ಉಡುಪಿ

ಸರ್ಕಾರಿ ಶಾಲೆ ಮುಖ್ಯಶಿಕ್ಷಕ ಅಮಾನತು

ಕರ್ತವ್ಯ ಲೋಪ, ಹಣಕಾಸು ವ್ಯವಹಾರಗಳಲ್ಲಿ ನಿಯಮ ಉಲ್ಲಂಘನೆ ಆರೋಪ

ಬೈಂದೂರು: ಕರ್ತವ್ಯ ಲೋಪ ಹಾಗೂ ಹಣಕಾಸು ವ್ಯವಹಾರಗಳಲ್ಲಿನ ನಿಯಮ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಬಾಡ ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಗಿರೀಶ ಮೇಸ್ತ ಅವರನ್ನು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.

ಶಾಲೆಯ ಸರ್ಕಾರಿ ಹಾಗೂ ಸರ್ಕಾರೇತರ ಖಾತೆಗಳ ಹಣಕಾಸು ವ್ಯವಹಾರಗಳಲ್ಲಿ ದುರುಪಯೋಗದ ಆರೋಪ, ಖರ್ಚು ವೆಚ್ಚಗಳಿಗೆ ಸಂಬಂಧಿಸಿದ ವೋಚರ್ ಮತ್ತು ರಶೀದಿಗಳನ್ನು ಸಮರ್ಪಕವಾಗಿ ನಿರ್ವಹಿಸದಿರುವುದು ಹಾಗೂ ಸರ್ಕಾರಿ ಅನುದಾನಗಳ ವೆಚ್ಚದಲ್ಲಿ ಖರೀದಿ ನಿಯಮಗಳನ್ನು ಉಲ್ಲಂಘಿಸಿರುವ ಕುರಿತು ಶಿವರಾಜ್ ಎಂಬುವರು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಇಲಾಖೆಯು ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಪರಿಶೀಲನೆ ನಡೆಸಿ ವರದಿ ಪಡೆದು ಕ್ರಮ ಕೈಗೊಂಡಿದೆ.