ಬೈಂದೂರು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಕೊಡುಗೆಯಾಗಿ ನೀಡಿದ ಜನರೇಟರ್ ಹಸ್ತಾಂತರಿಸಲಾಯಿತು. ಬ್ಯಾಂಕ್‌ನ ಪ್ರಾದೇಶಿಕ ಕಚೇರಿ ಮುಖ್ಯಸ್ಥ ಅಶೋಕ ಭಾಂಡಗೆ, ಕಾಲೇಜು ಪ್ರಾಂಶುಪಾಲ ವೆಂಕಟರಮಣ ಮೊದಲಾದವರಿದ್ದರು. 
ಉಡುಪಿ

ಪರಿಶ್ರಮದಿಂದ ಗುರಿ ಸಾಧನೆ ಸಾಧ್ಯ

ಇಂದಿರಾ ಎನ್ ಕೆ
ಬೈಂದೂರು: ಶಾಲಾ ಕಾಲೇಜುಗಳೆಂದರೆ ವಿದ್ಯಾರ್ಥಿಗಳನ್ನು ಉತ್ತಮ ನಾಗರಿಕರನ್ನಾಗಿಸುವ, ಕತ್ತಲಿನಿಂದ ಬೆಳಕಿನೆಡೆಗೆ ಕೊಂಡೊಯ್ಯುವ ಸಂಸ್ಥೆಗಳು. ವಿದ್ಯಾರ್ಥಿಗಳು ನಿಶ್ಚಿತ ಗುರಿಯನ್ನು ಇಟ್ಟುಕೊಂಡು ಪರಿಶ್ರಮದಿಂದ ಓದಿ ಸಾಧನೆ ಮಾಡಬೇಕು ಎಂದು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಪ್ರಾದೇಶಿಕ ಕಚೇರಿ ಮುಖ್ಯಸ್ಥ ಅಶೋಕ ಭಾಂಡಗೆ ಹೇಳಿದರು.
ಬೈಂದೂರು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಬ್ಯಾಂಕ್ ವತಿಯಿಂದ ಕೊಡುಗೆಯಾಗಿ ನೀಡಿದ 2.4 ಕಿಲೋ ವಾಟ್ ಸಾಮರ್ಥ್ಯದ 1.2 ಲಕ್ಷ ರೂ.ವೆಚ್ಚದ ಜನರೇಟರ್ ಹಸ್ತಾಂತರಿಸಿ ಮಾತನಾಡಿದರು. ಪ್ರತಿಭಾವಂತ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸದಾ ಬೆಂಬಲವಾಗಿ ಇರುತ್ತದೆ ಎಂದರು.
ಕಾಲೇಜು ಪ್ರಾಂಶುಪಾಲ ವೆಂಕಟರಮಣ ಅಧ್ಯಕ್ಷತೆ ವಹಿಸಿದ್ದರು. ಪಟ್ಟಣ ಪಂಚಾಯಿತಿ ನಾಮನಿರ್ದೇಶಿತ ಸದಸ್ಯ ಸದಾಶಿವ ಪಡುವರಿ ಮಾತನಾಡಿದರು. ಎಸ್‌ಡಿಎಂಸಿ ಉಪಾಧ್ಯಕ್ಷ ರಾಜಶೇಖರ ದೇವಾಡಿಗ, ಶಾಖಾ ಪ್ರಬಂಧಕ ಆತ್ರೇಯ ಪ್ರಭು, ಉಪಪ್ರಬಂಧಕ ಗಣಪತಿ ಭಟ್, ಉಪ ಪ್ರಾಂಶುಪಾಲ ಪದ್ಮನಾಭ, ಲೇಖಕ, ಮಾಜಿ ಯೋಧ ಬೈಂದೂರು ಚಂದ್ರಶೇಖರ ನಾವಡ ಮತ್ತಿತರರು ಉಪಸ್ಥಿತರಿದ್ದರು. ಶಿಕ್ಷಕ ದತ್ತಾತ್ರೇಯ ಭಟ್ ಮತ್ತು ರವೀಂದ್ರ ಪಿ. ಅವರನ್ನು ಸನ್ಮಾನಿಸಲಾಯಿತು. ಉಪನ್ಯಾಸಕರಾದ ಡಾ.ಚಂದ್ರಶೇಖರ್ ಮೊಗೇರ ಸ್ವಾಗತಿಸಿದರು. ಹರೀಶ್ ಕೋಟ್ಯಾನ್ ವಂದಿಸಿದರು.