ಮಳೆಯಿದ್ದ ಕಾರಣ ಮರ ಉರುಳಿ ಬಿದ್ದಿರುವುದಾಗಿ ತಿಳಿದು ಬಂದಿದೆ.