ಸುಣ್ಣಾರಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ಗುರು ಪೂರ್ಣಿಮೆ ಕಾರ್ಯಕ್ರಮವನ್ನು ಬಸ್ರೂರು ಶ್ರೀ ಶಾರದಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಕೆ.ರಾಧಾಕೃಷ್ಣ ಶೆಟ್ಟಿ ಉದ್ಘಾಟಿಸಿದರು. ಪ್ರಮುಖರಾದ ಎಂ.ಮಹೇಶ್ ಹೆಗ್ಡೆ, ನಾಗರಾಜ್ ಶೆಟ್ಟಿ, ಸರೋಜಿನಿ ಪಿ.ಆಚಾರ್ಯ, ವಿಶಾಲ ಶೆಟ್ಟಿ ಉಪಸ್ಥಿತರಿದ್ದರು.  
ಉಡುಪಿ

ಗುರು ಕಲಿಸಿದ ಶಿಕ್ಷಣಕ್ಕೆ ನೀಡಿ ಸೂಕ್ತ ಪ್ರತಿಫಲ

ಕುಂದಾಪುರ: ಅಜ್ಞಾನವೆಂಬ ಕತ್ತಲನ್ನು ಹೋಗಲಾಡಿಸಿ ಜ್ಞಾನವೆಂಬ ಬೆಳಕನ್ನು ಮೂಡಿಸುವವನೇ ಗುರು. ಪ್ರತಿಯೊಬ್ಬ ವಿದ್ಯಾರ್ಥಿ ತನ್ನ ಜೀವನದಲ್ಲಿ ಶಿಸ್ತನ್ನು ಅಳವಡಿಸಿಕೊಂಡು ಗುರುಗಳು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯಬೇಕು. ವೈಯಕ್ತಿಕ ಹಾಗೂ ಸುತ್ತಮುತ್ತಲಿನ ಸ್ವಚ್ಛತೆ ಕಡೆಗೆ ಗಮನ ಕೊಡುತ್ತ, ಗುರು ನೀಡಿದ ಶಿಕ್ಷಣಕ್ಕೆ ಸೂಕ್ತ ಪ್ರತಿಫಲ ನೀಡಬೇಕು ಎಂದು ಬಸ್ರೂರು ಶ್ರೀ ಶಾರದಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಕೆ.ರಾಧಾಕೃಷ್ಣ ಶೆಟ್ಟಿ ಹೇಳಿದರು.
ಕುಂದಾಪುರದ ಸುಣ್ಣಾರಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ಗುರುಪೂರ್ಣಿಮೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಂಸ್ಥೆಯ ಸ್ಥಾಪಕ ಎಂ.ಮಹೇಶ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಎಕ್ಸಲೆಂಟ್ ವಿದ್ಯಾಸಂಸ್ಥೆಯ ಅತ್ಯುತ್ತಮ ಶೈಕ್ಷಣಿಕ ಫಲಿತಾಂಶಕ್ಕೆ ಶ್ರಮಿಸಿದ ಉಪನ್ಯಾಸಕರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿನಿ ಅದ್ವಿತ ಗುರುಪೂರ್ಣಿಮೆ ವಿಶೇಷತೆ ಕುರಿತು ಮಾತನಾಡಿದರು. ಸಂಸ್ಥೆ ಪ್ರಾಂಶುಪಾಲ ನಾಗರಾಜ್ ಶೆಟ್ಟಿ, ಹೈಸ್ಕೂಲು ವಿಭಾಗದ ಮುಖ್ಯಸ್ಥೆ ಸರೋಜಿನಿ ಪಿ.ಆಚಾರ್ಯ ಹಾಗೂ ಸಿಬಿಎಸ್‌ಸಿ ವಿಭಾಗ ಮುಖ್ಯಸ್ಥ ವಿಶಾಲ ಶೆಟ್ಟಿ ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಾದ ಪ್ರಜ್ಞಾ ಹಾಗೂ ಪ್ರಕೃತಿ ಕಾರ್ಯಕ್ರಮ ನಿರೂಪಿಸಿದರು. ಪೂರ್ವಿ ಸಿ. ಸ್ವಾಗತಿಸಿದರು. ಸನ್ನಿಧಿ ಎಂ.ನಾಯರ್ ಅತಿಥಿಗಳನ್ನು ಪರಿಚಯಿಸಿದರು. ಆಯುಷ್ ಅಲೈನ ವಂದಿಸಿದರು.