ಕುಂದಾಪುರದಲ್ಲಿ ಸರ್ಕಾರಿ ಜಾಗವನ್ನು ದುರ್ಬಳಕೆ ಮಾಡಿ ಕಾಂಗ್ರೆಸ್ ಪಕ್ಷದ ಕಚೇರಿ ಕಟ್ಟಡ ನಿರ್ಮಾಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ಕುಂದಾಪುರ ಶಾಸಿ ಸರ್ಕಲ್ ಬಳಿ ಪ್ರತಿಭಟನೆ ನಡೆಯಿತು. ಪ್ರಮುಖರಾದ ನವೀನ್ ಶೆಟ್ಟಿ, ಶಂಕರ, ರಾಜೇಶ ಕಾವೇರಿ ಮತ್ತಿತರರಿದ್ದರು.
- ಸಂಸದ ಕೋಟ ಶ್ರೀನಿವಾಸ ಪೂಜಾರಿ ಖಂಡನೆ
- ಕುಂದಾಪುರ ಶಾಸ್ತ್ರೀ ಸರ್ಕಲ್ ಬಳಿ ಪ್ರತಿಭಟನೆ
- ರಾಜ್ಯ ಸರ್ಕಾರದ ಧೋರಣೆಗೆ ಆಕ್ರೋಶ
ವಿಜಯವಾಣಿ ಸುದ್ದಿಜಾಲ ಕುಂದಾಪುರ
ನಗರದಲ್ಲಿ ಪಾರ್ಕಿಂಗ್ ವ್ಯವಸ್ಥೆ ಸಮಸ್ಯೆಯಲ್ಲಿದ್ದು, ಬಹುಮಹಡಿ ಆಧಾರದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡುವ ಬಗ್ಗೆ ಮತ್ತು ಕುಂದಾಪುರ ನಗರದಲ್ಲಿ ಅಗ್ನಿಶಾಮಕ ದಳ ಕೇಂದ್ರ ಸ್ಥಾಪನೆಗೆ ಗುರುತಿಸಿದ ಜಾಗವನ್ನು ರಾಜಕೀಯ ಪಕ್ಷವೊಂದರ ಕಚೇರಿಗೆ ಉಪಯೋಗಕ್ಕೆ ನೀಡಿರುವುದು ಖಂಡನೀಯ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಆಗ್ರಹಿಸಿದರು.
ಕುಂದಾಪುರ ಶಾಸ್ತ್ರೀ ಸರ್ಕಲ್ ಬಳಿ ಪ್ರತಿಭಟನೆ
ಕುಂದಾಪುರದಲ್ಲಿ ಸರ್ಕಾರಿ ಜಾಗವನ್ನು ದುರ್ಬಳಕೆ ಮಾಡಿ ಕಾಂಗ್ರೆಸ್ ಪಕ್ಷದ ಕಚೇರಿ ಕಟ್ಟಡ ನಿರ್ಮಾಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ಭಾರತೀಯ ಜನತಾ ಪಕ್ಷ ಕುಂದಾಪುರ ಮಂಡಲ ವತಿಯಿಂದ ಕುಂದಾಪುರ ಶಾಸ್ತ್ರೀ ಸರ್ಕಲ್ ಬಳಿ ಬುಧವಾರ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.
ಸಾರ್ವಜನಿಕ ನ್ಯಾಯ ಒದಗಿಸಲು ಕೊಡ್ಗಿ ಆಗ್ರಹ
ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ನಗರ ಭಾಗದಲ್ಲಿ 0.11 ಎಕರೆ ಜಮೀನನ್ನು ಕಾಂಗ್ರೆಸ್ ಭವನ ಕಟ್ಟಡ ನಿರ್ಮಾಣದ ಉದ್ದೇಶಕ್ಕಾಗಿ ಕಾಂಗ್ರೆಸ್ ಭವನ ಟ್ರಸ್ಟ್ ಬೆಂಗಳೂರು ಹೆಸರಿನಲ್ಲಿ ಮಂಜೂರು ಮಾಡಿರುವ ಆದೇಶ ರದ್ದು ಪಡಿಸಿ ಸಾರ್ವಜನಿಕ ನ್ಯಾಯ ಒದಗಿಸಬೇಕು ಎಂದರು.
ಭಾಗವಹಿಸಿದ್ದರು ಯಾರಾರು...?
ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ನವೀನ್ ಶೆಟ್ಟಿ, ಬಿಜೆಪಿ ಕುಂದಾಪುರ ಮಂಡಲ ಮಾಜಿ ಅಧ್ಯಕ್ಷ ಶಂಕರ ಅಂಕದಕಟ್ಟೆ, ರಾಜೇಶ ಕಾವೇರಿ, ಬಿಜೆಪಿ ಮುಖಂಡರಾದ ಸುರೇಶ ಶೆಟ್ಟಿ, ಶ್ರೀಕಾಂತ ನಾಯಕ್, ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಪೃಥ್ವೀರಾಜ್ ಶೆಟ್ಟಿ, ವಿಟ್ಠಲ ಪೂಜಾರಿ, ಸುನೀಲ್ ಶೆಟ್ಟಿ, ಬಾರ್ಕೂರು ಶಾಂತಾರಾಮ ಶೆಟ್ಟಿ, ಮೋಹನದಾಸ ಶೆಣೈ, ಪ್ರಭಾಕರ ವಿ., ಗುಣರತ್ನಾ, ಅಶೋಕ ಪೂಜಾರಿ, ಭಾಸ್ಕರ ಬಿಲ್ಲವ, ಸುಧೀರ ಕೆ.ಎಸ್., ಸತೀಶ ಪೂಜಾರಿ ಪಾಲ್ಗೊಂಡಿದ್ದರು.
ಕುಂದಾಪುರ ತಹಸೀಲ್ದಾರ್ಗೆ ಮನವಿ ಸಲ್ಲಿಕೆ
ಕುಂದಾಪುರದಲ್ಲಿ ಸರ್ಕಾರಿ ಜಾಗವನ್ನು ದುರ್ಬಳಕೆ ಮಾಡಿ ಕಾಂಗ್ರೆಸ್ ಪಕ್ಷದ ಕಚೇರಿ ಕಟ್ಟಡ ನಿರ್ಮಾಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ಕುಂದಾಪುರ ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್ ಅವರಿಗೆ ಬಿಜೆಪಿ ನಿಯೋಗ ಮನವಿ ಸಲ್ಲಿಸಲಾಯಿತು. ಬಳಿಕ ಕುಂದಾಪುರ ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್ ಅವರಿಗೆ ಮನವಿ ಸಲ್ಲಿಸಲಾಯಿತು. ಬಿಜೆಪಿ ಮಂಡಲ ಅಧ್ಯಕ್ಷ ಸುರೇಶ ಶೆಟ್ಟಿ ಸ್ವಾಗತಿಸಿ, ವಂದಿಸಿದರು.