ಅತಿಕಾರಿಬೆಟ್ಟು ಹಾಲು ಉತ್ಪಾದಕರ ಸಹಕಾರಿ ಸಂಘ ವಾರ್ಷಿಕ ಸಭೆ ನಡೆಯಿತು. ದ.ಕ. ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ಸರೋಜಿನಿ, ಅತಿಕಾರಿಬೆಟ್ಟು ಹಾಲು ಉತ್ಪಾದಕರ ಸಹಕಾರಿ ಸಂಘ ಅಧ್ಯಕ್ಷ ಗಂಗಾಧರ ಶೆಟ್ಟಿ ಬರ್ಕೆತೋಟ ಮೊದಲಾದವರಿದ್ದರು.
ಮೂಲ್ಕಿ: ಹೈನುಗಾರಿಕೆಯನ್ನು ಸ್ವಚ್ಛತೆ ಹಾಗೂ ಪ್ರಾಮಾಣಿಕತೆಯಿಂದ ಸರಿಯಾದ ರೀತಿಯಲ್ಲಿ ನಡೆಸಿಕೊಂಡು ಬಂದರೆ ಉತ್ತಮ ಲಾಭದಾಯಕವಾಗಿ ಸಂಘದ ಅಭಿವೃದ್ಧಿಗೂ ಪೂರಕವಾಗಲಿದೆ ಎಂದು ಅತಿಕಾರಿಬೆಟ್ಟು ಹಾಲು ಉತ್ಪಾದಕರ ಸಹಕಾರಿ ಸಂಘ ಅಧ್ಯಕ್ಷ ಗಂಗಾಧರ ಶೆಟ್ಟಿ ಬರ್ಕೆತೋಟ ಹೇಳಿದರು.
ಅತಿಕಾರಿಬೆಟ್ಟು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ದಕ್ಷಿಣ ಕನ್ನಡ ಜಿಲ್ಲಾ ಹಾಲು ಒಕ್ಕೂಟದ ಉಪ ವ್ಯವಸ್ಥಾಪಕ ಜಾನೆಟ್ ರೊಜಾರಿಯೋ ಮಾತನಾಡಿದರು.
ದಕ ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ಸರೋಜಿನಿ, ಅತಿಕಾರಿಬೆಟ್ಟು ಹಾಲು ಉತ್ಪಾದಕರ ಸಹಕಾರಿ ಸಂಘ ಉಪಾಧ್ಯಕ್ಷೆ ಪ್ಲೇವಿ ಡಿಸೋಜ, ನಿರ್ದೇಶಕರಾದ ಕೃಷ್ಣ ಆರ್.ಶೆಟ್ಟಿ, ಹರೀಶ್ ಶೆಟ್ಟಿ, ಗಂಗಾಧರ ದೇವಾಡಿಗ, ವೆಂಕಟೇಶ, ಹೇಮಂತ ಶೆಟ್ಟಿ, ದಯಾನಂದ ರಾವ್, ಪ್ರವೀಣ, ಪ್ರತಿಭಾ ಡಿ.ಶೆಟ್ಟಿ, ಸಂಧ್ಯಾ, ಕಾರ್ಯನಿರ್ವಹಣಾಧಿಕಾರಿ ಕಿಶೋರ್ ಎಸ್., ಅತಿಕಾರಿಬೆಟ್ಟು ಪಂಚಾಯಿತಿ ಮಾಜಿ ಅಧ್ಯಕ್ಷ ಮನೋಹರ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯನಿರ್ವಹಣಾಧಿಕಾರಿ ಕಿಶೋರ್ ಸ್ವಾಗತಿಸಿದರು. ವೆಂಕಟೇಶ ವಂದಿಸಿದರು.
ಸಾಧಕರಿಗೆ ಸನ್ಮಾನ
ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಹಾಗೂ ಕಳೆದ ಸಾಲಿನಲ್ಲಿ ಸಂಘಕ್ಕೆ ಅತ್ಯಧಿಕ ಹಾಲು ಹಾಕಿದ ರಾಕೇಶ್ ಕಾಮತ್ ವೆಂಕಟರಮಣ ದೇವಸ್ಥಾನ (ಪ್ರಥಮ), ಲವಿಜಾ ಜೇನ್ ಡಿಸೋಜ (ದ್ವಿ) ಹಾಗೂ ದಯಾನಂದ ರಾವ್ (ತೃತಿಯ) ಹಾಗೂ ವಿಶೇಷ ಗುಣಮಟ್ಟದ ಹಾಲು ನೀಡಿದ ಶಾಂಭವಿ ಶೆಟ್ಟಿ ಅವರನ್ನು ಗೌರವಿಸಲಾಯಿತು.