ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಪ್ರಮುಖರಾದ ಡಾ.ವ್ಯಾಸರಾಜ ತಂತ್ರಿ, ಡಾ.ಸುಧಾಕರ ಶೆಟ್ಟಿ, ಶ್ರೀನಿಧಿ ಭಾಗವತ್ ಮತ್ತಿತರರು ಇದ್ದರು.
ವಿಜಯವಾಣಿ ಸುದ್ದಿಜಾಲ ಕಾರ್ಕಳ
ಜ್ಞಾನಸುಧಾ ಶಿಕ್ಷಣ ಸಂಸ್ಥೆಯಿಂದ ಒಂದು ವರ್ಷಕ್ಕೆ 227 ವಿದ್ಯಾರ್ಥಿಗಳು ಎಂ.ಬಿ.ಬಿ.ಎಸ್.ಗೆ ಸೇರ್ಪಡೆಯಾಗಿರುವುದು ರಾಜ್ಯಕ್ಕೆ ವಾತ್ರವಲ್ಲ ದೇಶಕ್ಕೆ ವಾದರಿ. ಜ್ಞಾನಸುಧಾದಂತಹ ಸಂಸ್ಥೆಯನ್ನು ಸೃಷ್ಟಿ ವಾಡಲು ಯಾವ ಸರ್ಕಾರಕ್ಕೂ ಸಾಧ್ಯವಿಲ್ಲ. ಇಂತಹ ಸಂಸ್ಥೆಯನ್ನು ದೇಶಕ್ಕೆ ಕೊಡುಗೆಯಾಗಿ ನೀಡಿ ಬದುಕಿಗಿಂತ ದೇಶ ಮಿಗಿಲೆಂಬ ಡಾ.ಸುಧಾಕರ ಶೆಟ್ಟಿ ಅವರ ಗುಣ ಅನುಕರಣೀಯ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ಆಯೋಜಿಸಿದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಾತನಾಡಿದರು.
ಉಡುಪಿ ಗಾಂಧಿ ಆಸ್ಪತ್ರೆ ಮೆಡಿಕಲ್ ಡೈರೆಕ್ಟರ್ ಡಾ.ವ್ಯಾಸರಾಜ ತಂತ್ರಿ ಮಾತನಾಡಿದರು. ಅಜೆಕಾರು ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ಸುಧಾಕರ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು.
ದ್ವಿತೀಯ ಪಿಯುಸಿ ಪರೀಕ್ಷೆ ಸಾಧಕ ವಿದ್ಯಾರ್ಥಿಗಳಿಗೆ ಮತ್ತು ಪ್ರಥಮ ಪಿಯುಸಿಯ ಸಾಧಕ ವಿದ್ಯಾರ್ಥಿಗಳಿಗೆ, ಉಪನ್ಯಾಸಕರಿಗೆ ಅಜೆಕಾರು ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ವತಿಯಿಂದ 39 ಲಕ್ಷದ 20 ಸಾವಿರ ರೂ. ಪ್ರೋತ್ಸಾಹ ಧನ ನೀಡಲಾಯಿತು.
ಉಡುಪಿ ಜ್ಞಾನಸುಧಾ ಪ್ರಾಂಶುಪಾಲೆ ಶ್ರೀನಿಧಿ ಭಾಗವತ್, ಮಣಿಪಾಲ ಜ್ಞಾನಸುಧಾ ಪ್ರಾಂಶುಪಾಲ ಗಣೇಶ್ ಶೆಟ್ಟಿ, ಅಜೆಕಾರು ಜ್ಞಾನಸುಧಾ ಪ್ರಾಂಶುಪಾಲ ಸಂತೋಷ್, ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಡೀನ್ ಅಕಾಡೆಮಿಕ್ಸ್ ಡಾ.ಮಿಥನ್ ಯು., ಕಾರ್ಕಳ ಜ್ಞಾನಸುಧಾ ಆಂಗ್ಲ ವಾಧ್ಯಮ ಪ್ರೌಢಶಾಲೆ ಉಪಪ್ರಾಂಶುಪಾಲೆ ವಾಣಿ ಕೆ., ಉಪ ಪ್ರಾಂಶುಪಾಲ ಪ್ರಕಾಶ್ ಜೋಗಿ ಉಪಸ್ಥಿತರಿದ್ದರು. ಉಪನ್ಯಾಸಕಿ ಜೋತ್ಸ್ನಾ ಕಾರ್ಯಕ್ರಮ ನಿರೂಪಿಸಿದರು.
ವೈದ್ಯೋ ನಾರಾಯಣೋ ಹರಿ ಎಂಬಂತೆ ಡಾ.ವ್ಯಾಸರಾಜ ತಂತ್ರಿಗಳು ಶ್ರೇಷ್ಠ ಕೈಂಕರ್ಯ ವಾಡುತ್ತಿದ್ದಾರೆ. ಅವರ ಬದುಕು ವಿದ್ಯಾರ್ಥಿಗಳಿಗೆ ಆದರ್ಶವಾಗಲಿ. ವಿದ್ಯಾರ್ಥಿಗಳು ತಮ್ಮ ಶ್ರಮದ ಹಿಂದೆ ತಂದೆ-ತಾಯಿ ಶಿಕ್ಷಕರ ಶ್ರಮ ಅಡಗಿದೆ ಎಂಬುದನ್ನು ಅರಿತು ಬಾಳಬೇಕು.
— ಡಾ.ಸುಧಾಕರ ಶೆಟ್ಟಿ, ಅಧ್ಯಕ್ಷ, ಅಜೆಕಾರು ಪದ್ಮಗೋಪಾಲ್‌ಎಜುಕೇಶನ್ ಟ್ರಸ್ಟ್