ಬೈಂದೂರು ತಾಪಂ ಸಭಾಂಗಣದಲ್ಲಿ ಗುರುವಾರ ಗ್ಯಾರಂಟಿ ಅನುಷ್ಠಾನ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಅಧ್ಯಕ್ಷ ಮೋಹನ ಪೂಜಾರಿ, ತಾಪಂ ಸಿಇಒ ರಾಮದಾಸ ಇದ್ದರು.
ವಿಜಯವಾಣಿ ಸುದ್ದಿಜಾಲ ಬೈಂದೂರು
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯನ್ನು ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ತಲುಪಿಸಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯವಾಗಿದ್ದು, ಇದಕ್ಕೆ ಅಧಿಕಾರಿಗಳ ಸಹಕಾರ ಅಗತ್ಯ. ಸರ್ಕಾರದ ಯೋಜನೆಯಿಂದ ಯಾರೊಬ್ಬರೂ ವಂಚಿತರಾಗದಂತೆ ಶ್ರಮ ವಹಿಸಬೇಕಿದೆ ಎಂದು ಬೈಂದೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮೋಹನ ಪೂಜಾರಿ ಹೇಳಿದರು.
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಗ್ಯಾರಂಟಿ ಅನುಷ್ಠಾನ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ವಾತನಾಡಿದರು.
ಬೈಂದೂರು ತಾಲೂಕಿನ ಯಡ್ತರೆಯಲ್ಲಿ ಸುಸಜ್ಜಿತವಾದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣವಾಗಿದ್ದರೂ ಸರ್ವೀಸ್ ರಸ್ತೆ ಆಗದ ಕಾರಣ ಉಡುಪಿ ಭಾಗದ ಬಸ್‌ಗಳು ನಿಲ್ದಾಣಕ್ಕೆ ಬಾರದೆ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದೆ. ಇದಕ್ಕೆ ಸೂಕ್ತ ಕ್ರಮ ವಹಿಸಲು ಈಗಾಗಲೇ ಕೆಎಸ್‌ಆರ್‌ಟಿಸಿ ಡಿಸಿ ಗಮನಕ್ಕೆ ತರಲಾಗಿದೆ. ಜಿಲ್ಲಾಧಿಕಾರಿಗಳಿಗೂ ಮನವಿ ವಾಡಲಾಗಿದೆ. ಎಲ್ಲ ಬಸ್‌ಗಳು ನಿಲ್ದಾಣಕ್ಕೆ ಬರುವಂತೆ ಹೆಚ್ಚಿನ ಕ್ರಮ ವಹಿಸಲು ಸೂಚಿಸಿದರು.
ಪರ್ಮಿಟ್ ಹೊಂದಿದ್ದರೂ ಕೆಎಸ್‌ಆರ್‌ಟಿಸಿ ಬಸ್ ಸೇವೆ ಸ್ಥಗಿತಗೊಳಿಸಿ ತಾಲೂಕು ವ್ಯಾಪ್ತಿಯ ಗ್ರಾಮೀಣ ಭಾಗಗಳ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳಿಗೆ ಗ್ಯಾರಂಟಿ ಸಮಿತಿಯ ನಿರಂತರ ಒತ್ತಡದ ಫಲವಾಗಿ ಬೆಳಗ್ಗೆ ಬಸ್ ವ್ಯವಸ್ಥೆ ವಾಡಲಾಗಿದೆ. ಆದರೆ ಮಧ್ಯಾಹ್ನ ಸಮಸ್ಯೆ ಎದುರಿಸುತ್ತಿದ್ದಾರೆ. ಮಧ್ಯಾಹ್ನ 3ರ ಸಮಯದಲ್ಲಿಯೂ ಬಸ್ ವ್ಯವಸ್ಥೆ ಒದಗಿಸಲು ಕ್ರಮ ಕೈಗೊಳ್ಳುವಂತೆ ಮತ್ತು ಬೈಂದೂರು ಕೇಂದ್ರಿತವಾಗಿ ಸಿರಸಿ, ಉಡುಪಿ, ಮಂಗಳೂರು, ಹಾಸನ ವಾರ್ಗಕ್ಕೆ ನೂತನವಾಗಿ ಎಸಿ/ ನಾನ್ ಎಸಿ ಬಸ್ ಒದಗಿಸಲು ಪತ್ರ ಬರೆದು, ಫಾಲೋಅಪ್ ವಾಡಲು ಸೂಚಿಸಿದರು.
ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಮದಾಸ್, ಸಮಿತಿ ಸದಸ್ಯರಾದ ವಾಲತಿ ಶಿವಾನಂದ, ಅನೀಶ್ ಪೂಜಾರಿ, ಸೂರ್ಯಕಾಂತಿ, ದೇವದಾಸ್ ವಿ.ಜೆ., ಬಾಬು ದೇವಾಡಿಗ, ಮುಕ್ರಿ ಮೊಹಮ್ಮದ್ ಅಲ್ತಾಫ್, ಪ್ರಭಾಕರ ನಾಯ್ಕ, ಅಣ್ಣಪ್ಪ ಶೆಟ್ಟಿ, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.