ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ ಬೃಹತ್ ಪಾದಯಾತ್ರೆ ಬಳಿಕ ನಡೆದ ಧಾರ್ಮಿಕ ಸಭೆ ಕದ್ರಿ ಶ್ರೀ ಮಂಜುನಾಥೇಶ್ವರ ಕ್ಷೇತ್ರದ ಪ್ರಧಾನ ಅರ್ಚಕ ಕೃಷ್ಣ ಅಡಿಗ ಉದ್ಘಾಟಿಸಿದರು. ವಿಎಚ್‌ಪಿ ದಕ್ಷಿಣ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್‌ವೆಲ್, ಉಳ್ಳಾಲ ನಗರ ಪ್ರಖಂಡ ಅಧ್ಯಕ್ಷ ನಾರಾಯಣ ಕುಂಪಲ ಉಪಸ್ಥಿತರಿದ್ದರು. 
ಉಡುಪಿ

ದೈವ-ದೇವರಿಗೆ ಆಡಂಭರದ ಆಚರಣೆ ಅನಗತ್ಯ

ವಿಜಯವಾಣಿ ಸುದ್ದಿಜಾಲ ಉಳ್ಳಾಲ
ದೈವ, ದೇವರಿಗೆ ಸಾಲ ಮಾಡಿ ವಿಜೃಂಬಣೆ, ಆಡಂಭರಗಳ ಉತ್ಸವ, ಆಚರಣೆಗಳ ಬದಲು ನಮ್ಮಲ್ಲಿ ಇದ್ದುದನ್ನಷ್ಟೇ ಭಕ್ತಿಯಿಂದ ಸಮರ್ಪಿಸಿದರೆ ಸಾಕು. ಕೊಡು ಕೊಳ್ಳುವಿಕೆಯನ್ನು ಜೀವನದಲ್ಲಿ ಅನುಸರಿಸಿದರೆ ನಮ್ಮ ಬದುಕು ಸಾಕಾರಗೊಳ್ಳಲು ಸಾಧ್ಯ ಎಂದು ಕದ್ರಿ ಶ್ರೀ ಮಂಜುನಾಥೇಶ್ವರ ಕ್ಷೇತ್ರದ ಪ್ರಧಾನ ಅರ್ಚಕ ಕೃಷ್ಣ ಅಡಿಗ ಹೇಳಿದರು.
ವಿಶ್ವ ಹಿಂದೂ ಪರಿಷತ್ ಉಳ್ಳಾಲ ಪ್ರಖಂಡ ವತಿಯಿಂದ ಹಿಂದು ಸಮಾಜದ ಐಕ್ಯತೆ ಮತ್ತು ಲೋಕ ಕಲ್ಯಾಣಾರ್ಥ ಮಂಗಳೂರಿನ ಕದ್ರಿ ಮಂಜುನಾಥೇಶ್ವರ ಕ್ಷೇತ್ರದಿಂದ ಕುತ್ತಾರು ದೆಕ್ಕಾಡುವಿನ ಕೊರಗಜ್ಜನ ಆದಿಕ್ಷೇತ್ರಕ್ಕೆ ಭಾನುವಾರ 6ನೇ ವರ್ಷದ ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ ಬೃಹತ್ ಪಾದಯಾತ್ರೆ ಬಳಿಕ ಆಯೋಜಿಸಲಾದ ಧಾರ್ಮಿಕ ಸಭೆ ಉದ್ಘಾಟಿಸಿ ಮಾತನಾಡಿದರು.
ವಿಶ್ವ ಹಿಂದೂ ಪರಿಷತ್ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಮಾತನಾಡಿದರು. ಉಳ್ಳಾಲ ನಗರ ಪ್ರಖಂಡ ಅಧ್ಯಕ್ಷ ನಾರಾಯಣ ಕುಂಪಲ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಕೆ.ಜಯರಾಮ ಶೆಟ್ಟಿ, ಪ್ರಮುಖರಾದ ಬೊಲ್ಯಗುತ್ತು ವಿನೋದ್ ಶೆಟ್ಟಿ, ರತ್ನಾಕರ ಕಾವ ಕುತ್ತಾರುಗುತ್ತು, ದೇವಿಪ್ರಸಾದ್ ಶೆಟ್ಟಿ ಮಾಗಣತ್ತಡಿ, ವಿಹಿಂಪ ಸಹ ಸೇವಾ ಪ್ರಮುಖರಾದ ಗೋಪಾಲ ಕುತ್ತಾರು, ವಿಹಿಂಪ ಬಜರಂಗದಳ ದಕ್ಷಿಣ ಪ್ರಾಂತ ಸಹಸಂಯೋಜಕ ಭುಜಂಗ ಕುಲಾಲ್, ವಿಹಿಂಪ ಸಹಕಾರ್ಯದರ್ಶಿ ಶಿವಾನಂದ ಮೆಂಡನ್ ಮೊದಲಾದವರು ಉಪಸ್ಥಿತರಿದ್ದರು. ನಮ್ಮ ನಡೆ ಆಯೋಜನಾ ಸಮಿತಿಯ ಅಧ್ಯಕ್ಷ ಪ್ರವೀಣ್ ಕುತ್ತಾರ್ ಸ್ವಾಗತಿಸಿದರು. ಪ್ರವೀಣ್ ಬಸ್ತಿ ವಂದಿಸಿದರು. ಆಶಿಕ್ ಗೋಪಾಲಕೃಷ್ಣ ನಿರೂಪಿಸಿದರು.