ಜಾನಪದ ಪರಿಷತ್ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ನಾಟಿ ವೈದ್ಯೆ ಗುಲಾಬಿ ಹಾಗೂ ಸಮಾಜ ಸೇವಕಿ ಶಶಿಕಲಾ ಡಿ.ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಪ್ರಮುಖರಾದ ಮುದ್ರಾಡಿ ಮಂಜುನಾಥ್ ಪೂಜಾರಿ, ಡಾ.ಗಣೇಶ್ ಗಂಗೊಳ್ಳಿ ಮೊದಲಾದವರಿದ್ದರು.
ಹೆಬ್ರಿ: ಜಾನಪದ ನಮ್ಮ ನಾಡಿನ ಮಣ್ಣಿನ ಸೊಗಡಾಗಿದೆ. ಅದನ್ನು ಮುಂದಿನ ತಲೆಮಾರಿಗೆ ಪರಿಚಯಿಸಬೇಕಿದೆ. ತುಳುನಾಡಿನ ಕಂಬಳ ಸೇರಿದಂತೆ ವಿವಿಧ ಜನಪದ ಕಲೆಗಳಿಗೆ ಸರ್ಕಾರ ಅನುದಾನ ನೀಡುವ ಕೆಲಸ ಮಾಡುತ್ತಿದೆ ಎಂದು ರಾಜ್ಯ ಸರ್ಕಾರದ ನಾರಾಯಣ ಗುರು ಅಭಿವೃದ್ಧಿ ನಿಗಮ ಅಧ್ಯಕ್ಷ ಮುದ್ರಾಡಿ ಮಂಜುನಾಥ್ ಪೂಜಾರಿ ಹೇಳಿದರು.
ಕನ್ನಡ ಜಾನಪದ ಪರಿಷತ್ ಬೆಂಗಳೂರು ಉಡುಪಿ ಜಿಲ್ಲಾ ಘಟಕದ ವತಿಯಿಂದ ಮುದ್ರಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಭಾಂಗಣದಲ್ಲಿ ಜಾನಪದ ಪರಿಷತ್ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ ಡಾ.ಗಣೇಶ್ ಗಂಗೊಳ್ಳಿ ಅಧ್ಯಕ್ಷತೆ ವಹಿಸಿದ್ದರು. ಜನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ನಾಟಿ ವೈದ್ಯೆ ಗುಲಾಬಿ, ಸಮಾಜ ಸೇವಕಿ ಶಶಿಕಲಾ ಡಿ.ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಶ್ರೀ ಕ್ರೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೇಲ್ವಿಚಾರಕ ಉಮೇಶ್, ಪ್ರಮುಖರಾದ ಸಂತೋಷ್ ಕುಮಾರ್ ಶೆಟ್ಟಿ, ಮಮತಾ, ಅಮಿತಾ ಭಂಡಾರಿ, ಸನತ್ ಕುಮಾರ್ ಉಪಸ್ಥಿತರಿದ್ದರು. ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು ಕಾರ್ಯಕ್ರಮ ನಿರೂಪಿಸಿದರು.